Home namma chikmagalur chikamagalur ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ
chikamagalurHomeLatest Newsnamma chikmagalur

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

Share
Share

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ ಕಾರ್ಗದ್ದೆ ಗ್ರಾಮದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ ಈ ಕಾಳಿಂಗ ಸರ್ಪವು ನಾಗರಹಾವನ್ನೇ ಜೀವಂತವಾಗಿ ನುಂಗಿ, ಆಯಾಸದಿಂದ ಅದೇ ಮನೆಯಂಗಳದಲ್ಲಿ ನಿದ್ರೆಗೆ ಜಾರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹಾವು ಇನ್ನೊಂದು ಹಾವನ್ನು ನುಂಗಿರುವ ಅಪರೂಪದ ಹಾಗೂ ಭಯಾನಕ ದೃಶ್ಯವನ್ನು ಕಂಡು ಮನೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ತೀವು ಆತಂಕಕ್ಕೊಳಗಾಗಿದ್ದರು.

ತಕ್ಷಣ ಎಚ್ಚೆತ್ತ ಗ್ರಾಮಸ್ಥರು ಉರಗ ತಜ್ಞ ಸ್ನೇಕ್ ರಿಜ್ವಾನ್ ಅವರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿಯ ಉಪಸ್ಥಿತಿಯಲ್ಲಿ ಕಾರ್ಯಾಚರಣೆಗೆ ಇಳಿದ ಸ್ನೇಕ್ ರಿಜ್ಞಾನ್, ಸ್ಥಳೀಯರ ಸಹಕಾರದೊಂದಿಗೆ ಈ ಬೃಹತ್ ಗಾತ್ರದ ಕಾಳಿಂಗ ಸರ್ವವನ್ನು ಅತ್ಯಂತ ಜಾಗರೂಕತೆಯಿಂದ ರಕ್ಷಿಸಿ ಸೆರೆಹಿಡಿದಿದ್ದಾರೆ.

ಸುರಕ್ಷಿತವಾಗಿ ಸೆರೆಹಿಡಿಯಲಾದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಬಳಿಕ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ದಟ್ಟ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ನೈಸರ್ಗಿಕ ಆವಾಸಸ್ಥಾನಕ್ಕೆ ಮುಕ್ತವಾಗಿ ಬಿಡಲಾಯಿತು.
ಯಾವುದೇ ಅಹಿತಕರ ಘಟನೆ ಸಂಭವಿಸದೆ ಬೃಹತ್ ಹಾವು ಸುರಕ್ಷಿತವಾಗಿ ಸೆರೆಯಾಗುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ

Huge King Cobra spotted in Kalasa

Share

Leave a comment

Leave a Reply

Your email address will not be published. Required fields are marked *

Don't Miss

ಭತ್ತದ ಗದ್ದೆಯಲ್ಲಿ 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಕಳಸ: ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಕಣ್ಣಿಗೆ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಗೋಚರಿಸಿದ್ದು, ಸ್ಥಳೀಯರಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು....

ತಂದೆ-ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ ಶ್ರೇಷ್ಠ ಗಾಯಕ ಡಾ.ವಿದ್ಯಾಭೂಷಣ ಹಾಗೂ ಅವರ ಪುತ್ರಿ ಮೇಧಾ ವಿದ್ಯಾಭೂಷಣ ಅವರ ಅಮೋಘ ಗಾಯನ...

Related Articles

ಅಧಿಕಾರಿಗಳು ಶೌಚಾಲಯ ನೀಡಲೂ ಜಾತಿ ಕೇಳುತ್ತಾರೆ

ಶೃಂಗೇರಿ: ಮೂಲಸೌಕರ್ಯ ಕಲ್ಪಿಸಬೇಕಾದ ಅಧಿಕಾರಿಗಳು ಶೌಚಾಲಯ ನೀಡಲೂ ಜಾತಿ ಕೇಳುತ್ತಾರೆ ಎಂದರೆ ನಂಬುತ್ತೀರಾ? ಹೌದು, ಇಂತಹದ್ದೊಂದು...

ಪೌರಕಾರ್ಮಿಕರು ಒಳಚರಂಡಿ ಮ್ಯಾನ್‌ಹೋಲ್‌ಗೆ ಇಳಿಯಬಾರದು

ಚಿಕ್ಕಮಗಳೂರು : ನಗರಸಭೆಯ ಯುಜಿಡಿ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಸುರಕ್ಷತಾ ನಿಯಮಗಳ ಕುರಿತು ನಡೆದ...

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಯಮವೇ ಅಸ್ತ್ರ

ಚಿಕ್ಕಮಗಳೂರು : ಯುವಜನರು ಮಾದಕವಸ್ತು ಹಾಗೂ ಇತರ ದುಶ್ಚಟಗಳಿಂದ ದೂರವಿದ್ದು, ಸಂಯಮ ಮತ್ತು ಶಿಸ್ತಿನ ಜೀವನವನ್ನು...

ಬಂಟರ ಯಾನೆ ನಾಡವರ ಸಂಘದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಚಿಕ್ಕಮಗಳೂರು: ಸಮಾಜದಲ್ಲಿ ದುಡಿದಿದ್ದನ್ನು ಸಮಾಜಕ್ಕೆ ವಿನಿಯೋಗಿಸಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂದು ಉದ್ಯಮಿ...