Home namma chikmagalur chikamagalur ರಾಂಪುರದ ಶ್ರೀನಿವಾಸನಗರದಲ್ಲಿ ಬೈಕ್‌ ಡಿಕ್ಕಿಗೆ ಪಾದಚಾರಿ ಸಾವು
chikamagalurCrime NewsHomeLatest Newsnamma chikmagalur

ರಾಂಪುರದ ಶ್ರೀನಿವಾಸನಗರದಲ್ಲಿ ಬೈಕ್‌ ಡಿಕ್ಕಿಗೆ ಪಾದಚಾರಿ ಸಾವು

Share
Share

ಚಿಕ್ಕಮಗಳೂರು: ನಗರದ ರಾಂಪುರದ ಶ್ರೀನಿವಾಸನಗರದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಶಿವಕುಮಾ‌ರ್ ಎಂಬ ಕಾರ್ಮಿಕನಿಗೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.

ಆದಿಶಕ್ತಿನಗರದಿಂದ ರಾಂಪುರದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಎದುರಿನಿಂದ ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಬಂದ ಬೈಕ್ ಸವಾರ ನೇರವಾಗಿ ಶಿವಕುಮಾರ್ ಅವರಿಗೆ ಡಿಕ್ಕಿ ಹೊಡೆದು, ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಶಿವಕುಮಾರ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಸ್ಥಳೀಯರು ಕೂಡಲೇ ಅವರನ್ನು ಚಿಕ್ಕಮಗಳೂರು ಸರ್ಕಾರಿ ಎಂ.ಜಿ. ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಮುಂದುವರಿದರೂ, ಚಿಕಿತ್ಸೆಗೆ ಸ್ಪಂದಿಸದೆ ಬೆಳಗಿನ ಜಾವ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಪಘಾತವೆಸಗಿ ಪರಾರಿಯಾಗಿರುವ ಬೈಕ್ ಸವಾರನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತು ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Pedestrian dies in bike collision in Srinivasanagar Rampur

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೧೨.೨೫೦ ಕೆ.ಜಿ. ತೂಕದ ಹಸಿ ಗಾಂಜಾವನ್ನು ತರೀಕೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಎಸ್‌ಐ ಆನಂದ್ ಡಿ....

ಪತ್ನಿ ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹75 ಸಾವಿರ ದಂಡ...

Related Articles

ದೇಶವಿರೋಧಿ ಮನಸ್ಥಿತಿ ವಿರುದ್ಧ ಕಠಿಣ ಕ್ರಮ ಅಗತ್ಯ

ಮೂಡಿಗೆರೆ : ಕಾಫಿನಾಡಿನ ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿ ವೈರಲ್ ಮಾಡಿದ್ದ ಪ್ರಕರಣಕ್ಕೆ...

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು...

ಸಿ.ಎಸ್. ಸುಮಿತ್ರಾಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕರ ವಿಶೇಷ ಪ್ರಶಸ್ತಿ

ಚಿಕ್ಕಮಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆಗಳನ್ನು ಉಳಿಸಿ, ಅವುಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವಲ್ಲಿ...