Home namma chikmagalur chikamagalur ಸಿ.ಟಿ.ರವಿಯಿಂದ ನೂತನ ಅರಣ್ಯ ಭವನದ ಕಾಮಗಾರಿ ಪರಿಶೀಲನೆ
chikamagalurHomeLatest Newsnamma chikmagalur

ಸಿ.ಟಿ.ರವಿಯಿಂದ ನೂತನ ಅರಣ್ಯ ಭವನದ ಕಾಮಗಾರಿ ಪರಿಶೀಲನೆ

Share
Share

ಚಿಕ್ಕಮಗಳೂರು: ನಗರದಲ್ಲಿ ೯.೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಟ್ಟಡದ ಅಂತಿಮ ಹಂತದ ಸಣ್ಣಪುಟ್ಟ ತಿದ್ದುಪಡಿಗಳನ್ನು ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕಮಗಳೂರು ನಗರದಲ್ಲಿ ನಿರ್ಮಿಸಲಾಗಿರುವ ಅರಣ್ಯ ಭವನಕ್ಕೆ ಗುರುವಾರ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಟ್ಟಡದ ಹೊರಾಂಗಣ ವಿನ್ಯಾಸ ಉತ್ತಮವಾಗಿ ಮೂಡಿಬಂದಿದೆ. ಉಳಿದಿರುವ ಸಣ್ಣಪುಟ್ಟ ಕೆಲಸಗಳನ್ನು ಮತ್ತಷ್ಟು ಅಚ್ಚುಕಟ್ಟಾಗಿ ಪೂರ್ಣಗೊಳಿಸಲು ಅಗತ್ಯ ಸಲಹೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಅರಣ್ಯ ಭವನ ಕಾಮಗಾರಿಗೆ ೨೦೨೨ರ ಅಕ್ಟೋಬರ್ ೨೯ರಂದು ತಾಂತ್ರಿಕ ಅನುಮೋದನೆ ದೊರೆತಿದ್ದು, ೨೦೨೩ರ ಫೆಬ್ರವರಿ ೨೩ರಂದು ವರ್ಕ್ ಆರ್ಡರ್ ನೀಡಿ ಒಪ್ಪಂದ ಮಾಡಿಕೊಂಡು ಕಾಮಗಾರಿ ಆರಂಭಿಸಲಾಗಿತ್ತು ಎಂದು ಅವರು ವಿವರಿಸಿ ಒಟ್ಟು ?೯.೮೦ ಕೋಟಿ ವೆಚ್ಚದ ಈ ಕಾಮಗಾರಿಯನ್ನು ಅರಣ್ಯ ಇಲಾಖೆಯ ವಿವಿಧ ವಿಭಾಗಗಳನ್ನು ಒಂದೇ ಸಂಕೀರ್ಣದಡಿ ತರಲು ಉದ್ದೇಶಿಸಲಾಗಿತ್ತು. ತಾವು ಚಿಕ್ಕಮಗಳೂರು ಶಾಸಕನಾಗಿದ್ದ ಅವಧಿಯಲ್ಲಿ, ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಸೇರಿದಂತೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಮಂಜೂರು ಮಾಡಿಸಲು ಪ್ರಯತ್ನಿಸಲಾಗಿತ್ತು ಎಂದು ರವಿ ಅವರು ಹೇಳಿದರು.

ಅರಣ್ಯ ಭವನದ ಹೊರಾಂಗಣ ವಿನ್ಯಾಸ ಮತ್ತು ಎಲಿವೇಷನ್ ಉತ್ತಮವಾಗಿ ಮೂಡಿಬಂದಿದೆ. ಕಟ್ಟಡದ ಒಳಭಾಗದಲ್ಲೂ ಅಗತ್ಯವಿರುವ ಸಣ್ಣಪುಟ್ಟ ತಿದ್ದುಪಡಿಗಳಿದ್ದರೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಅವುಗಳನ್ನು ಸರಿಪಡಿಸಬೇಕು ಎಂದು ಸಲಹೆ ನೀಡಲಾಗಿದೆ ಎಂದರು.

ಅರಣ್ಯ ಇಲಾಖೆಯ ಕಚೇರಿಗೆ ಪ್ರವೇಶಿಸುವಾಗಲೇ ಅರಣ್ಯ ವಾತಾವರಣದ ಅನುಭವವಾಗುವಂತೆ ಕಟ್ಟಡದ ಸುತ್ತಮುತ್ತ ಸೂಕ್ತ ರೀತಿಯಲ್ಲಿ ಗಿಡ?ಮರಗಳನ್ನು ಬೆಳೆಸಬೇಕು. ಅಗತ್ಯ ಸಸಿಗಳನ್ನು ನೆಟ್ಟು ಹಸಿರು ವಾತಾವರಣ ನಿರ್ಮಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿರುವುದಾಗಿ ರವಿ ಅವರು ಹೇಳಿದರು.

C.T. Ravi inspects the construction work of the new Forest Bhavan.

Share

Leave a comment

Leave a Reply

Your email address will not be published. Required fields are marked *

Don't Miss

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು ಮಾರ್ಗದರ್ಶನ ಇಂದಿಗೂ ಅತ್ಯಂತ ಪ್ರಸ್ತುತವಾಗಿದ್ದು, ಅವರ ತತ್ವಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ಕಾರ್ಯಾನ್ಮುಖರಾಗಬೇಕು ಎಂದು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ನ್ನು ಬರೋಬ್ಬರಿ 60 ಕಿ.ಮೀ. ದೂರ ಸುರಕ್ಷಿತವಾಗಿ ಚಲಾಯಿಸಿ ಪ್ರಯಾಣಿಕರ...

Related Articles

ತರೀಕೆರೆಯ ಆಫ್ರಿನ್‌ಗೆ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್

ತರೀಕೆರೆ: ಸಾಧನೆಗೆ ಜಾತಿ, ಧರ್ಮ, ಭಾಷೆಯ ಹಂಗಿಲ್ಲ ಎಂಬುದನ್ನು ಸಾಬೀತುಪಡಿಸಿರುವ ತರೀಕೆರೆಯ ಪ್ರತಿಭಾವಂತೆ ನೈಯ್ಯರ್ ಫಾತೀಮಾ...

ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ವಹಿಸಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸೃಷ್ಠಿಯಾಗಿರುವ ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ...

ಚುನಾವಣಾ ಆಯೋಗದ ಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು...

ಸೇವೆಯಿಂದ ಡಿಆರ್‌ಎಫ್ ರವಿಕುಮಾರ್ ಅಮಾನತು

ಮೂಡಿಗೆರೆ: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಅಕ್ರಮಗಳ ವಿರುದ್ಧದ ಸಾರ್ವಜನಿಕ ಹೋರಾಟಕ್ಕೆ ಕೊನೆಗೂ ಮಹತ್ವದ ಫಲ...