Home namma chikmagalur chikamagalur ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ
chikamagalurHomeLatest Newsnamma chikmagalur

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

Share
Share

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳೂ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.

ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ, ಕಳಸಾಪುರ, ಸಿಂದಿಗೆರೆ, ಲಕ್ಯಾ, ಹಿರೇಗೌಜ, ಲಕ್ಕಮ್ಮನಹಳ್ಳಿ ಹಾಗೂ ಕಸಬಾ ಹೋಬಳಿಯ ಕರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ. ಈ ಪ್ರದೇಶಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ಚಿಕ್ಕಮಗಳೂರು ತಾಲೂಕು ಮೂರು ವಿಭಿನ್ನ ಮಳೆ ಪ್ರದೇಶಗಳನ್ನು ಹೊಂದಿದ್ದು, ಹೋಬಳಿಯಿಂದ ಹೋಬಳಿಗೆ ಹಾಗೂ ಗ್ರಾಮದಿಂದ ಗ್ರಾಮಕ್ಕೆ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸವಿದೆ. ಪ್ರಸಕ್ತ ಸಾಲಿನ ಮಳೆ ಕೊರತೆಯಿಂದ ಅಂತರ್ಜಲ ಮಟ್ಟವೂ ಕುಸಿದಿದ್ದು, ಕೊಳವೆಬಾವಿಗಳಲ್ಲಿನ ನೀರಿನ ಲಭ್ಯತೆ ಕಡಿಮೆಯಾಗಿದೆ. ೨೦೨೫-೨೬ನೇ ಸಾಲಿನಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ವಿವಿಧ ಉದ್ದೇಶಗಳಿಗಾಗಿ ಕೊರೆಸಲಾಗಿದ್ದ ಹಲವು ಕೊಳವೆಬಾವಿಗಳಲ್ಲಿಯೂ ನೀರು ದೊರೆಯದೆ ವಿಫಲವಾಗಿವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮಳೆ ಕೊರತೆಯ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಜತೆಗೆ ಜಾನುವಾರುಗಳಿಗೆ ಮೇವಿನ ಕೊರತೆಯೂ ಉಂಟಾಗುವ ಸಾಧ್ಯತೆಯಿದೆ. ಬಿತ್ತನೆ ಕಾರ್ಯ ಕುಂಠಿತಗೊಂಡಿರುವುದರ ಜತೆಗೆ ಬೆಳೆಗಳು ಒಣಗುವ ಆತಂಕ ಎದುರಾಗಿರುವುದರಿಂದ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಾಸಕ ತಮ್ಮಯ್ಯ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲಕ್ಯಾ ಹಾಗೂ ಕಸಬಾ ಹೋಬಳಿಗಳನ್ನು ಬರಪೀಡಿತ ಹೋಬಳಿಗಳೆಂದು ಪರಿಗಣಿಸಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ತಾಲೂಕಿನ ಒಟ್ಟಾರೆ ಮಳೆ ಕೊರತೆ, ಕೃಷಿ ಹಾಗೂ ತೋಟಗಾರಿಕೆಗೆ ಉಂಟಾಗಿರುವ ಹಾನಿ, ಕುಡಿಯುವ ನೀರಿನ ಸಮಸ್ಯೆ ಮತ್ತು ಅಂತರ್ಜಲ ಮಟ್ಟದ ಕುಸಿತವನ್ನು ಸಮಗ್ರವಾಗಿ ಪರಿಗಣಿಸಿ ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ,

ಈ ಸಂದರ್ಭದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ನಯನ ಮೋಟಮ್ಮನವರು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀಮತಿ ಎವಿ ಗಾಯತ್ರಿ ಶಾಂತೇಗೌಡರು, ಸ್ಥಾನ ಪರಿಷತ್ ಸದಸ್ಯರಾದ ಶ್ರೀಮತಿ ಆರ್ತಿ ಕೃಷ್ಣರವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಚ್ ಪಿ ಮಂಜೇಗೌಡ ರವರು, ಕಾಡ ಅಧ್ಯಕ್ಷರಾದ ಶ್ರೀ ಡಾ ಅಂಶು ಮಂತ್ ಅವರು ಹಾಜರಿದ್ದರು.

Demand for inclusion of Chikkamagaluru taluk in the list of drought-prone taluks

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ...

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು...