Home namma chikmagalur chikamagalur ಗೋಕಳ್ಳರು ಹಸುವನ್ನು ಹೊತ್ತೊಯ್ಯುವಾಗ ಹಿಂದೆ ಓಡಿದ ತಾಯಿ ಹಸು
chikamagalurHomeLatest Newsnamma chikmagalur

ಗೋಕಳ್ಳರು ಹಸುವನ್ನು ಹೊತ್ತೊಯ್ಯುವಾಗ ಹಿಂದೆ ಓಡಿದ ತಾಯಿ ಹಸು

Share
Share

ಚಿಕ್ಕಮಗಳೂರು: ಹಸುವಿನ ಕತ್ತಿಗೆ ಹಗ್ಗ ಹಾಕಿ ಧರಧರನೆ ಎಳೆದುಕೊಂಡು ಹೋಗುತ್ತಿದ್ದ ಗೋಕಳ್ಳರ ಹಿಂದೆ ತಾಯಿ ಹಸುವೊಂದು ಓಡಿಬಂದ ಮನಕಲಕುವ ಘಟನೆ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ.

ಬಿಳಗುಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ–173ರ ಸಮೀಪದಲ್ಲಿ ಘಟನೆ ನಡೆದಿದ್ದು, ಗೋಕಳ್ಳರು ಹಸುವೊಂದನ್ನು ಕಳ್ಳತನ ಮಾಡಿ ಕರೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಸುವನ್ನು ಕರೆದೊಯ್ಯುತ್ತಿದ್ದ ವೇಳೆ ಅದರೊಂದಿಗೆ ಇದ್ದ ತಾಯಿ ಹಸು ಕೂಡ ಹಿಂಬಾಲಿಸಿಕೊಂಡು ಓಡುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ ಎನ್ನಲಾಗಿದೆ.

ಗೋಕಳ್ಳರು ಹಸುವಿನ ಕತ್ತಿಗೆ ಹಗ್ಗ ಹಾಕಿ ಬಲವಂತವಾಗಿ ಎಳೆದುಕೊಂಡು ಹೋಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ಮೂಡಿಗೆರೆ ತಾಲೂಕಿನ ವಿವಿಧೆಡೆ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಗೋವುಗಳ ಸುರಕ್ಷತೆ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಿ ಗೋಕಳ್ಳರ ಪತ್ತೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

The mother cow running after the cow thieves as they carried the cow away.

Share

Leave a comment

Leave a Reply

Your email address will not be published. Required fields are marked *

Don't Miss

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ ತುಳಿದು ಕೊಲೆ ಮಾಡಿರುವ ಆರೋಪದಡಿ ದಂಪತಿ ವಿರುದ್ಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

Related Articles

ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರ ಸಾವು

ಚಿಕ್ಕಮಗಳೂರು: ಶಾಲೆಗೆ ರಜೆ ಇದ್ದ ಕಾರಣ ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ...

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...