ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು.
ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ ವತಿಯಿಂದ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಇದಲ್ಲದೇ ಎಲ್ಲಾ ಬಡಾವಣೆಗಳಲ್ಲಿ, ಗಲ್ಲಿಗಳಲ್ಲೂ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ.
ವಿಜಯಪುರ, ಹಿರೇಮಗಳೂರು, ಕೋಟೆ, ರಾಮನಹಳ್ಳಿ, ದಂಟರಮಕ್ಕಿ, ಜಯನಗರ, ಹೊಸಮನೆ, ಉಂಡೇದಾಸರಹಳ್ಳಿ, ನೆಲ್ಲೂರು, ರಾಂಪುರ, ತೇಗೂರು ಸೇರಿ ಎಲ್ಲೆಡೆ ಗಣೇಶನ ದೊಡ್ಡ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ಮೊದಲು ನಗರದಲ್ಲಿ ಮೆರವಣಿಗೆ ನಡೆಸಲಾಯಿತು. ಶಾಸಕ ಎಚ್.ಡಿ. ತಮ್ಮಯ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಎಸ್. ಕುಬೇರ, ಪ್ರಧಾನ ಕಾರ್ಯದರ್ಶಿ ಸಿ.ಆರ್. ಕೇಶವಮೂರ್ತಿ, ಈಶ್ವರಪ್ಪ ಕೋಟೆ, ವರಸಿದ್ದಿ ವೇಣುಗೋಪಾಲ್, ಎಂ.ಎಸ್. ಉಮೇಶಕುಮಾರ್, ಸಚಿನ್ ಇದ್ದರು.
ಹಿಂದೂ ಮಹಾಗಣಪತಿ ಸೇವಾ ಸಂಘದಿಂದ 13ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಸೋಮವಾರ ಸಂಜೆ ನೂರಾರು ಭಕ್ತರು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು.
Gauri-Ganesh festival celebrations across the district
Leave a comment