Home namma chikmagalur chikamagalur ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಮಾಂಗಲ್ಯ ಸರಗಳ್ಳತನ
chikamagalurCrime NewsHomeLatest Newsnamma chikmagalur

ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಮಾಂಗಲ್ಯ ಸರಗಳ್ಳತನ

Share
Share

ಚಿಕ್ಕಮಗಳೂರು: ಮನೆಯವರೊಂದಿಗೆ ನಗುನಗುತ್ತಾ ಸೀಮಂತ ಕಾರ್ಯಕ್ರಮಕ್ಕೆ ಹೆಜ್ಜೆ ಹಾಕುತ್ತಿದ್ದ ವೃದ್ಧೆಯೊಬ್ಬರ ಮೇಲೆ ಕಣ್ಣಿಟ್ಟ ಖದೀಮರು ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಯಾವುದೇ ಭಯವಿಲ್ಲದೆ ಹೆಲೈಟ್ ಧರಿಸಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವೃದ್ಧೆಯ ಪ್ರತಿರೋಧದ ನಡುವೆಯೂ ಬಲವಂತವಾಗಿ ಚಿನ್ನವನ್ನು ಕಿತ್ತುಕೊಂಡು ಧೂಳೆಬ್ಬಿಸಿ ಪರಾರಿಯಾಗಿದ್ದಾರೆ. ಎಂದು ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.

ಅಂಬಳೆ ಹೋಬಳಿಯ ಸಿರಗಾಪುರ ಗ್ರಾಮದ ನಿವಾಸಿ ರಂಗಮ್ಮ ಎಂಬ 67 ವರ್ಷದ ವೃದ್ದೆ, ತಮ್ಮ ಸಂಬಂಧಿಕರ ಮನೆಯ ಸೀಮಂತ ಕಾರ್ಯಕ್ರಮಕ್ಕೆಂದು ಶಾಸ್ತ್ರದ ಅಕ್ಕಿಯನ್ನು ತಲೆಯ ಮೇಲೆ ಹೊತ್ತುಕೊಂಡು ಗ್ರಾಮದ ಭೂತಪ್ಪನ ದೇವಸ್ಥಾನದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಹಿಂದಿನಿಂದ ಪಲ್ಸರ್ ಬೈಕ್‌ನಲ್ಲಿ ಹೆಲೈಟ್ ಧರಿಸಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ರಂಗಮ್ಮ ಅವರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರಕ್ಕೆ ಕೈಹಾಕಿದ್ದಾರೆನ್ನಲಾಗಿದೆ. ಮಹಿಳೆ ತಕ್ಷಣ ಎಚ್ಚೆತ್ತುಕೊಂಡು ತನ್ನ ಸರವನ್ನು ಬಿಡಿಸಿಕೊಳ್ಳಲು ಜೀವದ ಹಂಗು ತೊರೆದು ಪ್ರತಿರೋಧ ತೋರಿದರೂ, ಕಿರಾತಕರು ಬಲಪ್ರಯೋಗ ಮಾಡಿ ಕುತ್ತಿಗೆಯಲ್ಲಿದ್ದ ಆಭರಣವನ್ನು ಕಿತ್ತುಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ಕೃತ್ಯದಲ್ಲಿ ತಾಳಿ ಗುಂಡು ಸೇರಿದಂತೆ ಒಟ್ಟು 47 ಗ್ರಾಂ ತೂಕದ ಮಾಂಗಲ್ಯ ಸರ ದುಷ್ಕರ್ಮಿಗಳ ಪಾಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 2,82,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆಯಿಂದ ಬೆಚ್ಚಿಬಿದ್ದ ವೃದ್ದೆ ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಾಡಹಗಲೇ ಇಂತಹ ಕೃತ್ಯ ಎಸಗಿದ ಬೈಕ್ ಸವಾರರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Theft of Mangalsutra chains worth lakhs of rupees in broad daylight.

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...