ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ ನುಗ್ಗಿದ ಚಿರತೆಯೊಂದು ಯಾವುದೇ ಆತಂಕವಿಲ್ಲದೆ ನೀರು ಕುಡಿದು ಬಳಿಕ ಅಲ್ಲಿಂದ ಪರಾರಿಯಾಗಿರುವ ಘಟನೆ ಕಡೂರು ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.
ನಾರಾಯಣಪುರ ಗ್ರಾಮದ ಪ್ರಭಾಕರ್ ಎಂಬುವವರ ಮನೆಯ ಹಿಂಭಾಗಕ್ಕೆ ಚಿರತೆ ಬಂದಿದ್ದು, ಮನೆಯ ಆವರಣದಲ್ಲಿ ಓಡಾಡಿ ನೀರು ಕುಡಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಚಿರತೆ ಮನೆಯ ಸಮೀಪವೇ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಮತ್ತಷ್ಟು ಭಯ ಮೂಡಿಸಿದೆ.
ಈ ಭಾಗದಲ್ಲಿ ಪದೇಪದೇ ಚಿರತೆಗಳ ಸಂಚಾರ ಕಂಡುಬರುತ್ತಿರುವುದರಿಂದ ಜನರು ಜೀವಭಯದಲ್ಲೇ ದಿನ ಕಳೆಯುವಂತಾಗಿದೆ. ರಾತ್ರಿ ವೇಳೆ ಮನೆಗಳಿಂದ ಹೊರಬರಲು ಹಾಗೂ ಜಮೀನುಗಳಿಗೆ ತೆರಳಲು ಗ್ರಾಮಸ್ಥರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿರತೆ ಸಂಚಾರದಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಚಿರತೆಯ ಚಲನವಲನದ ಬಗ್ಗೆ ನಿಗಾ ವಹಿಸಬೇಕು. ಅಗತ್ಯ ಕ್ರಮ ಕೈಗೊಂಡು ಚಿರತೆಯನ್ನು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೂಡಿಗೆರೆ: ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ, ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೂಡಿಗೆರೆ ಪಟ್ಟಣದ ಕುರ್ಕಮಕ್ಕಿ ವಾರ್ಡ್ನಲ್ಲಿ ಸೆ.5ರಂದು ನಡೆದಿದೆ....
ByN Raju Chief EditorSeptember 6, 2026ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು ನೇಮಕ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಚುನಾವಣಾ ದಿನಾಂಕ ಘೋಷಣೆಯಷ್ಟೇ ಬಾಕಿ ಉಳಿದಿದೆ....
ByN Raju Chief EditorSeptember 6, 2026ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...
ByN Raju Chief EditorSeptember 13, 2026ಶೃಂಗೇರಿ: ಬ್ಯಾಂಕ್ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ...
ByN Raju Chief EditorSeptember 13, 2026ಕಡೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ...
ByN Raju Chief EditorSeptember 13, 2026ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು...
ByN Raju Chief EditorSeptember 13, 2026Excepteur sint occaecat cupidatat non proident
Leave a comment