Home namma chikmagalur chikamagalur ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ
chikamagalurHomeLatest Newsnamma chikmagalur

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

Share
Share

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿದಂತೆ ಪ್ರಮುಖ ಗಿರಿಧಾಮಗಳಿಗೆ ಹಬ್ಬದ ದಿನದಂದು ಪ್ರವಾಸಿಗರು ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.

ಗೌರಿ-ಗಣೇಶ ಚೌತಿ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳಿಂದ ಸಾವಿರಾರು ಭಕ್ತರು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಆಗಮಿಸಿ ಹಣ್ಣು-ಕಾಯಿ ಅರ್ಪಿಸುವುದು ಮತ್ತು ಚೌತಿ ಕಾಯಿ ಹೊಡೆಯುವ ಸಾಂಪ್ರದಾಯಿಕ ಆಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಆಚರಣೆ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದು, ಭಕ್ತರ ಧಾರ್ಮಿಕ ಕಾರ್ಯಕ್ರಮಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹಬ್ಬದ ದಿನದಂದು ಭಕ್ತರ ವಾಹನಗಳ ಜೊತೆಗೆ ಪ್ರವಾಸಿಗರ ವಾಹನಗಳ ಸಂಖ್ಯೆಯೂ ಹೆಚ್ಚಾದರೆ ಗಿರಿಧಾಮಗಳ ರಸ್ತೆಯಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಇದರಿಂದ ಭಕ್ತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಸೆಪ್ಟೆಂಬರ್ 14ರಂದು ಗಿರಿಧಾಮಗಳಿಗೆ ಪ್ರವಾಸ ಕೈಗೊಳ್ಳಲು ಯೋಜಿಸಿರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಬಂಧ ಜಾರಿಗೊಳಿಸಲಾಗಿದೆ.

Tourist entry to hill stations including Mullayanagiri restricted on September 14.

Share

Leave a comment

Leave a Reply

Your email address will not be published. Required fields are marked *

Don't Miss

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಬದುಕಿಗೆ ಮರಣ ಶಾಸನವಾಗುವ ಗುಟ್ಕಾ ಹಾಗೂ ಅಡಕೆ ನಿಷೇಧ ಪ್ರಸ್ತಾಪವನ್ನು...

ನೂತನ 24 ತಾಲ್ಲೂಕು ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಕಡೂರು ಇಲ್ಲ ….?

ಕಡೂರು: ಬರ ಘೋಷಣೆಯ ಮೊದಲ ಪಟ್ಟಿಯಲ್ಲಿ ಕಡೂರು ತಾಲ್ಲೂಕು ಕೈಬಿಡಲಾಗಿತ್ತು. ಇದೀಗ ಶುಕ್ರವಾರ ಕಡೂರು ಸೇರಿದಂತೆ 24 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಕಂದಾಯ ಇಲಾಖೆ ಅನುಮೋದಿಸಿ ಪಟ್ಟಿ ಬಿಡುಗಡೆ ಮಾಡಿದ್ದರೂ, ಚಿಕ್ಕಮಗಳೂರು...

Related Articles

ಸುಳ್ಳು ವಂಶವೃಕ್ಷ ಸೃಷ್ಟಿಸಿ ಆಸ್ತಿ ಲಪಟಾಯಿಸಲು ಯತ್ನ: ಐವರ ವಿರುದ್ಧ ಪ್ರಕರಣ

ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು...

ಜನಪರ ಕಾರ್ಯವೇ ನಿಜವಾದ ರಾಜಕಾರಣದ ಮಾನದಂಡ

ಚಿಕ್ಕಮಗಳೂರು: ಅಧಿಕಾರಕ್ಕಾಗಿ ನಾನು ರಾಜಕಾರಣಕ್ಕೆ ಬಂದವನಲ್ಲ, ಸಿದ್ಧಾಂತ ಹಾಗೂ ಜನಪರ ಕಾರ್ಯಗಳಿಗಾಗಿ ರಾಜಕಾರಣಕ್ಕೆ ಬಂದಿz್ದೆÃನೆ. ಅಧಿಕಾರಕ್ಕಿಂತ...

ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಕಳಸಾಪುರ ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ರೈತರು, ಬಡವರು, ವೃದ್ಧರು,...

ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ

ಚಿಕ್ಕಮಗಳೂರು: ಜನರ ಬದುಕಿನ ಸಮಸ್ಯೆಗಳಿಗೆ ಪರಿಹಾರ ದೊರಕಿಸಬೇಕು ಎಂಬ ಉದ್ದೇಶದಿಂದ ಹೋರಾಟ ನಡೆಸಲಾಗುತ್ತಿದೆ ಎಂದು ವಿಧಾನ...