Home namma chikmagalur chikamagalur ಅಪಘಾತ ವಲಯ ಸರಿಪಡಿಸಲು ಯೋಜನೆ ರೂಪಿಸಿ
chikamagalurHomeLatest Newsnamma chikmagalur

ಅಪಘಾತ ವಲಯ ಸರಿಪಡಿಸಲು ಯೋಜನೆ ರೂಪಿಸಿ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈಗಾಗಲೇ ೨೧ ಅಪಘಾತ ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ೩ ಅಪಘಾತ ವಲಯಗಳನ್ನು ಅಭಿವೃದ್ಧಿಪಡಿಸಲಾಗಿದೆ, ಉಳಿದ ೧೮ ಅಪಘಾತ ವಲಯಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಅವುಗಳನ್ನು ಸರಿಪಡಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ೨೧ ಅಪಘಾತ ವಲಯಗಳನ್ನು ಗುರುತಿಸಲಾಗಿತ್ತು ಈಗಾಗಲೇ ೩ ವಲಯಗಳನ್ನು ದುರಸ್ಥಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಉಳಿದ ೧೮ ಅಪಘಾತ ವಲಯಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ತಯಾರಿಸಿ, ತಮ್ಮ ಇಲಾಖೆ ಲಭ್ಯ ಅನುದಾನದ ನಿಯಮಾನುಸಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಕೆಲವು ರಸ್ತೆಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಸಣ್ಣ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ರಸ್ತೆ ಅಪಘಾತಗಳನ್ನು ತಡೆಯಬಹುದಾಗಿದ್ದು ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಬೇಲೂರು ಉಪವಿಭಾಗದ ಕಾರ್ಯ ಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿ, ರಾಷ್ಟ್ರೀಯ ಹೆದ್ದಾರಿಯ ಬೇಲೂರು ಉಪವಿಭಾಗಕ್ಕೆ ಸಂಬಂಧಿಸಿದಂತೆ ಒಟ್ಟು ೧೪ ಸಂಖ್ಯೆಗಳು ಒಳಪಡುತ್ತಿದ್ದು, ಈ ಅಪಘಾತ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಡಿ.ಪಿ.ಆರ್ ತಯಾರಿಸಿ  ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿರುವುದಾಗಿ ತಿಳಿಸಿದರು.

ಈ ಅಪಘಾತ ಸ್ಥಳಗಳ ಅಭಿವೃದ್ಧಿಯನ್ನು ತುರ್ತಾಗಿ ಕೈಗೊಳ್ಳಲು ಸೂಕ್ತ ಕ್ರಮ ವಹಿಸಬೇಕು ಅಲ್ಲದೇ ರಾಷ್ಟ್ರೀಯ ಹೆದ್ದರಿ ೧೭೩ರಲ್ಲಿ ಬೀದಿ ದೀಪಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಬೀದಿ ದೀಪಗಳು ತುರ್ತಾಗಿ ಕಾರ್ಯ ನಿವರ್ಹಿಸುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿಗಳು ಸೂಚಿಸಿ, ಕಳೆದ ಸಭೆಯಲ್ಲಿ ಈ ಸ್ಥಳದಲ್ಲಿ ಕಂಟ್ರೋಲ್ ಸಿಗ್ನಲ್‌ಗಳ ಅವಶ್ಯಕತೆ ಇರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದರು. ಈ ಕಾಮಗಾರಿಯನ್ನು ಕೈಗೊಳ್ಳಲು ಅವಶ್ಯವಿರುವ ಅನುದಾನವನ್ನು ಕೋರಿ ಪ್ರಸ್ತಾವನೆಯನ್ನು ಸಲ್ಲಿಸಿ ಅಗತ್ಯ ಅನುದಾನ ಪಡೆದು  ತುರ್ತಾಗಿ ಮುಂದಿನ ಕ್ರಮ ಕೈಗೊಳ್ಳುವಂತೆ ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಕಡೂರು-ತುಮಕೂರು ರಸ್ತೆಯಲ್ಲಿ ೩ ಅಪಘಾತ ಸ್ಥಳಗಳಿದ್ದು ಅದರಲ್ಲಿ ೧ ಅನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ ಉಳಿದ ೨ ಅಪಘಾತ ವಲಯಗಳನ್ನು ತುರ್ತಾಗಿ ಅಭಿವೃದ್ಧಿಪಡಿಸುವಂತೆ ಹೇಳಿದರು.

