Home namma chikmagalur chikamagalur ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿ-ಮಹಿಳೆ ಸಾವು
chikamagalurHomeLatest Newsnamma chikmagalur

ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿ-ಮಹಿಳೆ ಸಾವು

Share
Share

ಎನ್.ಆ‌ರ್.ಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಕರನ್ನು ಮಾತನಾಡಿಸಿಕೊಂಡು ಊರಿಗೆ ಮರಳುತ್ತಿದ್ದ ಕುಟುಂಬಕ್ಕೆ ಮಾರ್ಗಮಧ್ಯೆಯೇ ಭೀಕರ ವಿಧಿ ಅಪ್ಪಳಿಸಿದ್ದು, ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಮನಕಲಕುವ ಘಟನೆ ಬಾಳೆಹೊನ್ನೂರು ಸಮೀಪದ ಕಾರ್ಗದ್ದೆ ಹಳ್ಳದ ಬಳಿ ಸಂಭವಿಸಿದೆ.

ಶೃಂಗೇರಿ ತಾಲೂಕಿನ ಮಸಿಗೆ ಗ್ರಾಮದ ನಿವಾಸಿಗಳಾದ ಶ್ರೀನಿವಾಸ, ಅವರ ಪತ್ನಿ ಸುಮಾ (57) ಹಾಗೂ ಕೃಷ್ಣ ಎಂಬುವವರು ಕುಹಡ್ಲುವಿನಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂಬಂಧಿಕರನ್ನು ನೋಡಲು ಬಾಳೆಹೊನ್ನೂರಿಗೆ ತೆರಳಿದ್ದರು. ರಾತ್ರಿ 9 ಗಂಟೆಯ ಸುಮಾರಿಗೆ ಪ್ರಭಾಕರ್ ಎಂಬುವವರ ಆಟೋ ರಿಕ್ಷಾದಲ್ಲಿ ವಾಪಸ್ ಊರಿಗೆ ಪ್ರಯಾಣಿಸುತ್ತಿದ್ದಾಗ, ಕಾರ್ಗದ್ದೆ ಹಳ್ಳದ ಸಮೀಪ ಚಾಲಕನ ದುಡುಕುತನ ಹಾಗೂ ಅತಿಯಾದ ವೇಗದಿಂದಾಗಿ ಆಟೋ ನಿಯಂತ್ರಣ ಕಳೆದುಕೊಂಡು ಏಕಾಏಕಿ ಚರಂಡಿಗೆ ಉರುಳಿಬಿದ್ದಿದೆ ಎಂದು ಪೊಲೀಸರಿಗೆ ನೀಡಲಾದ ದೂರಿನಲ್ಲಿ ಆರೋಪಿಸಲಾಗಿದೆ.

ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ತಲೆ ಹಾಗೂ ಮುಖಕ್ಕೆ ತೀವು ಪೆಟ್ಟು ಬಿದ್ದಿದ್ದ ಸುಮಾ ಅವರನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಕೊನೆಯುಸಿರೆಳೆದಿರುವುದಾಗಿ ಘೋಷಿಸಿದರು.

ಗಂಭೀರ ಸ್ಥಿತಿಯಲ್ಲಿದ್ದ ಶ್ರೀನಿವಾಸ ಹಾಗೂ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಪ್ರಭಾಕ‌ರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಕೃಷ್ಣ ಅವರ ದೂರಿನ ಆಧಾರದ ಮೇಲೆ ಚಾಲಕನ ನಿರ್ಲಕ್ಷ್ಯದ ವಿರುದ್ಧ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Woman dies after auto-rickshaw overturns after losing control

Share

Leave a comment

Leave a Reply

Your email address will not be published. Required fields are marked *

Don't Miss

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ ಕಾಂಪ್ಲೆಕ್ಸ್) ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು, 2027ರ ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಲೋಕಾರ್ಪಣೆಗೊಳ್ಳುವ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ...

Related Articles

ಸಮರ್ಪಕವಾಗಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಚಿಕ್ಕಮಗಳೂರು: ಸಖರಾಯಪಟ್ಟಣ ಸಮೀಪದ ಗ್ರಾಮಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು...

ಬೆಳವಾಡಿ ಕೆರೆಗೆ ಎತ್ತಿನಹೊಳೆ ನೀರು-ರೈತರಲ್ಲಿ ಸಂತಸ

ಚಿಕ್ಕಮಗಳೂರು: ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ...

`ನಾನು’ ಎಂಬುದನ್ನು ಬಿಟ್ಟು `ನಾವು’ ಎಂಬ ಮನೋಭಾವ ಬೆಳೆಸಿಕೊಳ್ಳಿ

ಚಿಕ್ಕಮಗಳೂರು: `ನಾನು ಮಾಡಿದ್ದು, ನಾನು ಮಾಡಿದ್ದು’ ಎನ್ನುವುದಕ್ಕಿಂತ `ನಾವು ಮಾಡಿದ್ದು’ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಜನರ...

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಬಾಳೆಹೊನ್ನೂರು ಬಂದ್ ಯಶಸ್ವಿ

ಬಾಳೆಹೊನ್ನೂರು: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ವಿವಿಧ ಪಕ್ಷಗಳ ಪ್ರತಿನಿಧಿಗಳು ಗುರುವಾರ ಪಟ್ಟಣ ಬಂದ್ ಕರೆ,...