Home ಅಂಗನವಾಡಿಗೆ ದಾಖಲಾಗದಿರುವ ಮಕ್ಕಳ ಮರು ಸಮೀಕ್ಷೆಗೆ ಸೂಚನೆ
HomeLatest Newsnamma chikmagalur

ಅಂಗನವಾಡಿಗೆ ದಾಖಲಾಗದಿರುವ ಮಕ್ಕಳ ಮರು ಸಮೀಕ್ಷೆಗೆ ಸೂಚನೆ

Share
Share

ಚಿಕ್ಕಮಗಳೂರು: ನಗರ ಪ್ರದೇಶದಲ್ಲಿ ಅಂಗನವಾಡಿಗೆ ದಾಖಲಾಗದಿರುವ ಮಕ್ಕಳನ್ನು ಮರು ಸಮೀಕ್ಷೆ ನಡೆಸಿ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲಿ ಪ್ರತಿ ಮನೆಗಳಿಗೂ ತೆರಳಿ ಸಮೀಕ್ಷೆ ನಡೆಸಿ ಅಂಗನವಾಡಿಗೆ ದಾಖಲಾಗದಿರುವ ಮಕ್ಕಳನ್ನು ಗುರುತಿಸಿ ದಾಖಲಿಸಬೇಕು, ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿರುತ್ತದೆ ಆದರೆ ನಗರ ಪ್ರದೇಶಗಳ ಅಂಗನವಾಡಿಗಳಲ್ಲಿ ಮಕ್ಕಳ ಪ್ರವೇಶಾತಿ ಕಡಿಮೆ ಇದ್ದು ಪ್ರತಿ ಮನೆಗೂ ತೆರಳಿ ಅಂಗನವಾಡಿಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ದಾಖಲಿಸುವಂತೆ ಹೇಳಿದರು.

ಅಂಗನವಾಡಿಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರು, ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ಗುಣಪಟ್ಟದಿಂದ ಕೂಡಿರಬೇಕು. ಕಳಪೆ ಗುಣಪಟ್ಟದಿಂದ ಕೂಡಿರುವ ಆಹಾರವನ್ನು ಪೂರೈಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದ ಅವರು ತೀವ್ರ ಅಪೌಷ್ಠಿಕ ಮತ್ತು ಸಾಧಾರಣ ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಈ ಮಕ್ಕಳನ್ನು ಮುಂದಿನ ತ್ರೈ ಮಾಸಿಕದೊಳಗೆ ಪೌಷ್ಠಿಕ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಸಭೆಗೆ ಮಾಹಿತಿ ನೀಡಿ, ಸೆಪ್ಟೆಂಬರ್ ೨೦೨೬ರ ಮಾಹೆಯಲ್ಲಿ ಪೋಷಣ್ ಮಾಸಾಚರಣೆ ಅಡಿಯಲ್ಲಿ ಜಿಲ್ಲೆಯಾದ್ಯಂತ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮತ್ತು ವಲಯ ವ್ಯಾಪ್ತಿಗಳಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಪೌಷ್ಠಿಕ ಆಹಾರದ ಸೇವನೆ, ಜೀವನ ಶೈಲಿಯ ಸುಧಾರಣೆ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಲಾಗಿದೆ ಎಂದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೊ ಕಾಯ್ದೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಕಾನೂನು ಜಾಗೃತಿ ಮೂಡಿಸಬೇಕು, ಕಾನೂನು ಬಾಹಿರವಾಗಿ ವಿವಾಹ ವಯಸ್ಸಿಗೂ ಮುನ್ನ ಮದುವೆ ಮಡುವುದು ಅಪರಾಧ ವಾಗುತ್ತದೆ ಬಾಲ್ಯದಲ್ಲೇ ಮದುವೆ ಮಾಡುವುದರಿಂದ ಮಕ್ಕಳ ಭವಿಷ್ಯ ಹಾಗೂ ಕುಟುಂಬದ ಗೌರವಕ್ಕೂ ಧಕ್ಕೆಯಾಗುತ್ತದೆ ಎಂದು ಅರಿವು ಮೂಡಿಸುವಂತೆ ಹೇಳಿದ ಅವರು ಪೋಕ್ಸೊ ಕಾಯ್ದೆ ಕುರಿತು ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು

ಬಾಲ್ಯ ವಿವಾಹ ಅಪರಾಧ, ಬಾಲ್ಯ ವಿವಾಹ ನಿಲ್ಲಿಸಿ ಕುರಿತ ಪೋಸ್ಟರ್‌ನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳಾದ ಪೂರ್ಣಿಮಾ, ಸುಜಾತ, ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ಸೇರಿದಂತೆ ವಿವಿಧ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಜರಿದ್ದರು

Directive issued for a re-survey of children not enrolled in Anganwadis.

Share

Leave a comment

Leave a Reply

Your email address will not be published. Required fields are marked *

Don't Miss

ವೃದ್ಧೆಯ ಮನೆಗೆ ನುಗ್ಗಿ ಚಾಕು ತೋರಿಸಿ ಚಿನ್ನಾಭರಣ, ಬೆಳ್ಳಿ ವಸ್ತುಗಳ ದರೋಡೆ

ಚಿಕ್ಕಮಗಳೂರು: ಮನೆಯೊಂದರಲ್ಲಿ ಒಬ್ಬರೇ ವಾಸವಿದ್ದ ಮಹಿಳೆಯನ್ನು ಚಾಕು ತೋರಿಸಿ ಬೆದರಿಸಿದ ಇಬ್ಬರು ಅಪರಿಚಿತರು, ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಜೋಡಿ...

ಮೂಡಿಗೆರೆ ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳ ಬಡಿದಾಟ

ಮೂಡಿಗೆರೆ: ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ವಿವಾದವೊಂದು ಭುಗಿಲೆದ್ದಿದ್ದು, ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಪರಿಸ್ಥಿತಿ ವಿಕೋಪಕ್ಕೆ ಹೋದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ತಾಲೂಕಿನ...

Related Articles

ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಬಿಂಡಿಗ ಶ್ರೀ ದೇವಿರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ನವೆಂಬರ್ ೭ರಿಂದ ೧೧ರವರೆಗೆ ನಡೆಯಲಿದ್ದು...

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಚಿಕ್ಕಮಗಳೂರು: ಕನ್ನಡ ಸಂಸ್ಕೃತಿ, ಚರಿತ್ರೆ, ಗತ ವೈಭವವನ್ನು ಸಾರುವಂತಹ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೦೧ ರಂದು...

ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ

ಚಿಕ್ಕಮಗಳೂರು : ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ...

ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ

ಚಿಕ್ಕಮಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಮತ್ತು...