Home namma chikmagalur chikamagalur ಗಂಗೆ ಪೂಜೆ ನೆರವೇರಿಸಿ ಸ್ವರ್ಣಗೌರಿ ಮನೆ ತುಂಬಿಸಿಕೊಂಡ ಮಹಿಳೆಯರು
chikamagalurHomeLatest Newsnamma chikmagalur

ಗಂಗೆ ಪೂಜೆ ನೆರವೇರಿಸಿ ಸ್ವರ್ಣಗೌರಿ ಮನೆ ತುಂಬಿಸಿಕೊಂಡ ಮಹಿಳೆಯರು

Share
Share
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದ ದೊಡ್ಡಬಾವಿ ಹಳ್ಳದಲ್ಲಿ ಸೋಮವಾರ ಮಹಿಳೆಯರು ಸಂಪ್ರದಾಯಬದ್ಧವಾಗಿ ಗಂಗೆ ಪೂಜೆ ನೆರವೇರಿಸಿ ಸ್ವರ್ಣ ಗೌರಿಯನ್ನು ತಮ್ಮ ತಮ್ಮ ಮನೆಗಳಿಗೆ ಕೊಂಡೊಯ್ದರು.
ಗೌರಿ ಹಬ್ಬದ ಅಂಗವಾಗಿ ಬೆಳಿಗ್ಗೆ ದೊಡ್ಡಬಾವಿ ಹಳ್ಳದಲ್ಲಿ ಗಂಗೆ ಪೂಜೆ ನೆರವೇರಿಸಿದ ಮಹಿಳೆಯರು, ಪೂಜಾ ವಿಧಿವಿಧಾನಗಳನ್ನು ಭಕ್ತಿಭಾವದಿಂದ ನೆರವೇರಿಸಿದರು. ಬಳಿಕ ಸ್ವರ್ಣ ಗೌರಿಯನ್ನು ಮನೆಗಳಿಗೆ ಕೊಂಡೊಯ್ದು ಸಂಪ್ರದಾಯದಂತೆ ಮನೆ ತುಂಬಿಸಿಕೊಂಡು ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಮೂಡಿಗೆರೆ ತಾಲೂಕಿನ ಜಾಣಿಗೆ ಗ್ರಾಮದಲ್ಲಿಯೂ ಬೆಳಿಗ್ಗೆ 6.30ರ ಶುಭ ಮುಹೂರ್ತದಲ್ಲಿ ಸಂಪ್ರದಾಯದಂತೆ ಸ್ವರ್ಣ ಗೌರಿಯನ್ನು ಮನೆ ತುಂಬಿಸಿಕೊಳ್ಳಲಾಯಿತು. ಮಹಿಳೆಯರು ಗೌರಿಯನ್ನು ಮನೆಗೆ ಬರಮಾಡಿಕೊಂಡು ಪೂಜೆ ಸಲ್ಲಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.
ದೇವನಗುಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಂತಿ, ಲೀಲಾ, ಸುಧಾ, ಸೌಮ್ಯ, ಸ್ವಾತಿ, ಅನುಷಾ, ಶ್ವೇತಾ, ಸಂಜಯ್ ಕೊಟ್ಟಿಗೆಹಾರ, ನರೇಂದ್ರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮೀಣ ಭಾಗದಲ್ಲಿ ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ಗೌರಿ ಹಬ್ಬದ ಸಂಪ್ರದಾಯವನ್ನು ಮಹಿಳೆಯರು ಭಕ್ತಿಭಾವದಿಂದ ಮುಂದುವರಿಸಿಕೊಂಡು ಬಂದಿದ್ದು, ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.
Women performed the Ganga Puja and welcomed Swarnagauri into their homes.
Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...