ಅಪಘಾತ ಸಂತ್ರಸ್ಥರಿಗೆ ಸಹಾಯ ಮಾಡಿದವರಿಗೆ ೨೫ ಸಾವಿರ ಬಹುಮಾನ : ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳಿಗೆ ಸಹಾಯ ಮಾಡುವವರಿಗೆ ೨೫ ಸಾವಿರ ಬಹುಮಾನ ನೀಡಲಾಗುತ್ತದೆ. ಅಪಘಾತ ನಿರ್ಣಾಯಕ ಮೊದಲ ಗಂಟೆಯಲ್ಲಿ( ಗೋಲ್ಡನ್ ಅವರ್) ಗಾಯಗೊಂಡವರನ್ನು ಆಸ್ಪತ್ರೆಗೆ ತಲುಪಿಸುವ ವ್ಯಕ್ತಿಗೆ ಈ ಬಹುಮಾನ ನೀಡಲಾಗುತ್ತದೆ ಅಲ್ಲದೆ ಸರ್ಕಾರವು ಉತ್ತಮ ನಾಗರೀಕ ಎಂದು ಯಾವುದೇ ಲಾಭದ ನಿರೀಕ್ಷೆಯಿಲ್ಲದೆ  ತುರ್ತು ಪರಿಸ್ಥಿತಿಯಲ್ಲಿರುವ ಗಾಯಾಳು ವ್ಯಕ್ತಿಯನ್ನು  ಸ್ವಯಂ ಪ್ರೇರಿತರಾಗಿ ಸಹಾಯ ಮಾಡುವ ವ್ಯಕ್ತಿಯನ್ನು ಉತ್ತಮ ನಾಗರೀಕ  ಪ್ರಶಸ್ತಿ ನೀಡಿ ಗೌರವಿಸುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ,ಟಿ.ಜಯ್ ಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸಿ.ಎಂ.ದಿವಾಕರ್, ನಗರಸಭೆ, ಪೌರಾಯುಕ್ತ ಬಿ,ಬಸವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಶೆಟ್ಟಿ ಸೇರದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು

Formulate a plan to rectify the accident-prone zone.

Share

Leave a comment

Leave a Reply

Your email address will not be published. Required fields are marked *

Don't Miss

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ  ನೇತೃತ್ವದಲ್ಲಿ ಶುಕ್ರವಾರ...

ಜಿಲ್ಲಾಧಿಕಾರಿಯಿಂದ ಮಳಲೂರು ಏತನೀರಾವರಿ ಸ್ಥಳ ಪರಿಶೀಲನೆ

ಚಿಕ್ಕಮಗಳೂರು:  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲೂಕಿನ ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿಗಳನ್ನು ಸಮಗ್ರವಾಗಿ ಪೂರ್ಣಗೊಳಿಸಲು ಕಾವೇರಿ ನೀರಾವರಿ ನಿಗಮದಿಂದ (ಸಿಎನ್‌ಎನ್‌ಎಲ್) ರೂ.೨೧.೫ ಕೋಟಿ ವೆಚ್ಚದ ನೂತನ ವಿಸ್ತೃತ ಯೋಜನಾ ವರದಿ...

Related Articles

ಅ.18ರಂದು ಕಬಡ್ಡಿ ಆಟಗಾರರ ಆಯ್ಕೆ ಪ್ರಕ್ರಿಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ 25 ವರ್ಷದೊಳಗಿನ ಪುರುಷರು ಹಾಗೂ...

ಆಸ್ಟ್ರೇಲಿಯಾದಲ್ಲಿ ವರದಕ್ಷಿಣೆ ಕಿರುಕುಳ ಆರೋಪ

ತರೀಕೆರೆ: ಆಸ್ಟ್ರೇಲಿಯಾದಲ್ಲಿ ವಾಸವಿದ್ದಾಗ ಹೆಚ್ಚುವರಿ ವರದಕ್ಷಿಣೆಗಾಗಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ, ತನ್ನ ಸಂಬಳವನ್ನೂ...

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಕಳಚಿ ಬಿತ್ತು!

ಕೊಪ್ಪ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಏಕಾಏಕಿ ಕಳಚಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದ 50ಕ್ಕೂ ಹೆಚ್ಚು...

ಅ.25ರಂದು ಮ್ಯಾರಥಾನ್ – ಸೈಕ್ಲಿಂಗ್ ಕ್ರೀಡಾಕೂಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಕೃತಿ ಸೌಂದರ್ಯದ ನಡುವೆ ಓಟ ಮತ್ತು ಸೈಕ್ಲಿಂಗ್ ಕ್ರೀಡೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಚಿಕ್ಕಮಗಳೂರು...