Home namma chikmagalur chikamagalur ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ
chikamagalurHomeLatest Newsnamma chikmagalur

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

Share
Share

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದ ತನಕ ಮೆರವಣಿಗೆ ನಡೆಸಿದ ರೈತರು, ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್, ‘ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಚಳವಳಿ ಹಮ್ಮಿಕೊಂಡಿದ್ದೇವೆ. ಜನವಿರೋಧಿ ರಾಜ್ಯ ಸರ್ಕಾರ ರಾಜ್ಯದ 101 ತಾಲ್ಲೂಕುಗಳನ್ನು ಬರ ಎಂದು ಘೋಷಣೆ ಮಾಡಿದೆ. ಚಿಕ್ಕಮಗಳೂರು ತಾಲ್ಲೂಕನ್ನು ಮಲತಾಯಿ ಧೋರಣೆಯಿಂದ ಕೈಬಿಡಲಾಗಿದೆ. ಲಕ್ಯಾ, ಕಸಬಾ ಹೋಬಳಿ, ಅಂಬಳೆ ಹೋಬಳಿಗಳು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತಿದೆ. ಹಾಗಾಗಿ ಅವುಗಳನ್ನು ಬರ ಪಟ್ಟಿಗೆ ಸೇರಿಸಬೇಕು’ ಎಂದು ಒತ್ತಾಯಿಸಿದರು.

*36 ವರ್ಷಗಳಿಂದ ಮಳಲೂರು ಏತನೀರಾವರಿ ಯೋಜನೆ ಈ ಕ್ಷೇತ್ರದಲ್ಲಿ ಆಯ್ಕೆಯಾದ ಶಾಸಕರ ಇಚ್ಚಾಶಕ್ತಿ ಕೊರತೆ ಹಾಗೂ ಬೇಜಬ್ದಾರಿಯಿಂದ ನೀರಾವರಿ ಯೋಜನೆ ಕುಂಠಿತವಾಗಿದೆ. ಆ ಭಾಗದ ರೈತರ ಕನಸು ಹಾಗೇ ಉಳಿದಿದೆ. ಆದ್ದರಿಂದ ಶಾಸಕರು 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಗಡುವು ನೀಡುತ್ತಿದೆ’ ಎಂದರು.

ಮಳಲೂರು ಏತನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡಬೇಕು. ಉಳಿದ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು. ಕಾಮಗಾರಿ ಆರಂಭಿಸದಿದ್ದರೆ ಮೂಡಿಗೆರೆ ಶಾಸಕರ ಮನೆ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಸ್ತೂರಿರಂಗನ್ ವರದಿ ಪಶ್ಚಿಮ ಘಟ್ಟದ ರೈತರಿಗೆ ಮಾರಕವಾಗಿದೆ. ಆದರಿಂದ ಯಾವುದೇ ಷರತ್ತು ಹಾಕದೆ ವರದಿ ಕೈಬಿಡಬೇಕು ಎಂದು ಒತ್ತಾಯಿಸಿದರು.

ಲಕ್ಯಾ ಹೋಬಳಿಯ ದಾಸರಹಳ್ಳಿ ಕೆರೆ ನೀರನ್ನು ಸೆಪ್ಟೆಂಬರ್ ತಿಂಗಳಲ್ಲಿ ತುಂಬಿಸಿ ಕೊಡುವುದಾಗಿ ಶಾಸಕರು ಭರವಸೆ ಕೊಟ್ಟಿದ್ದರು. ಈಗ ಸೆಪ್ಟೆಂಬರ್ ಕಳೆದು ಅಕ್ಟೋಬರ್ ಬಂದಿದೆ. ಕೆರೆಗೆ ನೀರು ತುಂಬಿಸಿಲ್ಲ. ಇದ್ದ ನೀರನ್ನು ಖಾಲಿ ಮಾಡಿದ್ದಾರೆ. ಕೂಡಲೇ ಈ ಕ್ಷೇತ್ರದ ಶಾಸಕರು ಒಂದು ವಾರದೊಳಗೆ ದಾಸರ ಹಳ್ಳಿ ಕೆರೆ ನೀರನ್ನು ತುಂಬಿಸಬೇಕು. ಜತೆಗೆ ಲಕ್ಯಾ ಹೋಬಳಿಯ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದು ಆಗ್ರಹಿಸಿದರು.

ಚಿಕ್ಕಮಗಳೂರು ತಾಲ್ಲೂಕಿನ ಗಂಗಜಲಗೋಡು ರೈಲ್ವೆ ಕಾಮಗಾರಿ ನಿರಾಶ್ರಿತ ರೈತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ಕೊಡದೆ ದಬ್ಬಾಳಿಕೆ ಮಾಡುತ್ತಿದೆ. ಅಮಾಯಕ ರೈತರ ಬೆಳೆ ಹಾಳು ಮಾಡಿ ಕಾಮಗಾರಿ ಆರಂಭ ಮಾಡಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಗುರುಶಾಂತಪ್ಪ, ಚಂದ್ರಶೇಖರ್, ಕುಮಾರಸ್ವಾಮಿ, ಭದ್ರೇಗೌಡ, ವೆಂಕ ಟೇಶ್, ಮಧುಶೇಖರ್ ಹಾಜರಿದ್ದರು.

State Farmers’ Association protests demanding fulfillment of various demands.

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿರುವ...

Related Articles

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...