Home namma chikmagalur chikamagalur ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

Share
Share

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಮುಸುಕುಧಾರಿ ಖದೀಮರು ಸರಗಳ್ಳತನ ಎಸಗಿರುವ ಆಘಾತಕಾರಿ ಘಟನೆಯೊಂದು ಸಕಲೇಶಪುರ-ಮೂಡಿಗೆರೆ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಜನ್ನಾಪುರದ ನಿವಾಸಿ ಜಲಜಾಕ್ಷಿ ಎಂಬುವವರು ಬೆಟ್ಟದಮನೆ ಕಡೆಗೆ ವಾಕಿಂಗ್ ಮುಗಿಸಿ ತಮ್ಮ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ ಎಂದು ಗೋಣಿಬೀಡು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರಸ್ತೆಯ ಬಲಭಾಗದಲ್ಲಿ ನಡೆದು ಬರುತ್ತಿದ್ದ ಸಂದರ್ಭದಲ್ಲಿ ಬೆಟ್ಟದಮನೆ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಧಾವಿಸಿ ಬಂದ ಇಬ್ಬರು ಅಪರಿಚಿತ ಮುಸುಕುಧಾರಿಗಳು ಏಕಾಏಕಿ ಮಹಿಳೆಯ ಸನಿಹಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಬೈಕ್‌ ಹಿಂಬದಿ ಕುಳಿತಿದ್ದ ಆಸಾಮಿ ಕ್ಷಣಾರ್ಧದಲ್ಲಿ ಮಹಿಳೆಯ ಕೊರಳಿನಲ್ಲಿದ್ದ ಸುಮಾರು ೩೦ ಗ್ರಾಂ ತೂಕದ ಚಿನ್ನದ ಸರಕ್ಕೆ ಕೈಹಾಕಿ ರಭಸವಾಗಿ ಜಗ್ಗಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಎಳೆದ ರಭಸಕ್ಕೆ ಸರ ತುಂಡಾಗಿದ್ದು, ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ಐದರಿಂದ ಆರು ಗ್ರಾಂ ತೂಕದ ಸರದ ತುಂಡನ್ನು ಕಸಿದುಕೊಂಡು ದುಷ್ಕರ್ಮಿಗಳು ವಾಹನದಲ್ಲಿ ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಉಳಿದ ತುಂಡಾದ ಸರದ ಭಾಗ ಸಂತ್ರಸ್ತೆಯ ಬಳಿಯೇ ಉಳಿದುಕೊಂಡಿದೆ. ಘಟನೆಯಿಂದ ಕಂಗಾಲಾದ ಮಹಿಳೆ ಕುಟುಂಬಸ್ಥರ ಜೊತೆ ಸಮಾಲೋಚಿಸಿ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಸುಕುಧಾರಿ ಸರಗಳ್ಳರ ಸುಳಿವು ಪತ್ತೆಹಚ್ಚಲು ಸಿಸಿಟಿವಿ ಪರಿಶೀಲನೆ ಸೇರಿದಂತೆ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

Chain-snatching by masked miscreants in Mudigere

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...