Home namma chikmagalur chikamagalur ಚುನಾವಣಾ ಆಯೋಗದ ಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಚುನಾವಣಾ ಆಯೋಗದ ಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Share
Oplus_16908288
Share

ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಹನುಮಂತಪ್ಪ ವೃತ್ತದಿಂದ ಗಾಂಧಿ ಪಾರ್ಕ್‌ವರೆಗೆ ನಡೆದ ಮೆರವಣಿಗೆಯಲ್ಲಿ ಕಾಂಗ್ರೆಸ್, ಸಿಪಿಐ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡು ಚುನಾವಣಾ ಆಯೋಗದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಪಿಐ ಮುಖಂಡ ರೇಣುಕ ಆರಾಧ್ಯ, ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಸಾಮಾನ್ಯ ಹಾಗೂ ನಿರಂತರ ಪ್ರಕ್ರಿಯೆಯಾಗಿದೆ. ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕುವುದು, ಹೊಸದಾಗಿ ೧೮ ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರಿಸುವುದು ಹಿಂದಿನಿಂದಲೂ ನಡೆಯುತ್ತಾ ಬಂದಿದೆ. ಆದರೆ ಹಿಂದೆಂದೂ ಈ ಪ್ರಕ್ರಿಯೆ ಇಷ್ಟೊಂದು ಗೊಂದಲಕ್ಕೆ ಕಾರಣವಾಗಿರಲಿಲ್ಲ ಎಂದು ಹೇಳಿದರು.

ತಮ್ಮ ೭೨ ವರ್ಷಗಳ ಜೀವನದಲ್ಲಿ ಹಲವು ಚುನಾವಣೆಗಳಲ್ಲಿ ಮತದಾನ ಮಾಡಿದ್ದು, ಹಲವು ಬಾರಿ ಮತದಾರರ ಪಟ್ಟಿ ಪರಿಷ್ಕರಣೆಯನ್ನೂ ಕಂಡಿದ್ದೇನೆ. ಆದರೆ ಪ್ರಸ್ತುತ ನಡೆಯುತ್ತಿರುವ ಪರಿಷ್ಕರಣೆಯ ಕುರಿತು ಇಷ್ಟೊಂದು ವಿವಾದ ಉಂಟಾಗಿರುವುದು ಏಕೆ ಎಂಬುದನ್ನು ಜನರು ಪ್ರಶ್ನಿಸಬೇಕಿದೆ ಎಂದರು.

ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲ ಉದ್ದೇಶ ಪಟ್ಟಿಯಿಂದ ಅರ್ಹ ಮತದಾರರನ್ನು ತೆಗೆದುಹಾಕುವುದಲ್ಲ; ಮತದಾನದಿಂದ ಹೊರಗುಳಿದಿರುವ ಅರ್ಹರನ್ನು ಗುರುತಿಸಿ ಪಟ್ಟಿಗೆ ಸೇರಿಸುವುದಾಗಿರಬೇಕು. ಆದರೆ ಈಗ ಯಾರನ್ನು ಯಾವ ಕಾರಣಕ್ಕೆ ಪಟ್ಟಿಯಿಂದ ಕೈಬಿಡಬೇಕು ಎಂಬ ರೀತಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಆರೋಪಿಸಿದರು.

ಎಐಟಿಯುಸಿ ಮುಖಂಡ ವಿಜಯಕುಮಾರ್ ಮಾತನಾಡಿ, ಮತದಾರರ ಹಕ್ಕುಗಳನ್ನು ರಕ್ಷಿಸುವುದು ಪ್ರಜಾಪ್ರಭುತ್ವ ಉಳಿಸುವ ಹೋರಾಟವಾಗಿದೆ. ಮತ ಕಳ್ಳತನ ಎಂದರೆ ಕೇವಲ ಮತವನ್ನು ಕಸಿಯುವುದಲ್ಲ, ಜನರ ಬದುಕು ಮತ್ತು ಭವಿಷ್ಯವನ್ನು ಕಸಿಯುವುದಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ರವೀಶ್ ಕ್ಯಾತನಬೀಡು ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿವೆ. ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಚುನಾವಣಾ ಆಯೋಗ ಖಾತರಿಪಡಿಸಬೇಕು ಎಂದರು.

ಸಿಪಿಐ ಮುಖಂಡ ರಘು ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಕುರಿತು ಜನರಲ್ಲಿ ಆತಂಕ ಮತ್ತು ಗೊಂದಲ ಮೂಡಿದೆ. ಮತದಾರರ ಹಕ್ಕು ಸಂವಿಧಾನ ನೀಡಿರುವ ಹಕ್ಕಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಕಸಿಯಬಾರದು ಎಂದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲೇಶ್ ಸ್ವಾಮಿ, ಬೆಟಗೆರೆ ಪ್ರವೀಣ, ತನೋಜ್‌ನಾಯ್ಡು, ರಸೂಲ್ ಖಾನ್, ಸಿಪಿಐ ರಾಧಾಸುಂದರೇಶ, ಸಿಪಿಐ ವಸಂತ್ ಕುಮಾರ್ ಇದ್ದರು

Protest demanding action against the Election Commission’s move

Share

Leave a comment

Leave a Reply

Your email address will not be published. Required fields are marked *

Don't Miss

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು ಮಾರ್ಗದರ್ಶನ ಇಂದಿಗೂ ಅತ್ಯಂತ ಪ್ರಸ್ತುತವಾಗಿದ್ದು, ಅವರ ತತ್ವಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ಕಾರ್ಯಾನ್ಮುಖರಾಗಬೇಕು ಎಂದು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ನ್ನು ಬರೋಬ್ಬರಿ 60 ಕಿ.ಮೀ. ದೂರ ಸುರಕ್ಷಿತವಾಗಿ ಚಲಾಯಿಸಿ ಪ್ರಯಾಣಿಕರ...

Related Articles

ತರೀಕೆರೆಯ ಆಫ್ರಿನ್‌ಗೆ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್

ತರೀಕೆರೆ: ಸಾಧನೆಗೆ ಜಾತಿ, ಧರ್ಮ, ಭಾಷೆಯ ಹಂಗಿಲ್ಲ ಎಂಬುದನ್ನು ಸಾಬೀತುಪಡಿಸಿರುವ ತರೀಕೆರೆಯ ಪ್ರತಿಭಾವಂತೆ ನೈಯ್ಯರ್ ಫಾತೀಮಾ...

ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ವಹಿಸಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸೃಷ್ಠಿಯಾಗಿರುವ ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ...

ಸಿ.ಟಿ.ರವಿಯಿಂದ ನೂತನ ಅರಣ್ಯ ಭವನದ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರದಲ್ಲಿ ೯.೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಟ್ಟಡದ...

ಸೇವೆಯಿಂದ ಡಿಆರ್‌ಎಫ್ ರವಿಕುಮಾರ್ ಅಮಾನತು

ಮೂಡಿಗೆರೆ: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಅಕ್ರಮಗಳ ವಿರುದ್ಧದ ಸಾರ್ವಜನಿಕ ಹೋರಾಟಕ್ಕೆ ಕೊನೆಗೂ ಮಹತ್ವದ ಫಲ...