ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಮನಕಲಕುವ ಘಟನೆ ನಡೆದಿದೆ.
ಮೂಡಿಗೆರೆ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಸ್ಕೂಟಿ ರಭಸವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಕಮ್ಮರಗೋಡು ಮೂಲದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಗೋಣಿಬೀಡು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Head-on collision between a transport corporation bus and a two-wheeler.
Leave a comment