Home namma chikmagalur chikamagalur ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ
chikamagalurCrime NewsHomeLatest Newsnamma chikmagalur

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ ಸಂಬಂಧ ಚಿಕ್ಕಮಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ನಿವಾಸಿ *ಯಶವಂತ್ ವಿ. (30)* ಅವರು ಈ ಕುರಿತು ದೂರು ನೀಡಿದ್ದಾರೆ. ದೂರಿನ ಪ್ರಕಾರ, ಯಶವಂತ್ ಅವರ ತಂದೆ ವೆಂಕಟೇಶ್ ಮೂರ್ತಿ ಅವರು ಮಗನ ವಿವಾಹಕ್ಕಾಗಿ ಕನ್ನಡ ಮ್ಯಾಟ್ರಿಮೋನಿಯಲ್‌ನಲ್ಲಿ ಬಯೋಡೇಟಾ ಅಪ್‌ಲೋಡ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಮಾಡಿದ ಮಹಿಳೆ ತನ್ನ ಹೆಸರು *ದೀಕ್ಷಿತಾ* ಎಂದು ಪರಿಚಯಿಸಿಕೊಂಡು ಯಶವಂತ್ ಅವರ ಬಯೋಡೇಟಾ ಇಷ್ಟವಾಗಿದೆ ಎಂದು ತಿಳಿಸಿದ್ದಾಳೆ.

ಬಳಿಕ ಯಶವಂತ್ ಅವರೊಂದಿಗೆ ದೀಕ್ಷಿತಾ ಮಾತನಾಡಲು ಆರಂಭಿಸಿದ್ದು, ಮಾರ್ಚ್ 18ರಿಂದ ನಿರಂತರವಾಗಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸುತ್ತಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕೆಲವು ದಿನಗಳ ಬಳಿಕ ತನ್ನ ತಂದೆ-ತಾಯಿ ಇಲ್ಲ. ಚಿಕ್ಕಪ್ಪ–ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದು, ಅವರು ಇತರರಿಂದ ಪಡೆದಿರುವ ಸಾಲ ತೀರಿಸುವಂತೆ ಮಾನಸಿಕವಾಗಿ ಒತ್ತಡ ಹೇರುತ್ತಿದ್ದಾರೆ ಎಂದು ದೀಕ್ಷಿತಾ ಹೇಳಿಕೊಂಡಿದ್ದಳು ಎನ್ನಲಾಗಿದೆ. ತನಗೆ ಹಣದ ಅಗತ್ಯವಿದ್ದು, ಯಶವಂತ್ ಅವರನ್ನು ಮದುವೆಯಾಗುವುದಾಗಿ ನಂಬಿಸಿ, ಸದ್ಯ ಸಾಲವಾಗಿ ಹಣ ನೀಡುವಂತೆ ಹಾಗೂ ಬಳಿಕ ತಂದೆ-ತಾಯಿಯ ಇನ್ಶೂರೆನ್ಸ್ ಹಣ ಬಂದ ನಂತರ ಹಣ ವಾಪಸ್ ನೀಡುವುದಾಗಿ ಹೇಳಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಮಾತುಗಳನ್ನು ನಂಬಿದ ಯಶವಂತ್ ಅವರು *ಜುಲೈ 19ರಿಂದ ಸೆಪ್ಟೆಂಬರ್ 3ರವರೆಗೆ ಹಂತ ಹಂತವಾಗಿ ಒಟ್ಟು ₹2,20,000* ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಂದ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹಣ ಪಡೆದ ಬಳಿಕವೂ ದೀಕ್ಷಿತಾ ಪ್ರತಿದಿನ ಒಂದಲ್ಲೊಂದು ಸಮಸ್ಯೆ ಹೇಳಿಕೊಂಡು ಮತ್ತಷ್ಟು ಹಣ ನೀಡುವಂತೆ ಕೇಳುತ್ತಿದ್ದಳು ಎನ್ನಲಾಗಿದೆ. ಇಬ್ಬರೂ ಭೇಟಿಯಾಗಲು ನಿರ್ಧರಿಸಿದಾಗ, ತಾನು ಚಿಕ್ಕಮಗಳೂರಿಗೆ ಬರುವುದಾಗಿ ಹೇಳಿ ಮೂರು ಬಾರಿ ತಿಳಿಸಿದ್ದರೂ ದೀಕ್ಷಿತಾ ಬಂದಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ವಿಡಿಯೋ ಕಾಲ್ ಮಾಡುವಂತೆ ಕೇಳಿದಾಗ ತನ್ನ ಬಳಿ ಮೊಬೈಲ್ ಫೋನ್ ಇಲ್ಲ ಎಂದು ಹೇಳಿ ಸ್ಮಾರ್ಟ್‌ಫೋನ್ ಕೊಡಿಸುವಂತೆ ಕೇಳಿದ್ದಾಳೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಯಶವಂತ್ ಅವರು ತಮ್ಮ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್ ಮೂಲಕ ಕಲ್ಲತ್ತಿಪುರಕ್ಕೆ ಮೊಬೈಲ್ ಫೋನ್ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿ ದೀಕ್ಷಿತಾಳ ಚಿಕ್ಕಪ್ಪ–ಚಿಕ್ಕಮ್ಮ ಎಂದು ಪರಿಚಯಿಸಿಕೊಂಡವರು ಮೊಬೈಲ್ ಸ್ವೀಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಂತರ ದೀಕ್ಷಿತಾ ವಿಡಿಯೋ ಕಾಲ್‌ನಲ್ಲಿ ಮಾತನಾಡಿದಾಗ ಯಶವಂತ್ ಅವರಿಗೆ ಅನುಮಾನ ಮೂಡಿದ್ದು, ಮ್ಯಾಟ್ರಿಮೋನಿಯಲ್‌ನಲ್ಲಿ ನೀಡಿದ್ದ ಮಾಹಿತಿಗೂ ವಾಸ್ತವಕ್ಕೂ ವ್ಯತ್ಯಾಸವಿರುವುದು ಗೊತ್ತಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ, ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಆನ್‌ಲೈನ್ ಮೂಲಕ ಹಣ ಹಾಗೂ ಮೊಬೈಲ್ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಿರುವ ಯಶವಂತ್, ಹಣ ಮತ್ತು ಮೊಬೈಲ್ ವಾಪಸ್ ಕೊಡಿಸುವಂತೆ ಹಾಗೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ *ಠಾಣಾ ಮೊ.ನಂ.49/2026, **ಐಟಿ ಕಾಯ್ದೆ ಕಲಂ 66(D) ಹಾಗೂ ಬಿಎನ್‌ಎಸ್ ಕಲಂ 318(4)* ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

₹2.20 lakh fraud after providing false information on a matrimonial site

Share

Leave a comment

Leave a Reply

Your email address will not be published. Required fields are marked *

Don't Miss

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ...

ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಬಂದ್‌ ಯಶಸ್ವಿ

ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್ ಯಶಸ್ವಿಯಾಯಿತು. ಬಂದ್ ಅಂಗವಾಗಿ ನಡೆದ ಪಟ್ಟಣದ ಸ್ವಾಗತ ಮಂಟಪದಿಂದ ಕುವೆಂಪು ಬಸ್ ನಿಲ್ದಾಣದವರೆಗೆ ನಡೆದ...

Related Articles

ತಂದೆ-ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ...

ಭತ್ತದ ಗದ್ದೆಯಲ್ಲಿ 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಕಳಸ: ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಕಣ್ಣಿಗೆ ಸುಮಾರು 12 ಅಡಿ ಉದ್ದದ ಬೃಹತ್...

ತಂದೆ-ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ...

ಅಕ್ಟೋಬರ್ ೧ ರಿಂದ ವಿದ್ಯುತ್ ಪೂರೈಕೆ ಸುಧಾರಣೆ

ಚಿಕ್ಕಮಗಳೂರು: ಜಿಲ್ಲೆಯ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ...