Home Crime News ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು
Crime NewsHomeKadurLatest Newsnamma chikmagalur

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

Share
Share

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ₹90 ಸಾವಿರ ನಗದು ಹಾಗೂ 77 ಗ್ರಾಂ ತೂಕದ ಚಿನ್ನಾಭರಣ ಸೇರಿದಂತೆ ಒಟ್ಟು ₹7.06 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಕಡೂರು ಪಟ್ಟಣದಲ್ಲಿ ನಡೆದಿದೆ.

ಕಡೂರು ಪಟ್ಟಣದ ವೈಎಂಸಿ ಕಾಲೇಜು ಸಮೀಪದ ನಿವಾಸಿ ಬಿ.ಎಸ್. ತಿಮ್ಮಪ್ಪ ಅವರು ಈ ಕುರಿತು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುದಾರ ತಿಮ್ಮಪ್ಪ ಅವರು ಪತ್ನಿ ಶಿವಮ್ಮ ಅವರೊಂದಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಸೆ.26ರಂದು ಬೆಳಗ್ಗೆ 6.30ಕ್ಕೆ ದಾವಣಗೆರೆಗೆ ತೆರಳಿದ್ದರು. ಮನೆಗೆ ಇಂಟರ್‌ಲಾಕ್ ಹಾಗೂ ಮತ್ತೊಂದು ಬೀಗ ಹಾಕಿ, ಪಕ್ಕದ ಮನೆಯಲ್ಲಿದ್ದ ಪುತ್ರಿ ಯಶೋಧ ಅವರಿಗೆ ಮನೆ ನೋಡಿಕೊಳ್ಳುವಂತೆ ತಿಳಿಸಿದ್ದರು. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ದಂಪತಿ ಚಿತ್ರದುರ್ಗದಲ್ಲಿರುವ ಪುತ್ರನ ಮನೆಗೆ ತೆರಳಿದ್ದರು.

ಸೆ.29ರಂದು ರಾತ್ರಿ 11 ಗಂಟೆ ಸುಮಾರಿಗೆ ಯಶೋಧ ಅವರು ಮನೆ ನೋಡಿದಾಗ ಬೀಗ ಸರಿಯಾಗಿತ್ತು. ಆದರೆ ಸೆ.30ರಂದು ಬೆಳಗ್ಗೆ 6.30ಕ್ಕೆ ನೋಡಿದಾಗ ಮನೆಯ ಮುಂಭಾಗದ ಬೀಗ ಮುರಿದಿದ್ದು, ಬಾಗಿಲನ್ನು ಆಯುಧದಿಂದ ಮೀಟಿ ಒಳನುಗ್ಗಿರುವುದು ಕಂಡುಬಂದಿದೆ. ಕೂಡಲೇ ಅವರು ತಂದೆಗೆ ಮಾಹಿತಿ ನೀಡಿದ್ದಾರೆ.

ತಿಮ್ಮಪ್ಪ ಅವರು ಚಿತ್ರದುರ್ಗದಿಂದ ಕಡೂರಿಗೆ ಬಂದು ಪರಿಶೀಲಿಸಿದಾಗ, ಮನೆಯ ಎರಡು ಕೊಠಡಿಗಳಲ್ಲಿದ್ದ ಕಬೋರ್ಡ್‌ಗಳನ್ನು ಮೀಟಿ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ಕಳ್ಳರು ಒಂದು ಕಬೋರ್ಡ್‌ನಲ್ಲಿದ್ದ ₹90 ಸಾವಿರ ನಗದು ಹಾಗೂ ವಿವಿಧ ಚಿನ್ನಾಭರಣಗಳು, ಮತ್ತೊಂದು ಕೊಠಡಿಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಒಟ್ಟು 77 ಗ್ರಾಂ ತೂಕದ ಚಿನ್ನಾಭರಣಗಳ ಅಂದಾಜು ಮೌಲ್ಯ ₹6.16 ಲಕ್ಷ ಹಾಗೂ ನಗದು ₹90 ಸಾವಿರ ಸೇರಿ ₹7.06 ಲಕ್ಷ ಮೌಲ್ಯದ ವಸ್ತುಗಳು ಕಳವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೆ.29ರ ರಾತ್ರಿ 11 ಗಂಟೆಯಿಂದ ಸೆ.30ರ ಬೆಳಗ್ಗೆ 6.30ರ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿರುವ ಸಾಧ್ಯತೆಯಿದ್ದು, ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳ್ಳರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

House broken into; jewelry and cash worth ₹7.06 lakh stolen.

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್,...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...