Home namma chikmagalur chikamagalur ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ
chikamagalurHomeLatest Newsnamma chikmagalur

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

Share
Share

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ನ್ನು ಬರೋಬ್ಬರಿ 60 ಕಿ.ಮೀ. ದೂರ ಸುರಕ್ಷಿತವಾಗಿ ಚಲಾಯಿಸಿ ಪ್ರಯಾಣಿಕರ ಜೀವ ಕಾಪಾಡಿದ ಚಾಲಕನ ಸಮಯಪ್ರಜ್ಞೆ ಹಾಗೂ ಚಾಲನಾ ಕೌಶಲಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಕೋಲಾರ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ ಶೃಂಗೇರಿಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಚಿಕ್ಕಮಗಳೂರು-ಬಾಳೆಹೊನ್ನೂರು ಮಾರ್ಗವು ದಟ್ಟ ಅರಣ್ಯ ಹಾಗೂ ಕಾಫಿ ತೋಟಗಳ ನಡುವೆ ಹಾದುಹೋಗುವ ಜೊತೆಗೆ ಹಲವು ಅಪಾಯಕಾರಿ ತಿರುವುಗಳಿಂದ ಕೂಡಿದೆ.

ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ಬಸ್‌ನ ಹೆಡ್‌ಲೈಟ್‌ ಕೆಟ್ಟುಹೋಗಿದೆ. ರಾತ್ರಿ ವೇಳೆಯಾಗಿದ್ದರಿಂದ ಮುಂದಿನ ರಸ್ತೆ ಸ್ಪಷ್ಟವಾಗಿ ಕಾಣದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಚಾಲಕ ಎದೆಗುಂದದೆ ಅತ್ಯಂತ ಜಾಗರೂಕತೆಯಿಂದ ಬಸ್‌ ಚಲಾಯಿಸಿದ್ದಾರೆ. ಸುಮಾರು 60 ಕಿ.ಮೀ. ದೂರವನ್ನು ಕತ್ತಲಲ್ಲೇ ಕ್ರಮಿಸಿ ರಾತ್ರಿ 10.30ರ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾ ಕೇಂದ್ರವನ್ನು ಸುರಕ್ಷಿತವಾಗಿ ತಲುಪಿಸಿದ್ದಾರೆ.

ಚಾಲಕನ ಈ ಸಾಹಸಮಯ ಚಾಲನೆಯ ದೃಶ್ಯವನ್ನು ಬಸ್‌ನ ಹಿಂಬದಿಯಿಂದ ಬರುತ್ತಿದ್ದ ಬೈಕ್‌ ಸವಾರರು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹಗಲಿನ ವೇಳೆಯಲ್ಲೇ ಸಂಚರಿಸಲು ಕಷ್ಟವಾಗುವ ಹೊಂಡ-ಗುಂಡಿಗಳ ರಸ್ತೆಯಲ್ಲಿ, ಅದರಲ್ಲೂ ರಾತ್ರಿ ವೇಳೆ ಹೆಡ್‌ಲೈಟ್‌ ಇಲ್ಲದೆ ಬಸ್‌ ಚಲಾಯಿಸಿರುವುದು ಅಪಾಯಕಾರಿ. ಆದರೂ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಾಲಕ ಅತ್ಯಂತ ಎಚ್ಚರಿಕೆಯಿಂದ ಬಸ್‌ ಚಲಾಯಿಸಿ ಗಮ್ಯಸ್ಥಾನ ತಲುಪಿಸಿರುವುದು ಪ್ರಶಂಸೆಗೆ ಪಾತ್ರವಾಗಿದೆ.

ಇದೇ ವೇಳೆ, ಸರ್ಕಾರಿ ಬಸ್‌ಗಳ ನಿರ್ವಹಣೆ ಕುರಿತು ಸಾರ್ವಜನಿಕ ವಲಯದಲ್ಲಿ ಅಸಮಾಧಾನವೂ ವ್ಯಕ್ತವಾಗಿದೆ. ಬಸ್‌ ಮಾರ್ಗಮಧ್ಯೆ ಹೆಡ್‌ಲೈಟ್‌ ಕೆಟ್ಟಿತೇ ಅಥವಾ ಡಿಪೋದಿಂದ ಹೊರಡುವ ಮುನ್ನವೇ ದೋಷವಿದ್ದಿತೇ ಎಂಬುದನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಬೇಕು. ಪ್ರಯಾಣಿಕರ ಜೀವಕ್ಕೆ ಅಪಾಯವಾಗದಂತೆ ಬಸ್‌ಗಳ ತಾಂತ್ರಿಕ ಸ್ಥಿತಿಯನ್ನು ಸಮರ್ಪಕವಾಗಿ ಪರಿಶೀಲಿಸಿ, ದೋಷ ಕಂಡುಬಂದರೆ ದುರಸ್ತಿ ಮಾಡಿದ ಬಳಿಕವೇ ಸಂಚಾರಕ್ಕೆ ಬಿಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

KSRTC bus plying on the road without headlights.

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು...