ಚಿಕ್ಕಮಗಳೂರು: ಮತದಾರರ ಪಟ್ಟಿಯಿಂದ ಮತದಾರರನ್ನು ಕೈ ಬಿಡುವ ಚಟುವಟಿಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ನಡೆಯುತ್ತಿದ್ದು, ಇಂಥ ದು?ತ್ಯ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಮಂಜೇಗೌಡ ದೇಶದಾದ್ಯಂತ ಎ???ಆರ್ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬಿಎ??? ೨ಗಳು ಬಿಜೆಪಿಗೆ ಮತ ಹಾಕದ ಮತದಾರರನ್ನು ಗುರುತಿಸಿ ಅವರ ಹೆಸರಿನಲ್ಲಿ ಫಾರಂ ನಂ. ೭ಗಳನ್ನು ಬಿಎಲ್ ಓಗಳಿಗೆ ನೀಡಿ ಮುಗ್ಧ ಮತದಾರರ ಮತದಾನದ ಹಕ್ಕು ಮೊಟಕುಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮೂಡಿಗೆರೆ ತಾಲೂಕಿನಲ್ಲಿ ೧೭ಕ್ಕೂ ಹೆಚ್ಚು ಮತದಾರರ ಫಾರಂ ನಂ. ೭ ಸಲ್ಲಿಸಿದ್ದಾರೆ.
ಹಿರೇಮಗಳೂರು ಹಾಗೂ ಗೌರಿ ಕಾಲುವೆ ವಾರ್ಡ್ ಗಳಲ್ಲಿಯೂ ಇದೇ ರೀತಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೇರವಾಗಿ ಚುನಾವಣೆ ಎದುರಿಸಲು ಸಾಧ್ಯವಾಗದೆ ಪರೋಕ್ಷವಾಗಿ ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ದಲಿತರ ಮತಗಳನ್ನು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲೂ ತೆಗೆದುಹಾಕಲು ಪ್ರಯತ್ನಿಸಲಾಗುತ್ತಿದೆ. ಕೆಲ ಪಕ್ಷಗಳಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ನೇರ ಯುದ್ಧದಲ್ಲಿ ಗೆಲ್ಲಲು ಸಾಧ್ಯವಾಗದೆ ಈ ರೀತಿಯ ವಾಮಮಾರ್ಗ ಹಿಡಿದಿವೆ ಎಂದು ದೂರಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಇಲ್ಲದವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ. ತಮ್ಮ ರಾಜಕೀಯ ತೆವಲಿಗಾಗಿ ಜಾತಿ ಧರ್ಮಗಳ ನಡುವೆ ವಿ? ಬೀಜ ಬಿತ್ತುತ್ತಾ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರೇ ಆಗಿರಲಿ ಅರ್ಹ ಮತದಾರರಿಗೆ ಮತದಾನದ ಹಕ್ಕು ನೀಡಬೇಕು. ಆದರೆ ಸೋಲಿನ ಭೀತಿಯಿಂದ ಹತಾಶರಾಗಿರುವ ಬಿಜೆಪಿ ನಾಯಕರು ತಮಗೆ ಮತ ನೀಡದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಅವರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಕೆಲಸ ಮಾಡುತ್ತಿದ್ದಾರೆ. ಇಂಥ ದು?ತ್ಯ ನಡೆಸುವ ಯಾರೇ ಅಗಲಿ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮತದಾರರ ಗುರುತಿನ ಚೀಟಿ ಇಲ್ಲ ಎಂದರೆ ಅವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ ಇಲ್ಲ ಎಂದರೆ ಸರ್ಕಾರದ ಯಾವುದೇ ಸವಲತ್ತು ಪಡೆಯಲು ಸಾಧ್ಯವಾಗುವುದಿಲ್ಲ. ಕೆಲ ಪಕ್ಷಗಳ ರಾಜಕೀಯ ಕಾರಣದಿಂದಾಗಿ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಜೊತೆಗೆ ಸರ್ಕಾರದ ಸೌಲಭ್ಯಗಳಿಂದಲೂ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ ಎಂದು ದೂರಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಕಾಂಗ್ರೆಸ್ ಮುಖಂಡರುಗಳಾದ ಪ್ರವೀಣ್ ಬೆಟ್ಟ ಗೆರೆ ಹಿರೇಗೌಜ ಶಿವು ಮಲ್ಲೇಶ್ ಸ್ವಾಮಿ ಮತ್ತಿತರರಿದ್ದರು.
Take action against those who exclude people from the voters’ list.
Leave a comment