Home namma chikmagalur chikamagalur ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ
chikamagalurHomeLatest Newsnamma chikmagalur

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು.

ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1955ರಲ್ಲಿ ಕೇವಲ 1,430 ರೂ. ಆರಂಭಿಕ ಠೇವಣಿಯೊಂದಿಗೆ ಆರಂಭಗೊಂಡ ಬ್ಯಾಂಕ್ ಇಂದು 28 ಶಾಖೆಗಳು, 129 ಪ್ರಾಥಮಿಕ ಸಹಕಾರ ಸಂಘಗಳು ಹಾಗೂ 267 ಇತರ ಸಹಕಾರ ಸಂಘಗಳು ಸೇರಿದಂತೆ ಒಟ್ಟು 396 ಸದಸ್ಯ ಸಹಕಾರ ಸಂಘಗಳ ಮೂಲಕ ಕೃಷಿ ಮತ್ತು ಕೃಷಿಯೇತರ ಕ್ಷೇತ್ರಗಳಿಗೆ ಸಾಲ ಸೌಲಭ್ಯ ಒದಗಿಸುತ್ತಿದೆ ಎಂದರು.

2025-26ನೇ ಸಾಲಿನ ಶಾಸನಬದ್ಧ ಲೆಕ್ಕ ಪರಿಶೋಧನೆ ಹಾಗೂ ನಬಾರ್ಡ್ ನಡೆಸಿದ ತಪಾಸಣೆಯಲ್ಲಿ ಬ್ಯಾಂಕ್ ಸತತವಾಗಿ ‘ಎ’ ವರ್ಗೀಕರಣ ಪಡೆದಿದೆ. ಬ್ಯಾಂಕ್ 2025-26ನೇ ಸಾಲಿನ ಅಂತ್ಯಕ್ಕೆ 65.99 ಕೋಟಿ ರೂ. ಷೇರು ಬಂಡವಾಳ ಹೊಂದಿದ್ದು, 2.24 ಲಕ್ಷಕ್ಕೂ ಅಧಿಕ ಠೇವಣಿದಾರರಿಂದ 1,568.53 ಕೋಟಿ ರೂ. ಠೇವಣಿ ಸಂಗ್ರಹಿಸಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರದ ಕೃಷಿ ಸಾಲ ಯೋಜನೆಯಡಿ 2025-26ನೇ ಸಾಲಿನಲ್ಲಿ ಜಿಲ್ಲೆಗೆ 75,119 ರೈತರಿಗೆ 1,017.19 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ್ತು. ಮಾರ್ಚ್ 2026ರ ಅಂತ್ಯಕ್ಕೆ 54,992 ರೈತರಿಗೆ 843.84 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸಲಾಗಿದೆ. 2026-27ನೇ ಸಾಲಿನಲ್ಲಿ 1,009 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದರು.

ಶೇ.3ರ ಬಡ್ಡಿದರದಲ್ಲಿ ಕೃಷಿ ಮಧ್ಯಮಾವಧಿ ಸಾಲದಡಿ 2025-26ರಲ್ಲಿ 380 ರೈತರಿಗೆ 26 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ 353 ರೈತರಿಗೆ 26 ಕೋಟಿ ರೂ. ಸಾಲ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲೂ 380 ರೈತರಿಗೆ 26 ಕೋಟಿ ರೂ. ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

2025-26ನೇ ಸಾಲಿನಲ್ಲಿ ಒಟ್ಟು 18,061 ಸಾಲಗಾರ ಸದಸ್ಯರಿಗೆ 569.57 ಕೋಟಿ ರೂ. ಕೃಷಿಯೇತರ ಸಾಲ ವಿತರಿಸಲಾಗಿದೆ. 2026-27ನೇ ಸಾಲಿನಲ್ಲಿ ಈ ಪ್ರಮಾಣವನ್ನು ಹೆಚ್ಚಿಸಿ 700 ಕೋಟಿ ರೂ. ಕೃಷಿಯೇತರ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿ.ಟಿ. ರವಿ ತಿಳಿಸಿದರು.

ಜಿಲ್ಲೆಯಲ್ಲಿ ಮಾರ್ಚ್ 2026ರ ಅಂತ್ಯಕ್ಕೆ ಒಟ್ಟು 12,355 ಸ್ವಸಹಾಯ ಗುಂಪುಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ 32 ಹೊಸ ಗುಂಪುಗಳನ್ನು ರಚಿಸಲಾಗಿದೆ. ಎನ್‌ಆರ್‌ಎಲ್‌ಎಂ ಯೋಜನೆಯಡಿ 10 ಸ್ವಸಹಾಯ ಗುಂಪುಗಳಿಗೆ 30 ಲಕ್ಷ ರೂ. ಸಾಲ ವಿತರಿಸಲಾಗಿದೆ. ಇದರಿಂದ ಬಡ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದರು.

ರೈತರು ಮತ್ತು ಸಾಲಗಾರ ಸದಸ್ಯರ ಪ್ರಾಮಾಣಿಕ ಮರುಪಾವತಿ, ಆಡಳಿತ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ನಿರಂತರ ಪರಿಶ್ರಮದಿಂದ 2025-26ನೇ ಸಾಲಿನಲ್ಲಿ 98.05ರಷ್ಟು ಸಾಲ ವಸೂಲಾತಿ ಸಾಧಿಸಲಾಗಿದೆ. ಬ್ಯಾಂಕಿನ ಎನ್‌ಪಿಎ ಪ್ರಮಾಣ ಶೇ.3.50ರಷ್ಟಿದೆ ಎಂದು ತಿಳಿಸಿದರು.

ಬ್ಯಾಂಕ್ 2013-14ನೇ ಸಾಲಿನಿಂದ ನಿರಂತರವಾಗಿ ಲಾಭ ಗಳಿಸುತ್ತಿದ್ದು, 2025-26ನೇ ಸಾಲಿನಲ್ಲೂ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯ ಸಹಕಾರ ಸಂಘಗಳಿಗೆ ಡಿವಿಡೆಂಡ್ ನೀಡುವ ಉದ್ದೇಶವಿದ್ದು, ಮಹಾಸಭೆಯಲ್ಲಿ ಈ ಕುರಿತು ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮೊಬೈಲ್ ಬ್ಯಾಂಕಿಂಗ್, ಯುಪಿಐ ಮೂಲಕ PhonePe ಹಾಗೂ Google Pay ಪಾವತಿ, ಐಎಂಪಿಎಸ್ ಮತ್ತು ಶಾಖೆಗಳಲ್ಲಿ ಮೈಕ್ರೋ ಎಟಿಎಂ ಸೇವೆಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲಾದ್ಯಂತ ಇಂಟರ್‌ನೆಟ್ ಬ್ಯಾಂಕಿಂಗ್ ಸೇವೆ ಒದಗಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಗ್ರಾಹಕರಿಗೆ ಲಭ್ಯವಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮತ್ತಷ್ಟು ಹೊಸ ಸೇವೆಗಳನ್ನು ಬ್ಯಾಂಕ್ ಅಳವಡಿಸಿಕೊಳ್ಳಲಿದೆ ಎಂದು ಹೇಳಿದರು. ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಗಳಿಗೂ ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ ನೋಂದಣಿ ವ್ಯವಸ್ಥೆ ಮಾಡಲಾಗಿದೆ.

ಸದಸ್ಯ ಸಹಕಾರ ಸಂಘಗಳ ಕಟ್ಟಡ ನಿರ್ಮಾಣ, ಪೀಠೋಪಕರಣ ಖರೀದಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ 86 ಲಕ್ಷ ರೂ. ಮೀಸಲಿಡಲಾಗಿದೆ. ಈ ಮೊತ್ತದ ಮೂಲಕ ಜಿಲ್ಲೆಯ ಸಹಕಾರ ಸಂಘಗಳಿಗೆ ಮೂಲಸೌಕರ್ಯ ಅಭಿವೃದ್ಧಿಗೆ ನೆರವು ನೀಡಲಾಗುವುದು ಎಂದು ತಿಳಿಸಿದರು.

ಬ್ಯಾಂಕ್ 2025-26ನೇ ಸಾಲಿನಲ್ಲಿ ಶೇ.9.27ರ ಸಿಆರ್‌ಎಆರ್ ಕಾಯ್ದುಕೊಂಡಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಆನಂದಪ್ಪ, ಬಸವನಗೌಡ, ಜೈಪಾಲ್, ಅದ್ದಡ ಸತೀಶ್, ರಮೇಶ್, ಸೋನಾಲ್ ಗೌಡ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Chikkamagaluru DCC Bank posts net profit of ₹6.87 crore.

Share

Leave a comment

Leave a Reply

Your email address will not be published. Required fields are marked *

Don't Miss

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಮುಳ್ಳಯ್ಯನಗಿರಿ,...

ಸುಳ್ಳು ವಂಶವೃಕ್ಷ ಸೃಷ್ಟಿಸಿ ಆಸ್ತಿ ಲಪಟಾಯಿಸಲು ಯತ್ನ: ಐವರ ವಿರುದ್ಧ ಪ್ರಕರಣ

ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು ಆಸ್ತಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿ ವಂಚನೆ ನಡೆಸಿರುವ ಆರೋಪದಡಿ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ...

Related Articles

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ...

ಹಾಲಿನ ಖರೀದಿ ದರ ಹೆಚ್ಚಳ – ಶೀಘ್ರವೇ ಸಭೆ ನಡೆಸಿ ತೀರ್ಮಾನ

ಚಿಕ್ಕಮಗಳೂರು: ಹಾಲಿನ ಖರೀದಿ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ವಾರ್ಷಿಕ ವಹಿವಾಟು ಮೂರು ಸಾವಿರ ಕೋಟಿ

ಚಿಕ್ಕಮಗಳೂರು: ೧೯೫೫ರಲ್ಲಿ ೧,೪೦೦ ರೂ. ಬಂಡವಾಳದೊಂದಿಗೆ ಆರಂಭಗೊಂಡ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇಂದು...

ಮಲೆನಾಡು-ಕರಾವಳಿಗೆ ವಿಶೇಷ ಪ್ಯಾಕೇಜ್

ಬಾಳೆಹೊನ್ನೂರು: ಮಲೆನಾಡು ಮತ್ತು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ರೂಪಿಸಲಾಗಿದ್ದು, ಈ ಭಾಗದಿಂದ...