Home Crime News ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಇಬ್ಬರು ಯುವಕರ ದುರ್ಮರಣ
Crime NewsHomeKadurLatest Newsnamma chikmagalur

ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

Share
Share

ಚಿಕ್ಕಮಗಳೂರು: ಕಡೂರು–ಬೀರೂರು ನಡುವಿನ ಪರ್ಲ್ಸ್ ಕ್ಲಬ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ಕಡೂರು ತಾಲ್ಲೂಕಿನ ಬಿಳುವಾಲ ಗ್ರಾಮದ ಅಜಯ್ ಬಿ.ಸಿ. (27) ಹಾಗೂ ಬ್ಯಾಗಡೇಹಳ್ಳಿ ಗ್ರಾಮದ ಗಿರೀಶ್ (22) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಅ.11ರ ಬೆಳಗಿನ ಜಾವ ಸುಮಾರು 2.30ರ ವೇಳೆಯಲ್ಲಿ ಅಜಯ್ ಹಾಗೂ ಗಿರೀಶ್ ಅವರು ಕೆಎ 44 ಆರ್ 3987 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಬೈಕ್‌ನಲ್ಲಿ ಬಿಳುವಾಲದಿಂದ ಬ್ಯಾಗಡೇಹಳ್ಳಿ ಕಡೆಗೆ ತೆರಳುತ್ತಿದ್ದರು. ಬೈಕ್ ಅನ್ನು ಗಿರೀಶ್ ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಬೀರೂರು ಕಡೆಯಿಂದ ಕಡೂರು ಕಡೆಗೆ ತೆರಳುತ್ತಿದ್ದ ಕೆಎ 09 ಎಫ್ 5280 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್, ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದ ವಿರುದ್ಧ ದಿಕ್ಕಿಗೆ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಗನನ್ನು ಕಳೆದುಕೊಂಡ ತಂದೆ: ಅಜಯ್ ಅವರ ತಂದೆ ಚಂದ್ರಪ್ಪ ಬಿ.ಕೆ. ಅವರು ಕೃಷಿ ಮಾಡಿಕೊಂಡು ಕುಟುಂಬದೊಂದಿಗೆ ಬಿಳುವಾಲ ಗ್ರಾಮದಲ್ಲಿ ವಾಸವಾಗಿದ್ದಾರೆ. ಅಜಯ್ ಕುಟುಂಬದೊಂದಿಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಇನ್ನೂ ವಿವಾಹವಾಗಿರಲಿಲ್ಲ. ಅಪಘಾತದ ವಿಷಯ ತಿಳಿದ ಬಳಿಕ ತಂದೆ ಬೀರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಮಗನ ಮೃತದೇಹವನ್ನು ಗುರುತಿಸಿದ್ದಾರೆ.

ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಈ ಸಂಬಂಧ ಚಂದ್ರಪ್ಪ ಅವರು ನೀಡಿದ ದೂರಿನ ಮೇರೆಗೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 156/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 281 ಹಾಗೂ 106(1)ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ

KSRTC bus-bike collision; two youths killed

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು ತಾಲೂಕಿನ ಗಡಿಭಾಗದ ಬಯಲುಸೀಮೆ ರೈತರಿಗೆ ಪುನರ್ಜನ್ಮ ನೀಡಿದೆ. ಅಂತರಘಟ್ಟೆ ಕೆರೆ, ಕಲ್ಕೆರೆಯ ಕುಕ್ಕಸಮುದ್ರ ಕೆರೆಗಳು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ಪರಿಷತ್‌ನ ಸದಸ್ಯರು ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರ...

Related Articles

ತರೀಕೆರೆ ಡಿ. ಸುರೇಶ್‌ಗೆ ಮೈಸೂರು ದಸರಾ ಗೌರವ

ತರೀಕೆರೆ: ತಮ್ಮ ವಿಶಿಷ್ಟ ಕುಂಚದ ಕಲಾ ಶೈಲಿಯ ಮೂಲಕ ಕಲಾ ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿರುವ ತರೀಕೆರೆಯ...

ಪ್ರಧಾನ ಮಂತ್ರಿ ವಿಕಸಿತ ಭಾರತ ಸಂಕಲ್ಪದಡಿ ತರೀಕೆರೆ ಅಭಿವೃದ್ಧಿಗೆ ಆದ್ಯತೆ

ತರೀಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪದಂತೆ ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಆದ್ಯತೆ...

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ...

ಅ. 15ರಂದು ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಜಿಲ್ಲಾ ತಂಡದ ಆಯ್ಕೆ

ಚಿಕ್ಕಮಗಳೂರು: 5ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ–2026 ಹಾಗೂ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ 2026–27ರಲ್ಲಿ...