ಶೃಂಗೇರಿ: ಪ್ರವಾಸಕ್ಕೆಂದು ಶೃಂಗೇರಿಗೆ ಬಂದಿದ್ದ ಯುವಕರ ತಂಡವೊಂದು ತುಂಗಾ ನದಿಯಲ್ಲಿ ಸ್ನಾನಕ್ಕೆ ಇಳಿದ ವೇಳೆ ಯುವಕನೊಬ್ಬ ನೀರುಪಾಲಾಗಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮೃತ ಯುವಕನನ್ನು ಬೆಂಗಳೂರು ಹೆಬ್ಬಾಳ ಮೂಲದ ದರ್ಶನ್ (22) ಎಂದು ಗುರುತಿಸಲಾಗಿದೆ. ದರ್ಶನ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ಒಬ್ಬ ಮಹಿಳೆ ಸೇರಿದಂತೆ ಮೂವರು ಪ್ರವಾಸಿಗರು ತುಂಗಾ ನದಿಯಲ್ಲಿ ಸ್ನಾನಕ್ಕಾಗಿ ನೀರಿಗಿಳಿದಿದ್ದರು. ಈ ವೇಳೆ ದರ್ಶನ್ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ, ನೀರುಪಾಲಾಗಿದ್ದ ದರ್ಶನ್ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Youth drowns in Tunga River at Sringeri
Leave a comment