Home namma chikmagalur chikamagalur ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ
chikamagalurCrime NewsHomeLatest Newsnamma chikmagalur

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

Share
Share

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣದಾಳ್ ರಸ್ತೆ ಕೋಟೆಯಲ್ಲಿ ನಡೆದಿದೆ ಎಂದು ದೂರಲಾಗಿದೆ.

ಕಣದಾಳ್ ರಸ್ತೆ ಕೋಟೆಯ ನಿವಾಸಿ ಸಿ. ಮೋಹನ್ ಎಂಬುವವರು ಸುಮಾರು ಒಂದು ತಿಂಗಳ ಹಿಂದೆ ಮುಂಬೈನಲ್ಲಿರುವ ತಮ್ಮ ಪುತ್ರಿಯ ಮನೆಗೆ ತೆರಳಿದ್ದರು. ಮನೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು, ಯಾವುದೋ ಹರಿತವಾದ ಆಯುಧದಿಂದ ಮನೆಯ ಹಿಂಬಾಗಿಲನ್ನು ಮೀಟಿ ಒಳಪ್ರವೇಶಿಸಿದ್ದಾರೆ ಎನ್ನಲಾಗಿದೆ.

ಮನೆಯ ಹಿಂಬಾಗಿಲು ತೆರೆದಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮೋಹನ್ ಅವರಿಗೆ ಮಾಹಿತಿ ನೀಡಿದ್ದು ಅವರು ತಮ್ಮ ಸಹೋದರ ಪ್ರಕಾಶ್ ಅವರಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ತಿಳಿಸಿದ್ದಾರೆ.

ಪ್ರಕಾಶ್ ಸ್ಥಳಕ್ಕೆ ತೆರಳಿ ನೋಡಿದಾಗ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಗಾಡ್ರೆಜ್ ಹಾಗೂ ವಾರ್ಡ್ ರೋಬ್ ಬೀರುಗಳನ್ನು ಒಡೆದು ಹಾಕಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ವೀಡಿಯೋ ಕಾಲ್ ಮೂಲಕ ಪರಿಶೀಲಿಸಿದಾಗ ಬೀರುವಿನಲ್ಲಿದ್ದ ₹30,000 ನಗದು ಹಾಗೂ ದೇವರ ಮನೆಯಲ್ಲಿದ್ದ ಎರಡು ಜೊತೆ ಬೆಳ್ಳಿ ದೀಪ, ಆರತಿ ತಟ್ಟೆ, ಪಂಚಪಾತ್ರೆ, ಉದ್ದರಣೆ ಸೇರಿದಂತೆ ಸುಮಾರು 1 ಲಕ್ಷ ಮೌಲ್ಯದ ಬೆಳ್ಳಿ ಸಾಮಗ್ರಿಗಳು ಕಳವಾಗಿರುವುದು ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಈ ಕುರಿತು ಪ್ರಕಾಶ್ ನೀಡಿದ ಗಣಕೀಕೃತ ದೂರಿನ ಮೇರೆಗೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Silver items worth lakhs of rupees

Share

Leave a comment

Leave a Reply

Your email address will not be published. Required fields are marked *

Don't Miss

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು ಅತಿ ಚಿಕ್ಕ ವಯಸ್ಸಿನಲ್ಲೇ ಅಗಲಿರುವುದು ವೈಯಕ್ತಿಕವಾಗಿ ಅಪಾರ ನೋವು ತಂದಿದೆ ಎಂದು ಮಾಜಿ ಸಚಿವೆ...

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ....

Related Articles

ಭದ್ರ ಮಾಫಿಯಾ : ಪೈಪ್ ನುಂಗಿ ನೀರು ಕುಡಿಯುವ ಶಾಸಕರುಗಳು ಮತ್ತು ಇಂಜಿನಿಯರ್ ಗಳು?

ಚಿಕ್ಕಮಗಳೂರು: ಜಿಲ್ಲೆಯಿಂದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕುಡಿಯುವ ನೀರಿಗಾಗಿ ಅಂತರ್ ಜಲ ಹೆಚ್ಚಳ...

ನ.18ರಂದು ಗೌಡನಹಳ್ಳಿ ಜನಾಂದೋಲನ ಅಂಬಳೆದಿಂದ ಚಲೋ

ಚಿಕ್ಕಮಗಳೂರು:ಕೈಗಾರಿಕಾ ಮಾಲಿನ್ಯ, ರಾಸಾಯನಿಕ ತ್ಯಾಜ್ಯದಿಂದ ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅತಿಕ್ರಮಣ ಸೇರಿದಂತೆ ವಿವಿಧ...

ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ 110ನೇ ಜನ್ಮದಿನಾಚರಣೆ ಅದ್ದೂರಿ ಸಿದ್ಧತೆ

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಐತಿಹಾಸಿಕ ನೆಲವಾದ ಚಿಕ್ಕಮಗಳೂರಿನಲ್ಲಿ ಅವರ...

ಚಿಕ್ಕಮಗಳೂರು ಪ್ರೀಮಿಯರ್ ಲೀಗ್‌ಗೆ ಶಾಸಕ ತಮ್ಮಯ್ಯ ಚಾಲನೆ

ಚಿಕ್ಕಮಗಳೂರು: ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಸದೃಢತೆಯೂ ವೃದ್ಧಿಯಾಗುತ್ತದೆ....