Home namma chikmagalur chikamagalur ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ

Share
Share

ಎನ್.ಆ‌ರ್. ಪುರ: ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ರಾತ್ರಿ ಊಟ ಮುಗಿಸಿಕೊಂಡು ಹೊರಬರುತ್ತಿದ್ದ ಶೃಂಗೇರಿ ತಾಲೂಕು ಪಂಚಾಯಿತಿ ಇಓ ಸುದೀಪ್ ಅವರ ಮೇಲೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕಡಿಗೆ ರವೀಂದ್ರ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೇರೂರು ಬಳಿ ಈ ಘಟನೆ ಜರುಗಿದೆ. ಹೋಟೆಲ್‌ನಿಂದ ಹೊರಬರುತ್ತಿದ್ದಂತೆ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಇಓ ಸುದೀಪ್ ಆರೋಪಿಸಿದ್ದು, ಗಾಯಗೊಂಡಿರುವ ಅವರು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ಸಂಬಂಧ ಇಓ ನೀಡಿದ ದೂರಿನ ಮೇರೆಗೆ ಕುಕ್ಕಡಿಗೆ ರವೀಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮತ್ತೊಂದೆಡೆ, ಇಓ ಸುದೀಪ್ ಕೂಡ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಾಗೇಶ್ ಎಂಬುವರು ಪ್ರತಿದೂರು ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಬಾಳೆಹೊನ್ನೂರು ಠಾಣೆ ಪೊಲೀಸರು ಎರಡೂ ಕಡೆಯಿಂದ ದೂರು, ಪ್ರತಿದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Assault on Taluk Panchayat Executive Officer

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ...