Home namma chikmagalur chikamagalur ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಆರೋಪ: ಸತೀಶ್ ಪಾತ್ರಿ ಬಂಧನ
chikamagalurCrime NewsHomeLatest Newsnamma chikmagalur

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಆರೋಪ: ಸತೀಶ್ ಪಾತ್ರಿ ಬಂಧನ

Share
Share

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ. ನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾಸನ ಮೂಲದ ಮಹಿಳೆಯೊಬ್ಬರು ಕೊಪ್ಪ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ತೀರ್ಥಹಳ್ಳಿ ತಾಲೂಕಿನ ಕುದುರೆಗುಂಡಿಗೆ ಮಹಿಳೆಯನ್ನು ಕರೆದೊಯ್ದು, ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಸತೀಶ್ ಪಾತ್ರಿಯ ಮೇಲಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಇದಲ್ಲದೆ, ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ. ಬ್ಲಾಕ್ ಮ್ಯಾಜಿಕ್‌ (ಮಾಟ-ಮಂತ್ರ) ಸಂಬಂಧಿತ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿ, ಎನ್.ಆರ್.ಪುರ ಪೊಲೀಸ್ ಠಾಣೆಯ ಪೇದೆ ಕಾಂತೇಶ್ ಅವರಿಂದ ಪೊಲೀಸರ ಚಲನವಲನದ ಮಾಹಿತಿ ಪಡೆಯುತ್ತಿದ್ದ ಎಂಬ ಆರೋಪವೂ ಬೆಳಕಿಗೆ ಬಂದಿದೆ. ಪೊಲೀಸರು ತನ್ನನ್ನು ಬಂಧಿಸಲು ಬರುತ್ತಿರುವ ಮಾಹಿತಿ ಮುಂಚಿತವಾಗಿ ತಿಳಿದುಕೊಂಡು ಸ್ಥಳ ಬದಲಾಯಿಸುತ್ತಿದ್ದ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪೇದೆ ಕಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಎನ್.ಆರ್.ಪುರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Satish Patri arrested on charges of rape under the pretext of exorcism.

 

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು ತಾಲೂಕಿನ ಗಡಿಭಾಗದ ಬಯಲುಸೀಮೆ ರೈತರಿಗೆ ಪುನರ್ಜನ್ಮ ನೀಡಿದೆ. ಅಂತರಘಟ್ಟೆ ಕೆರೆ, ಕಲ್ಕೆರೆಯ ಕುಕ್ಕಸಮುದ್ರ ಕೆರೆಗಳು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ಪರಿಷತ್‌ನ ಸದಸ್ಯರು ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರ...

Related Articles

ತರೀಕೆರೆ ಡಿ. ಸುರೇಶ್‌ಗೆ ಮೈಸೂರು ದಸರಾ ಗೌರವ

ತರೀಕೆರೆ: ತಮ್ಮ ವಿಶಿಷ್ಟ ಕುಂಚದ ಕಲಾ ಶೈಲಿಯ ಮೂಲಕ ಕಲಾ ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿರುವ ತರೀಕೆರೆಯ...

ಪ್ರಧಾನ ಮಂತ್ರಿ ವಿಕಸಿತ ಭಾರತ ಸಂಕಲ್ಪದಡಿ ತರೀಕೆರೆ ಅಭಿವೃದ್ಧಿಗೆ ಆದ್ಯತೆ

ತರೀಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪದಂತೆ ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಆದ್ಯತೆ...

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ...

ಅ. 15ರಂದು ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಜಿಲ್ಲಾ ತಂಡದ ಆಯ್ಕೆ

ಚಿಕ್ಕಮಗಳೂರು: 5ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ–2026 ಹಾಗೂ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ 2026–27ರಲ್ಲಿ...