Home namma chikmagalur chikamagalur ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದ ಸರ ಕನ್ನತನ
chikamagalurCrime NewsHomeLatest Newsnamma chikmagalur

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದ ಸರ ಕನ್ನತನ

Share
Share

ಚಿಕ್ಕಮಗಳೂರು: ಸಂಭ್ರಮದಿಂದ ಬಂಧುಗಳ ಮದುವೆ ಮುಗಿಸಿಕೊಂಡು ನೆಮ್ಮದಿಯಾಗಿ ಮನೆ ಕಡೆ ಹೆಜ್ಜೆ ಹಾಕುತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗಮಧ್ಯದಲ್ಲೇ ಕಳ್ಳರು ಬಿಗ್ ಶಾಕ್ ನೀಡಿದ್ದಾರೆ.

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕೆ ಕೈಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರವನ್ನು ದೋಚಿ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಗೌಡನಹಳ್ಳಿ ನಿವಾಸಿ ಗಂಗಮ್ಮ ಎಂಬುವವರು ಹಿರೇಮಗಳೂರಿನಲ್ಲಿ ನಡೆದ ಸಂಬಂಧಿಕರ ಮದುವೆ ಮುಗಿಸಿ, ಗ್ರಾಮದ ಇತರ ಇಬ್ಬರು ಮಹಿಳೆಯರೊಂದಿಗೆ ರೈಲ್ವೆ ಮೇಲೇತುವೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಹಿಂದಿನಿಂದ ಹೆಲ್ಮಟ್ ಧರಿಸಿ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು, ಏಕಾಏಕಿ ಗಂಗಮ್ಮ ಅವರ ಕುತ್ತಿಗೆಯಲ್ಲಿದ್ದ ಸರಕ್ಕೆ ಕೈಹಾಕಿ ಎಳೆದಿದ್ದಾರೆ ಎನ್ನಲಾಗಿದೆ. ಮಹಿಳೆ ತಕ್ಷಣ ಎಚ್ಚೆತ್ತುಕೊಂಡು ತನ್ನ ಮಾಂಗಲ್ಯ ಸರವನ್ನು ಗಟ್ಟಿಯಾಗಿ ಹಿಡಿದು ಪ್ರತಿರೋಧ ತೋರಿದ್ದರಿಂದ ಪೂರ್ಣ ಸರ ಸಿಗದೆ, 33 ಗ್ರಾಂ ಸರದ ಪೈಕಿ ಸುಮಾರು 11 ಗ್ರಾಂ ನಷ್ಟು ತುಂಡು ಹಾಗೂ ಕರಿಮಣಿ ಸರದಲ್ಲಿದ್ದ 6 ಚಿನ್ನದ ಗುಂಡುಗಳು ಮಾತ್ರ ಕಳ್ಳರ ಕೈಗೆ ಸಿಕ್ಕಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಕಳ್ಳರು ಕ್ಷಣಾರ್ಧದಲ್ಲಿ ಬೈಕ್ ವೇಗ ಹೆಚ್ಚಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ. ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 1,04,000 ರೂಪಾಯಿ ಎಂದು ಅಂದಾಜಿಸಲಾಗಿದ್ದು, ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಡಹಗಲೇ ನಡೆದ ಈ ಕೃತ್ಯದಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದ್ದು, ಖದೀಮರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Gold chain snatched by miscreants on a bike

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...