Home namma chikmagalur chikamagalur ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಸಿಪಿಐ (ಎಂಎಲ್) ಪ್ರತಿಭಟನೆ
chikamagalurHomeLatest Newsnamma chikmagalur

ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಸಿಪಿಐ (ಎಂಎಲ್) ಪ್ರತಿಭಟನೆ

Share
Share

ಚಿಕ್ಕಮಗಳೂರು: ನಗರದ ಅಜಾದ್ ಪಾರ್ಕಿನಲ್ಲಿ ಬುಧವಾರ ಸಿಪಿಐ (ಎಂಎಲ್) ರೆಡ್ ಸ್ಟಾರ್ ಜಿಲ್ಲಾ ಸಂಘಟನೆಯು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಸಿಪಿಐ(ಎಂಎಲ್) ರೆಡ್‌ಸ್ಟಾರ್ ಜಿಲ್ಲಾ ಕಾರ್ಯದರ್ಶಿ ಸಂದೀಪ್ ಬಿ.ಆರ್ ಮಾತನಾಡಿ, ಭಾರತ ಸಂವಿಧಾನದ ೩೨೪ನೇ ವಿಧಿಯ ಪ್ರಕಾರ ಚುನಾವಣಾ ಆಯೋಗ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಪ್ರಸ್ತುತ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪಗಳಿವೆ. ಎಸ್‌ಐಆರ್ ಪ್ರಕ್ರಿಯೆಯ ಮೂಲಕ ದೇಶದ ವಿವಿಧ ರಾಜ್ಯಗಳಲ್ಲಿ ಕೋಟ್ಯಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಬಿಹಾರ, ಪಶ್ಚಿಮ ಬಂಗಾಳ ಹಾಗೂ ಕರ್ನಾಟಕದ ಮಹದೇವಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳು ನಡೆದಿವೆ.

ಬುಡಕಟ್ಟು ಸಮುದಾಯಗಳು, ಆದಿವಾಸಿಗಳು, ಬಡವರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ. ಚುನಾವಣಾ ಆಯೋಗದ ಕಾರ್ಯವೈಖರಿಯ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಖಚಿತಪಡಿಸಬೇಕು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹೇಳಿದರು.

ತಾಲೂಕು ಕಾರ್ಯದರ್ಶಿ ಬಸವರಾಜು ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಕ್ರಮದ ವಿರುದ್ಧ ದೇಶದ ವಿವಿಧೆಡೆ ಹೋರಾಟಗಳು ನಡೆಯುತ್ತಿದ್ದು, ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗುತ್ತಿದೆ. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಮೂಲಭೂತ ಪ್ರಜಾಪ್ರಭುತ್ವ ಹಕ್ಕಾಗಿದ್ದು, ಅದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು, ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎನ್ನಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವುದು, ಹೋರಾಟಗಾರರನ್ನು ಬಿಡುಗಡೆ ಮಾಡುವುದು ಹಾಗೂ ಪ್ರತಿಭಟನೆಗಳ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಸಂಘಟನೆಯು ಪ್ರತಿಭಟನೆಯನ್ನು ಮಾಡಿದರು.

ಈ ಪ್ರತಿಭಟನೆಯಲ್ಲಿ ಸಿಪಿಐ(ಎಂಎಲ್) ರೆಡ್‌ಸ್ಟಾರ್ ರಾಜ್ಯ ಸಮಿತಿ ಸದಸ್ಯರಾದ ಕೃಷ್ಣಪ್ಪ, ನಾಗೇಶ್, ಭಾಗ್ಯ, ಚಿಕ್ಕಮಗಳೂರು ತಾಲೂಕು ಕಾರ್ಯದರ್ಶಿ ಬಸವರಾಜು, ಮೂಡಿಗೆರೆ ತಾಲೂಕು ಕಾರ್ಯದರ್ಶಿ ಸುರೇಶ್, ಎನ್.ಆರ್.ಪುರ ತಾಲೂಕು ಕಾರ್ಯದರ್ಶಿ ಉಮೇಶ್ ಹಾಗೂ ಶಂಕರ್ ಉಪಸ್ಥಿತರಿದ್ದರು.

CPI(ML) protests demanding the removal of Gyanesh Kumar

Share

Leave a comment

Leave a Reply

Your email address will not be published. Required fields are marked *

Don't Miss

ಚುನಾವಣಾ ಆಯೋಗದ ಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಹನುಮಂತಪ್ಪ...

ಸಿ.ಟಿ.ರವಿಯಿಂದ ನೂತನ ಅರಣ್ಯ ಭವನದ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರದಲ್ಲಿ ೯.೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಟ್ಟಡದ ಅಂತಿಮ ಹಂತದ ಸಣ್ಣಪುಟ್ಟ ತಿದ್ದುಪಡಿಗಳನ್ನು ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ...

Related Articles

ತರೀಕೆರೆ ಶಾಸಕ-ಕಡೂರು ಶಾಸಕ, ಬೀದಿಗೆ ಬಿದ್ದ ವಸೂಲಿ : ಆನಂದ್ ಆಕ್ರೋಶ.

ಕಡೂರು ಶಾಸಕ ಆನಂದ್ ತರೀಕೆರೆ ಶಾಸಕ ಶ್ರೀನಿವಾಸ್ ಕುಟುಂಬದ ಮೇಲೆ ತೀವ್ರ ಆಕ್ರೋಶಗೊಂಡು ವಸೂಲಿ ಬಗ್ಗೆ...

ಮಳಲೂರು ಏತ ನೀರಾವರಿ ಕಾಮಗಾರಿಗೆ ₹21.5 ಕೋಟಿ ಡಿಪಿಆರ್ ಸಿದ್ಧ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆ ಹೋಬಳಿಯ ಮಳಲೂರು ಏತ ನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ₹21.5...

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆಯ ಬಹುತೇಕ ಪ್ರದೇಶಗಳು ಬರ ಪರಿಸ್ಥಿತಿ...

ಮತದಾರರ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಪಾದಯಾತ್ರೆ

ಚಿಕ್ಕಮಗಳೂರು: ಮತದಾರರ ಹಕ್ಕುಗಳ ರಕ್ಷಣೆ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್...