Home namma chikmagalur chikamagalur ಸಿ.ಟಿ. ರವಿಯಿಂದ ರಾಜ್ಯದ ಮುಖ್ಯಮಂತ್ರಿಗೆ ಬಹಿರಂಗ ಪತ್ರ
chikamagalurHomeLatest Newsnamma chikmagalur

ಸಿ.ಟಿ. ರವಿಯಿಂದ ರಾಜ್ಯದ ಮುಖ್ಯಮಂತ್ರಿಗೆ ಬಹಿರಂಗ ಪತ್ರ

Share
Share

ಚಿಕ್ಕಮಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಸಂದರ್ಭದಲ್ಲೇ ಕೇವಲ ಎರಡು ಗಂಟೆಗಳ ಸಂಕ್ಷಿಪ್ತ ಹೆಲಿಕಾಪ್ಟರ್ ಪ್ರವಾಸ ಕೈಗೊಳ್ಳುವ ಬದಲು ಜನರ ನೈಜ ಸಮಸ್ಯೆಗಳನ್ನು ಕಣ್ಣಾರೆ ಕಾಣಲು ರಸ್ತೆ ಮೂಲಕ ಸಂಚರಿಸುವಂತೆ ಮಾಜಿ ಸಚಿವ ಸಿ.ಟಿ. ರವಿ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ನೇರ ಆಗ್ರಹ ಮಂಡಿಸಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಬಂದು ಹೋಗುವ ಅವಸರದ ಭೇಟಿಯಲ್ಲಿ ಶಿಷ್ಟಾಚಾರದಲ್ಲೇ ಬಹುಪಾಲು ಸಮಯ ಕಳೆದುಹೋಗಲಿದ್ದು, ಜನರ ಅಳಲು ಆಲಿಸಲು ಸಮಯ ಸಿಗುವುದಿಲ್ಲ. ಮಲೆನಾಡಿನ ವಾಸ್ತವ ಪರಿಸ್ಥಿತಿ ಅರ್ಥವಾಗಬೇಕಿದ್ದರೆ ತೀರ್ಥಹಳ್ಳಿ ಅಥವಾ ಬಾಳೆಹೊನ್ನೂರು ಮಾರ್ಗವಾಗಿ ರಸ್ತೆ ಮೂಲಕವೇ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಬೇಕು. ಗುಂಡಿಬಿದ್ದ ರಸ್ತೆಗಳ ದುಸ್ಥಿತಿಯನ್ನು ಖುದ್ದು ವೀಕ್ಷಿಸಿ, ಮಲೆನಾಡು ಹಾಗೂ ಕರಾವಳಿ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಪಶ್ಚಿಮಘಟ್ಟ ಸಂರಕ್ಷಣೆ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ಕರಡು ಅಧಿಸೂಚನೆಯು ಮಲೆನಾಡಿಗರಲ್ಲಿ ತೀವ ಆತಂಕ ಹುಟ್ಟಿಸಿದೆ. ಅರಣ್ಯ ಸಂರಕ್ಷಣೆಗೆ ಯಾರ ವಿರೋಧವೂ ಇಲ್ಲ, ಆದರೆ ಕೃಷಿಭೂಮಿ, ಜನವಸತಿ ಪ್ರದೇಶಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯದ ಜಾಗಗಳನ್ನು ಪರಿಸರ ಸೂಕ್ಷ್ಮ ವಲಯದಿಂದ ಸಂಪೂರ್ಣವಾಗಿ ಹೊರಗಿಡಬೇಕು. ಗ್ರಾಮ ಮಟ್ಟದ ನಿಖರ ಭೂನಕ್ಷೆ ರೂಪಿಸಿ, ಜನರ ಬದುಕಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಸಮಗ್ರ ಆಕ್ಷೇಪಣೆ ಸಲ್ಲಿಸಬೇಕೆಂದು ಸಿ.ಟಿ. ರವಿ ಒತ್ತಾಯಿಸಿದ್ದಾರೆ.

ಕಡೂರು ಹಾಗೂ ಚಿಕ್ಕಮಗಳೂರು ತಾಲೂಕುಗಳ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ಸಮಸ್ಯೆ ನಿವಾರಣೆಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ತುರ್ತಾಗಿ ವಿಶೇಷ ಟಾಸ್ಕ್‌ಫೋರ್ಸ್ ರಚಿಸಬೇಕು. ಇದರೊಂದಿಗೆ ಮಹತ್ವಾಕಾಂಕ್ಷೆಯ ‘ಜಲ ಜೀವನ್ ಮಿಷನ್’ ಕಾಮಗಾರಿಗಳಲ್ಲಿ ಗಂಭೀರ ಅಕ್ರಮಗಳು ನಡೆದಿವೆ. ಕಾಮಗಾರಿ ಅರ್ಧಕ್ಕೆ ನಿಂತಿರುವುದು, ಸೋರುತ್ತಿರುವ ಟ್ಯಾಂಕ್‌ಗಳು ಹಾಗೂ ನಲ್ಲಿಗಳಲ್ಲಿ ನೀರು ಬಾರದಿರುವ ಲೋಪಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದಲೇ ನಷ್ಟ ವಸೂಲಿ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಹಿರಂಗ ಪತ್ರದ ಮೂಲಕ ಎಚ್ಚರಿಸಿದ್ದಾರೆ.

Open letter from C.T. Ravi to the State Chief Minister.

Share

Leave a comment

Leave a Reply

Your email address will not be published. Required fields are marked *

Don't Miss

ಏಡ್ಸ್ ಭಾದಿತ ವ್ಯಕ್ತಿ ಎಲ್ಲರಂತೆ ಜೀವಿಸಬಹುದು

ಚಿಕ್ಕಮಗಳೂರು:  ಹೆಚ್‌ಐವಿ ಸೋಂಕಿತ ವ್ಯಕ್ತಿಗೆ ಸಾವು ಬಿಟ್ಟರೆ ಬೇರೆ ಯಾವುದೇ ಮಾರ್ಗವಿರ ಲಿಲ್ಲ. ಆದರೆ ಇದೀಗ ವೈದ್ಯಕೀಯ ಸಂಶೋಧನೆಗಳ ಫಲವಾಗಿ ಸೋಂಕಿನ ವ್ಯಕ್ತಿ, ಸಂಪೂರ್ಣ ಕಾಯಿಲೆ ಯಿಂದ ಮುಕ್ತರಾಗದಿದ್ದರೂ ಎಲ್ಲರಂತೆ ದೀರ್ಘಕಾಲ...

ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಆಗ್ರಹಿಸಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು:  ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನಗರದ ಕೆನರಾ ಬ್ಯಾಂಕ್ ಮುಖ್ಯ ಕಚೇರಿ ಆವರಣದಲ್ಲಿ ಶುಕ್ರವಾರ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯು ಕ್ತ ವೇದಿಕೆ ಜಿಲ್ಲಾ ಸಮಿತಿಯಿಂದ...

Related Articles

ಕಾಫಿ ಉದ್ಯಮ ಉಳಿಸಲು ಸಂಘಟಿತ ಹೋರಾಟ ಅಗತ್ಯ

ಚಿಕ್ಕಮಗಳೂರು: ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಹೆಚ್ಚಳ, ಮಾರುಕಟ್ಟೆ...

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ...

ಜನಾಭಿಪ್ರಾಯ ಆಲಿಸಲು ಸಿಎಂ ಆಗಮನ ಜನಪರ ಕಾಳಜಿಯ ಸಾಕ್ಷಿ

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕುರಿತು ಜನಸಾಮಾನ್ಯರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಲಿಸಲು...