Home Crime News ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ
Crime NewsHomeLatest Newsnamma chikmagalurTarikere

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

Share
Share

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ.

ತಮ್ಮಯ್ಯ (59) ಕೊಲೆಯಾದ ದುರ್ದೈವಿ ತಂದೆಯಾಗಿದ್ದು ಹೆತ್ತ ಮಗ ಗಣೇಶ್ (29) ಈ ಕೃತ್ಯವೆಸಗಿದ ಆರೋಪಿ. ಮೊದಲ ಪತ್ನಿಯ ನಿಧನದ ನಂತರ ತಮ್ಮಯ್ಯ ಎರಡನೇ ಮದುವೆಯಾಗಿದ್ದರು. ಆದರೆ ಅಪ್ಪ-ಮಗ ಇಬ್ಬರ ನಿರಂತರ ಕುಡಿತದ ಚಟದಿಂದ ಬೇಸತ್ತು ಎರಡನೇ ಪತ್ನಿ ಮನೆ ಬಿಟ್ಟು ತೆರಳಿದ್ದರು.

ಈ ನಡುವೆ ನಿನ್ನೆ ತಮ್ಮಯ್ಯ ತನ್ನ ಪತ್ನಿಗೆ ಕರೆ ಮಾಡಿ, ಸಂಸಾರವನ್ನು ಮತ್ತೆ ಸರಿಪಡಿಸಿಕೊಂಡು ಜೊತೆಯಾಗಿರುವಂತೆ ಮನವೊಲಿಸಲು ಯತ್ನಿಸಿದ್ದರು. ಈ ವಿಚಾರ ತಿಳಿದ ಮೊದಲ ಪತ್ನಿಯ ಮಗ ಗಣೇಶ್, ತಂದೆ ಹಾಗೂ ಮಲತಾಯಿ ಒಂದಾದರೆ ತನ್ನನ್ನು ಮನೆಯಿಂದ ಹೊರಹಾಕಬಹುದು ಎಂಬ ಆತಂಕ ದಲ್ಲಿದ್ದ ಎನ್ನಲಾಗಿದೆ.

ಇದೇ ಭಯ ಹಾಗೂ ಕುಡಿದ ಮತ್ತಿನಲ್ಲಿದ್ದ ಗಣೇಶ್, ತಂದೆಯೊಂದಿಗೆ ಜಗಳಕ್ಕಿಳಿದು ಏಕಾಏಕಿ ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಕೊಚ್ಚಿ ಸ್ಥಳದಲ್ಲೇ ಹತ್ಯೆ ಮಾಡಿದ್ದಾನೆ. ಈ ರಕ್ತಸಿಕ್ತ ಘಟನೆಗೆ ಸಂಬಂಧಿಸಿದಂತೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Son hacks his own father to death with a billhook.

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ...