Home namma chikmagalur chikamagalur ಸೇವೆಯಿಂದ ಡಿಆರ್‌ಎಫ್ ರವಿಕುಮಾರ್ ಅಮಾನತು
chikamagalurHomeLatest Newsnamma chikmagalur

ಸೇವೆಯಿಂದ ಡಿಆರ್‌ಎಫ್ ರವಿಕುಮಾರ್ ಅಮಾನತು

Share
Share

ಮೂಡಿಗೆರೆ: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಅಕ್ರಮಗಳ ವಿರುದ್ಧದ ಸಾರ್ವಜನಿಕ ಹೋರಾಟಕ್ಕೆ ಕೊನೆಗೂ ಮಹತ್ವದ ಫಲ ಸಿಕ್ಕಿದೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಾಣ, ಭಾರೀ ಪ್ರಮಾಣದಲ್ಲಿ ಮರಗಳ ಮಾರಣಹೋಮ ಹಾಗೂ ಅರಣ್ಯ ಭೂಮಿ ಒತ್ತುವರಿ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ಸಮಗ್ರ ವಿಚಾರಣೆ ನಡೆಸಿ, ಕರ್ತವ್ಯಲೋಪದ ಆರೋಪದಡಿ ಡಿಆರ್‌ಎಫ್ ರವಿಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪರಿಸರ ರಕ್ಷಣೆಗಾಗಿ ಸಾಮಾಜಿಕ ಕಾರ್ಯಕರ್ತರಾದ ಅರೆನೂರು ಸುಪ್ರೀತ್ ಹಾಗೂ ರತನ್ ಊರುಬಗೆ ಅವರು ನಿರಂತರವಾಗಿ ದನಿ ಎತ್ತಿ, ಸಂಬಂಧಪಟ್ಟ ಉನ್ನತ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳ ಸಮೇತ ದೂರು ಸಲ್ಲಿಸಿ ಗಮನ ಸೆಳೆದಿದ್ದರು.

ಇವರ ನಿರಂತರ ಕಾನೂನು ಹೋರಾಟ ಹಾಗೂ ಪ್ರತಿಭಟನೆಯ ಫಲವಾಗಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಈ ಕಠಿಣ ಕ್ರಮ ಕೈಗೊಂಡಿದ್ದು, ಪರಿಸರ ಪ್ರೇಮಿಗಳಲ್ಲಿ ಮತ್ತು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

DRF Ravikumar suspended from service.

Share

Leave a comment

Leave a Reply

Your email address will not be published. Required fields are marked *

Don't Miss

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಸಂಘಟನ್ ಸೃಜನ್ ಅಭಿಯಾನ–2 ಅಡಿ ಪ್ರಕ್ರಿಯೆ ಆರಂಭವಾಗಿದೆ. ಬ್ಲಾಕ್...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ ಕಾರ್ಗದ್ದೆ ಗ್ರಾಮದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ ಈ ಕಾಳಿಂಗ ಸರ್ಪವು ನಾಗರಹಾವನ್ನೇ...

Related Articles

ಚಿಕ್ಕಮಗಳೂರು ಮೋಟಾರು ವಾಹನ ನಿರೀಕ್ಷಕ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರು: ವಾಹನಗಳನ್ನು ಭೌತಿಕವಾಗಿ ಪರಿಶೀಲಿಸದೇ ಫಿಟ್‌ನೆಸ್ ಸರ್ಟಿಫಿಕೇಟ್‌ (FC) ನೀಡಿರುವ ಆರೋಪ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ...

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಯ ಕನಸು ಹೊತ್ತು ಕಠಿಣ ಅಭ್ಯಾಸದಲ್ಲಿ ತೊಡಗಿದ್ದ 24 ವರ್ಷದ ಯುವಕನೊಬ್ಬ...

ಮೂರು ಪ್ರತ್ಯೇಕ ಅಪಘಾತ ಪ್ರಕರಣ ದಾಖಲು; ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು, ಲಿಂಗದಹಳ್ಳಿ ಹಾಗೂ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ...

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ...