Home namma chikmagalur chikamagalur ಬಾಳೆಹೊನ್ನೂರಿನಲ್ಲಿ ಮನೆಗೆ ನುಗ್ಗಿ ಚಿನ್ನ-ನಗದು ಕಳವು
chikamagalurCrime NewsHomeLatest Newsnamma chikmagalur

ಬಾಳೆಹೊನ್ನೂರಿನಲ್ಲಿ ಮನೆಗೆ ನುಗ್ಗಿ ಚಿನ್ನ-ನಗದು ಕಳವು

Share
Share

ಬಾಳೆಹೊನ್ನೂರು: ಮನೆಯ ಬೀಗ ಮೀಟಿ ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಸುಮಾರು ₹4.90 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹10 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೇಗರಮಕ್ಕಿಯಲ್ಲಿ ನಡೆದಿದೆ.

ಮೇಗರಮಕ್ಕಿ ನಿವಾಸಿ ಬಿ.ಎಸ್. ಸತೀಶ್ ಅವರು ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಸತೀಶ್ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಮೊದಲನೇ ಮಗ ದರ್ಶನ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡನೇ ಮಗ ಧನುಷ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಮನೆಯಲ್ಲೇ ಕೃಷಿ ಕೆಲಸ ಮಾಡಿಕೊಂಡಿದ್ದಾರೆ.

ಸೆ.22ರಂದು ಸತೀಶ್ ಅವರ ಪತ್ನಿ ಪ್ರೇಮ ಹಾಗೂ ಪುತ್ರ ಧನುಷ್ ಅವರು ಅಸ್ವಸ್ಥರಾಗಿದ್ದ ಅತ್ತೆಯನ್ನು ನೋಡಲು ಸಂಜೆ ಸುಮಾರು 5 ಗಂಟೆಗೆ ಹುಣಸೆಕೊಪ್ಪಕ್ಕೆ ತೆರಳಿದ್ದರು. ಸತೀಶ್ ಅವರು ಮಾತ್ರ ಮನೆಯಲ್ಲಿ ಉಳಿದುಕೊಂಡಿದ್ದರು.

ಸೆ.24ರಂದು ಮಧ್ಯಾಹ್ನ ಸುಮಾರು 2.30ಕ್ಕೆ ಸತೀಶ್ ಅವರು ಸೊಸೈಟಿಗೆ ಈ-ಕೆವೈಸಿ ಮಾಡಿಸಲು ಮನೆಯಿಂದ ಹೊರಡುವ ಮುನ್ನ ಮನೆಯ ಬಾಗಿಲಿಗೆ ಬೀಗ ಹಾಕಿ ಭದ್ರವಾಗಿರುವುದನ್ನು ಖಚಿತಪಡಿಸಿಕೊಂಡಿದ್ದರು. ಬಳಿಕ ಮೇಲ್ಪಾಲ್‌ಗೆ ತೆರಳಿ ಈ-ಕೆವೈಸಿ ಮಾಡಿಸಿಕೊಂಡು ಸಂಜೆ ಸುಮಾರು 5.30ಕ್ಕೆ ಮನೆಗೆ ಮರಳಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಮನೆಯ ಬಾಗಿಲಿನ ಬೀಗ ಹಾಕುವ ಗೊಣಸನ್ನು ಯಾವುದೋ ಆಯುಧದಿಂದ ಮೀಟಿ ಜಖಂಗೊಳಿಸಿ ಒಳನುಗ್ಗಿದ್ದಾರೆ. ಬಳಿಕ ಬೆಡ್‌ರೂಂನಲ್ಲಿದ್ದ ಬೀರುವನ್ನೂ ಆಯುಧದಿಂದ ಮೀಟಿ ತೆರೆದು, ಕಬೋರ್ಡ್‌ನಲ್ಲಿ ಇಟ್ಟಿದ್ದ ಪತ್ನಿಯ ಮದುವೆ ಸಮಯದಲ್ಲಿ ಬಳುವಳಿಯಾಗಿ ನೀಡಲಾಗಿದ್ದ 35 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಸರ, ಅಂದಾಜು ₹4.90 ಲಕ್ಷ ಮೌಲ್ಯದದು, ಹಾಗೂ ₹10 ಸಾವಿರ ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮನೆಯೊಳಗೆ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಹಿನ್ನೆಲೆಯಲ್ಲಿ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಚಿನ್ನಾಭರಣ ಮತ್ತು ಹಣವನ್ನು ವಶಪಡಿಸಿಕೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.

Gold and cash stolen after break-in at a house in Balehonnur

Share

Leave a comment

Leave a Reply

Your email address will not be published. Required fields are marked *

Don't Miss

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

Related Articles

ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು....

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ...

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ...