Home namma chikmagalur chikamagalur ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ
chikamagalurHomeLatest Newsnamma chikmagalur

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Share
Share

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಆಜಾದ್ ಪಾರ್ಕ್ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಎಸ್‌ಐಆರ್ ಪ್ರಕ್ರಿಯೆ ಮೂಲಕ ಅರ್ಹ ೧೩ ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಬಿಜೆಪಿ ತಮಗೆ ಮತ ನೀಡುವವರ ಹೆಸರನ್ನು ಮಾತ್ರ ಉಳಿಸಿಕೊಳ್ಳುವ ಕೆಲಸದಲ್ಲಿ ತಲ್ಲೀನವಾಗಿದೆ. ಇದಕ್ಕೆ ಜ್ಞಾನೇಶ್ ಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಯುವ ಮತದಾರರು ಕೇಂದ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಫಾರಂ ನಂ. ೬ಕ್ಕೆ ಬದಲಾವಣೆ ತಂದು ಯುವ ಮತದಾರರ ಮತದಾನದ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಅಂಬೇಡ್ಕರ್ ಪ್ರಜೆಗಳಿಗೆ ಮತದಾನದ ಹಕ್ಕು ನೀಡಿದರೆ ಬಿಜೆಪಿ ಮತದಾನದ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಭದ್ರಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ೪೦೦ ಕ್ಷೇತ್ರಗಳಲ್ಲಿ ಗೆಲ್ಲುತ್ತೇನೆ ಎಂದು ಹೇಳಿಕೊಂಡಿತ್ತು. ಆದರೆ ೨೦೪೦ ಕ್ಷೇತ್ರಗಳಲ್ಲಿ ಗೆದ್ದು ಮುಖಭಂಗ ಅನುಭವಿಸಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರಿಗೆ ದ್ರೋಹವಾಗುತ್ತಿದೆ ಎಂದು ದೂರಿದರು.

ಬಿಜೆಪಿ ಸರ್ಕಾರದ ವಿರುದ್ಧ ಜನ ತಿರುಗಿ ಬಿದ್ದಿರುವುದರಿಂದ ಆ ಪಕ್ಷದ ನಾಯಕರಿಗೆ ಈಗಾಗಲೇ ಆತಂಕ ಶುರುವಾಗಿದೆ. ಇದೇ ಕಾರಣದಿಂದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಕೆಲಸ ಮಾಡಲಾರಂಭಿಸಿದೆ. ಹಿಂದೆ ರಾಹುಲ್ ಗಾಂಧಿ ಅವರು ಎತ್ತಿದ ಎಲ್ಲ ವಿಷಯಗಳು ಇಂದು ಸತ್ಯವಾಗುತ್ತಿವೆ ಎಂದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಬಿಜೆಪಿ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೂಡಲೇ ಅವರನ್ನು ಮುಖ್ಯ ಆಯುಕ್ತ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು. ಜ್ಞಾನೇಶ್ ಕುಮಾರ್ ಒಬ್ಬ ಭ್ರಷ್ಟ ಅಧಿಕಾರಿ. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಬಿಜೆಪಿಯಿಂದ ತಮಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕಾಗಿ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನೇ ಇಟ್ಟುಕೊಂಡು ಬಿಜೆಪಿಗರು ಅವರನ್ನು ಬೆದರಿಸಿ ಮಾಡಬಾರದ ಕೆಲಸ ಮಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ. ಜ್ಞಾನೇಶ್ ಕುಮಾರ್ ಅವರಿಗೆ ಸಂಬಳ ನೀಡುತ್ತಿರುವುದು ಜನರ ತೆರಿಗೆ ಹಣದಿಂದ. ಆದರೆ ಅವರು ಬಿಜೆಪಿ ನಾಯಕರು ನಿಮ್ಮನ್ನು ಲೋಕಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರಿಂದಾಗಿ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಮುಖಂಡರಾದ ಎಂ.ಸಿ.ಶಿವಾನAದ ಸ್ವಾಮಿ, ಎಂ.ಎಲ್.ಮೂರ್ತಿ, ಎಚ್.ಎಚ್.ದೇವರಾಜ್, ಕೆ.ಮಹಮದ್, ನಯಾಜ್ ಅಹಮದ್, ಅಜೀಜ್ ಮತ್ತಿತರರಿದ್ದರು.

Congress workers stage a protest demanding the dismissal and arrest of Gyanesh Kumar.

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿರುವ...

Related Articles

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...