Home namma chikmagalur chikamagalur ಸಾಲ ತೀರಿಸಲಾಗದೆ ಕಂಗಾಲಾದ ಇಬ್ಬರು ರೈತರು ಆತ್ಮಹತ್ಯೆ
chikamagalurCrime NewsHomeLatest Newsnamma chikmagalur

ಸಾಲ ತೀರಿಸಲಾಗದೆ ಕಂಗಾಲಾದ ಇಬ್ಬರು ರೈತರು ಆತ್ಮಹತ್ಯೆ

Share
Share

ಕಡೂರು: ಮಳೆ ಕೈಕೊಟ್ಟು ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಕಂಗಾಲಾದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆಗಳು ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿವೆ.

ಭೈರಗೊಂಡನಹಳ್ಳಿ ಗ್ರಾಮದ ಬಸವರಾಜ (44) ಎಂಬ ರೈತರು ತಮ್ಮ 3 ಎಕರೆ 20 ಗುಂಟೆ ತೋಟ ಮತ್ತು ಜಮೀನಿನ ಅಭಿವೃದ್ಧಿಗಾಗಿ ವಿವಿಧ ಬ್ಯಾಂಕ್ ಹಾಗೂ ಸ್ತ್ರೀಶಕ್ತಿ ಸಂಘಗಳಲ್ಲಿ ಸುಮಾರು 4.80 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಈ ಬಾರಿ ಸರಿಯಾಗಿ ಮಳೆ ಬಾರದೆ ಬೆಳೆ ಕೈಕೊಟ್ಟಿದ್ದರಿಂದ ತೀವ್ರ ಮನನೊಂದಿದ್ದ ಅವರು ಅಕ್ಟೋಬರ್ 3ರಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದರು.

ಬಳಿಕ ಗ್ರಾಮದ ಸಮೀಪದ ಅರಣ್ಯ ಇಲಾಖೆಯ ಪ್ಲಾಂಟೇಶನ್ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಮೃತ ರೈತನ ಮಗ ಜೀವನ್ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮತ್ತೊಂದೆಡೆ, ಕೊತ್ತಿಗೆರೆ ಗ್ರಾಮದ ಶಂಕರಯ್ಯ (60) ಎಂಬ ಅನ್ನದಾತರು ತಮ್ಮ 3 ಎಕರೆ ಜಮೀನಿನ ಕೃಷಿ ಕೆಲಸಕ್ಕಾಗಿ ಖಾಸಗಿ ಫೈನಾನ್ಸ್ ಮೂಲಕ ಸುಮಾರು 4.01 ಲಕ್ಷ ರೂಪಾಯಿ ಸಾಲ ಪಡೆದು ಟ್ರಾಕ್ಟರ್ ಖರೀದಿಸಿದ್ದರು. ಎರಡು ಕಂತುಗಳನ್ನು ಪಾವತಿಸಿದ ಬಳಿಕ ಮಳೆ ಬಾರದೆ ಬೆಳೆ ನಷ್ಟ ಉಂಟಾಗಿದ್ದರಿಂದ ಬಾಕಿ ಸಾಲ ತೀರಿಸಲು ದಾರಿಕಾಣದೆ ತೀವು ಆತಂಕಕ್ಕೊಳಗಾಗಿದ್ದರು.

ಸಾಲದ ಚಿಂತೆಯಿಂದಲೇ ಅಕ್ಟೋಬರ್ 5ರ ರಾತ್ರಿ ತೋಟದ ಮನೆಯ ಶೆಡ್‌ನಲ್ಲಿ ವಿಷ ಸೇವಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಕಡೂರು ಹಾಗೂ ಚಿಕ್ಕಮಗಳೂರು ಮಲ್ಲೇಗೌಡ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬ‌ರ್ 6ರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೃತ ರೈತನ ಪುತ್ರ ಸತೀಶ್ ದೂರು ನೀಡಿದ್ದಾರೆ.

ಈ ಎರಡೂ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಗಟಿ ಠಾಣೆ ಪೊಲೀಸರು ಅಸಹಜ ಸಾವು (ಯುಡಿಆರ್) ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Two farmers distressed over their inability to repay loans commit suicide.

Share

Leave a comment

Leave a Reply

Your email address will not be published. Required fields are marked *

Don't Miss

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಸಂಘಟನ್ ಸೃಜನ್ ಅಭಿಯಾನ–2 ಅಡಿ ಪ್ರಕ್ರಿಯೆ ಆರಂಭವಾಗಿದೆ. ಬ್ಲಾಕ್...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ ಕಾರ್ಗದ್ದೆ ಗ್ರಾಮದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ ಈ ಕಾಳಿಂಗ ಸರ್ಪವು ನಾಗರಹಾವನ್ನೇ...

Related Articles

ಚಿಕ್ಕಮಗಳೂರು ಮೋಟಾರು ವಾಹನ ನಿರೀಕ್ಷಕ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರು: ವಾಹನಗಳನ್ನು ಭೌತಿಕವಾಗಿ ಪರಿಶೀಲಿಸದೇ ಫಿಟ್‌ನೆಸ್ ಸರ್ಟಿಫಿಕೇಟ್‌ (FC) ನೀಡಿರುವ ಆರೋಪ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ...

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಯ ಕನಸು ಹೊತ್ತು ಕಠಿಣ ಅಭ್ಯಾಸದಲ್ಲಿ ತೊಡಗಿದ್ದ 24 ವರ್ಷದ ಯುವಕನೊಬ್ಬ...

ಮೂರು ಪ್ರತ್ಯೇಕ ಅಪಘಾತ ಪ್ರಕರಣ ದಾಖಲು; ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು, ಲಿಂಗದಹಳ್ಳಿ ಹಾಗೂ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ...

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ...