Home namma chikmagalur chikamagalur ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಸಲು ಕಿಸಾನ್ ಸಂಘ ಆಗ್ರಹ
chikamagalurHomeLatest Newsnamma chikmagalur

ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಸಲು ಕಿಸಾನ್ ಸಂಘ ಆಗ್ರಹ

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಬರಪೀಡಿತ ತಾಲೂಕುಗಳ ಘೋಷಣೆಯನ್ನು ಹಂತ-ಹಂತವಾಗಿ ಕೈಗೊಳ್ಳುತ್ತಿರುವ ಸರ್ಕಾರವು ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಅರ್ಹವಾಗಿರುವ ಎಲ್ಲಾ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶದ ಚಿಕ್ಕಮಗಳೂರು ಜಿಲ್ಲಾ ಘಟಕ ಆಗ್ರಹಿಸಿದೆ.

ಚಿಕ್ಕಮಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಸಂಚಾಲಕ ಸಾಗರ್ ಶ್ರೀನಿವಾಸ ಗೌಡ, ರಾಜ್ಯದಲ್ಲಿ ಶೇ.೩೦ರಷ್ಟು ಮಳೆ ಕೊರತೆಯಾಗಿದ್ದು, ೧೯೭೬ರ ಬಳಿಕದ ಅತ್ಯಂತ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ತೀವ್ರವಾಗಿ ಹಿನ್ನಡೆ ಕಂಡಿದ್ದು, ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ರೈತರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬರಪೀಡಿತ ತಾಲೂಕುಗಳ ಘೋಷಣೆಯನ್ನು ವಿಳಂಬ ಮಾಡದೆ, ಅರ್ಹ ತಾಲೂಕುಗಳನ್ನು ತಕ್ಷಣವೇ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರದ ಮೊದಲ ಹಂತದ ಅಧಿಕೃತ ಪ್ರಕಟಣೆಯಲ್ಲಿ ಒಟ್ಟು ೧೦೧ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಈ ಪೈಕಿ ೮೯ ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ೧೨ ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ ಎಂದು ಅವರು ತಿಳಿಸಿದರು.

ಇದೀಗ ಉಪಗ್ರಹ ಆಧಾರಿತ ಚಿತ್ರಗಳು ಹಾಗೂ ತಳಮಟ್ಟದ ವಾಸ್ತವ ಪರಿಶೀಲನೆ (ಉಡಿouಟಿಜ-ಣಡಿuಣhiಟಿg) ಆಧರಿಸಿ ಹೆಚ್ಚುವರಿಯಾಗಿ ೨೫ ತಾಲೂಕುಗಳನ್ನು ಎರಡನೇ ಹಂತದಲ್ಲಿ ಬರಪೀಡಿತ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ?೨೦೨೦ರ ಮಾನದಂಡಗಳಿಗೆ ಅನುಗುಣವಾಗಿ ವೈಜ್ಞಾನಿಕ ವರದಿಗಳನ್ನು ಆಧರಿಸಿ ಬರ ಘೋಷಣೆ ಮಾಡಲಾಗುತ್ತಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ನರಸಿಂಹರಾಜಪುರ (ಎನ್.ಆರ್.ಪುರ) ಹಾಗೂ ತರೀಕೆರೆ ತಾಲೂಕುಗಳನ್ನು ಈಗಾಗಲೇ ಮೊದಲ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲಾಗಿದೆ. ಜಿಲ್ಲೆಯ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಇನ್ನೂ ಅರ್ಹವಾಗಿರುವ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.

ರೈತ ಉಳಿದರೆ ದೇಶ ಉಳಿಯುತ್ತದೆ. ರೈತ ಶಕ್ತಿ-ದೇಶ ಶಕ್ತಿ ಎಂಬ ಧ್ಯೇಯದೊಂದಿಗೆ ರೈತರ ಹಿತಕ್ಕಾಗಿ ಸಂಘ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರತಿನಿಧಿ ಸುರೇಶ್, ಯುವ ಪ್ರಮುಖ್ ಧನುಷ್, ತಾಲೂಕು ಸಮಿತಿ ಸದಸ್ಯ ಚಂದನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Kisan Sangh demands inclusion of remaining taluks in the list of drought-hit taluks.

Share

Leave a comment

Leave a Reply

Your email address will not be published. Required fields are marked *

Don't Miss

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವುದನ್ನು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸ್ವಾಗತಿಸಿದೆ....

Related Articles

ಪೌರ ಕಾರ್ಮಿಕರಿಗೆ ಸವಲತ್ತು ಕಲ್ಪಿಸಿ

ಚಿಕ್ಕಮಗಳೂರು:  ಪೌರಕಾರ್ಮಿಕರಿಗೆ ವಸತಿ ಸೌಲಭ್ಯ, ರಜೆ, ಮಕ್ಕಳ ಶಿಕ್ಷಣ ಸೇರಿದಂತೆ ಅವರ ಕಲ್ಯಾಣಕ್ಕೆ ಅಗತ್ಯ ಸೌಕರ್ಯಗಳನ್ನು...

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ...

ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು

ಚಿಕ್ಕಮಗಳೂರು: ಮನೆಯ ಯಜಮಾನರು ಹಬ್ಬದ ಸಂಭ್ರಮಕ್ಕೆಂದು ಊರಿಗೆ ತೆರಳಿದ್ದ ಸಮಯವನ್ನೇ ಹೊಂಚು ಹಾಕಿ ಕಾದು, ನಕಲಿ...