Home namma chikmagalur chikamagalur ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ
chikamagalurCrime NewsHomeLatest Newsnamma chikmagalur

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

Share
Share

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್ ಮಾಡಿದ ಪರಿಣಾಮ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಣಿಪಾಲದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ, ಜಯಪುರ ಸಮೀಪದ ಚೌಡಿಕಟ್ಟೆಯ ಮನೋಜ್ ಕುಮಾರ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ನಡುವೆ ಕಳಸ ತಾಲೂಕಿನ ಸುಂಕಸಲೆಯ ಅರುಣ್ ಎಂಬಾತ ಪರಿಚಯವಾಗಿ, ಆಕೆಯನ್ನು ಪುಸಲಾಯಿಸಿ ಮೊಬೈಲ್ ಸಂಖ್ಯೆ ಪಡೆದು ಉಜಿರೆಗೆ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೇ ಅಲ್ಲದೆ, ಆ ದೃಶ್ಯಾವಳಿಗಳನ್ನು ಚಿತ್ರೀಕರಿಸಿಕೊಂಡಿದ್ದ ಆರೋಪಿ ಅರುಣ್, ತಾನು ಕೇಳಿದಾಗ ಹಣ ನೀಡದಿದ್ದರೆ ಖಾಸಗಿ ವಿಡಿಯೋಗಳನ್ನು ಕುಟುಂಬಸ್ಥರಿಗೆ ಕಳುಹಿಸುವುದಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ನಿರಂತರವಾಗಿ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಆರೋಪಿಗಳ ಕಿರುಕುಳ ಹಾಗೂ ಬ್ಲ್ಯಾಕ್ಮೇಲ್ನಿಂದ ತೀವ್ರವಾಗಿ ಮನನೊಂದ ಯುವತಿ ಸೆಪ್ಟೆಂಬರ್ 23ರಂದು ವಿಷ ಸೇವಿಸಿದ್ದು, ತೀವ ಅಸ್ವಸ್ಥಗೊಂಡಿದ್ದ ಆಕೆಯನ್ನು ಕೊಪ್ಪ ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ತಮ್ಮ ಮಗಳ ಸಾವಿಗೆ ಅರುಣ್ ಹಾಗೂ ಮನೋಜ್ ನೀಡಿದ ಲೈಂಗಿಕ ಹಾಗೂ ಮಾನಸಿಕ ಕಿರುಕುಳವೇ ನೇರ ಕಾರಣವೆಂದು ಮೃತಳ ಪೋಷಕರು ಆರೋಪಿಸಿದ್ದು, ಇಬ್ಬರು ಆರೋಪಿಗಳ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Young woman commits suicide after being harassed and blackmailed for money.

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...