Home namma chikmagalur chikamagalur ಗಮನ ಬೇರೆಡೆ ಸೆಳೆದು 40 ಗ್ರಾಂ ಚಿನ್ನದ ಸರ ಕಳ್ಳತನ
chikamagalurCrime NewsHomeLatest Newsnamma chikmagalur

ಗಮನ ಬೇರೆಡೆ ಸೆಳೆದು 40 ಗ್ರಾಂ ಚಿನ್ನದ ಸರ ಕಳ್ಳತನ

Share
Share

ಚಿಕ್ಕಮಗಳೂರು: ಬಸ್ ಹತ್ತುವ ವೇಳೆ ಉಂಟಾದ ನೂಕುನುಗ್ಗಲಿನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಂ ತೂಕದ, ₹6 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸಿಂಗಟಗೆರೆ ಸಮೀಪದ ಬಸವನಹಳ್ಳಿ ನಿವಾಸಿ ಕಮಲಮ್ಮ ಎಂಬವರು ಕಳ್ಳತನದ ಬಗ್ಗೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಕಮಲಮ್ಮ ಅವರು ತಮ್ಮ ಸಹೋದರನ ಆರಾಧನೆಗಾಗಿ ಸೆಪ್ಟೆಂಬರ್ 7ರಂದು ಚಿಕ್ಕಮಗಳೂರಿನ ಬೀಕನಹಳ್ಳಿ ಗ್ರಾಮಕ್ಕೆ ಬಂದಿದ್ದರು. ಆರಾಧನೆ ಮುಗಿಸಿಕೊಂಡ ಬಳಿಕ ಸೆಪ್ಟೆಂಬರ್ 9ರಂದು ಬೆಳಗ್ಗೆ ಸುಮಾರು 10.45ಕ್ಕೆ ತಮ್ಮ ಮಗಳೊಂದಿಗೆ ಲಿಂಗದಹಳ್ಳಿಗೆ ತೆರಳಲು ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು.

ಲಿಂಗದಹಳ್ಳಿ ಕಡೆಗೆ ತೆರಳುವ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಶಾಂತವೇರಿ ಕಡೆಗೆ ತೆರಳುವ ಬಸ್ ಬಂದಿದ್ದು, ಕಮಲಮ್ಮ ಹಾಗೂ ಅವರ ಮಗಳು ಬಸ್ ಹತ್ತಲು ಮುಂದಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದ ಹಿನ್ನೆಲೆಯಲ್ಲಿ ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿತ್ತು. ಸುಮಾರು 10ರಿಂದ 15 ಮಂದಿ ಏಕಕಾಲದಲ್ಲಿ ಬಸ್ ಹತ್ತಲು ಬಂದಿದ್ದ ಸಂದರ್ಭವನ್ನು ಕಳ್ಳರು ದುರುಪಯೋಗಪಡಿಸಿಕೊಂಡು ಕಮಲಮ್ಮ ಅವರ ಗಮನಕ್ಕೆ ಬಾರದಂತೆ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬಸ್ ಒಳಗೆ ಕುಳಿತ ಬಳಿಕ ಕಂಡಕ್ಟರ್ ವಿಚಾರಿಸಿದಾಗ ಲಿಂಗದಹಳ್ಳಿಗೆ ಹೋಗಬೇಕೆಂದು ತಿಳಿಸಿದಾಗ, ಆ ಬಸ್ ಲಿಂಗದಹಳ್ಳಿಗೆ ಹೋಗುವುದಿಲ್ಲ ಎಂದು ತಿಳಿಸಿದ್ದು, ಕಮಲಮ್ಮ ಹಾಗೂ ಅವರ ಮಗಳು ಬಸ್‌ನಿಂದ ಇಳಿದು ಮತ್ತೆ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಬಳಿಕ ಲಿಂಗದಹಳ್ಳಿ ಬಸ್ ಬಂದಾಗ ಅದರಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.

ಲಿಂಗದಹಳ್ಳಿಗೆ ತೆರಳುವ ಮಾರ್ಗಮಧ್ಯೆ ಕಮಲಮ್ಮ ಅವರು ತಮ್ಮ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಪರಿಶೀಲಿಸಿದಾಗ ಅದು ಕಾಣೆಯಾಗಿರುವುದು ಗೊತ್ತಾಗಿದೆ. ಹಲವು ಕಡೆ ಹುಡುಕಾಟ ನಡೆಸಿದರೂ ಸರ ಪತ್ತೆಯಾಗಿಲ್ಲ.

ನಂತರ ಕಮಲಮ್ಮ, ಅವರ ಮಗಳು ಹಾಗೂ ಸಂಬಂಧಿಕರು ಚಿಕ್ಕಮಗಳೂರು ನಗರ ಬಸ್ ನಿಲ್ದಾಣದಲ್ಲಿ ತಾವು ಓಡಾಡಿದ್ದ ಸ್ಥಳಗಳ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಬಳಿಕ ಸೆಪ್ಟೆಂಬರ್ 13ರಂದು ನಗರ ಪೊಲೀಸ್ ಠಾಣೆಗೆ ತಡವಾಗಿ ದೂರು ನೀಡಿದ್ದಾರೆ.

ಕಳುವಾಗಿರುವ 40 ಗ್ರಾಂ ತೂಕದ ಚಿನ್ನದ ಸರದ ಅಂದಾಜು ಮೌಲ್ಯ ₹6 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸರು ಕಳ್ಳತನಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.

40-gram gold chain stolen after diverting attention

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...