Home namma chikmagalur chikamagalur ಮಳಲೂರು ಏತ ನೀರಾವರಿ ಕಾಮಗಾರಿಗೆ ₹21.5 ಕೋಟಿ ಡಿಪಿಆರ್ ಸಿದ್ಧ
chikamagalurHomeLatest Newsnamma chikmagalur

ಮಳಲೂರು ಏತ ನೀರಾವರಿ ಕಾಮಗಾರಿಗೆ ₹21.5 ಕೋಟಿ ಡಿಪಿಆರ್ ಸಿದ್ಧ

Share
Oplus_153223168
Share

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆ ಹೋಬಳಿಯ ಮಳಲೂರು ಏತ ನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ₹21.5 ಕೋಟಿ ವೆಚ್ಚದ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಲಾಗುವುದು ಎಂದು ಅಂಬಳೆ ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಬಿ. ಸೋಮೇಗೌಡ ತಿಳಿಸಿದರು.

ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳಲೂರು ಏತ ನೀರಾವರಿ ಯೋಜನೆಗೆ ಎರಡು ದಶಕಗಳ ಹಿಂದೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಆದರೆ, ಕಾಮಗಾರಿ ಹಲವು ಕಾರಣಗಳಿಂದ ಕುಂಟುತ್ತಾ ಸಾಗಿರುವುದು ಈ ಭಾಗದ ರೈತರಿಗೆ ನಿರಾಸೆ ಉಂಟುಮಾಡಿದೆ. ಇದೀಗ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ವಿಶೇಷ ಆಸಕ್ತಿ ವಹಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಯೋಜನೆಗೆ ವೇಗ ದೊರೆಯುವ ನಿರೀಕ್ಷೆಯಿದೆ ಎಂದರು.

ಜುಲೈ 27ರಂದು ಡಿಪಿಆರ್ ಪೂರ್ಣ

ಮಳಲೂರು ಏತ ನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸುವ ಉದ್ದೇಶದಿಂದ 2026ರ ಜುಲೈ 27ರಂದು ಡಿಪಿಆರ್ ಸಿದ್ಧಪಡಿಸುವ ಕಾರ್ಯ ಪೂರ್ಣಗೊಂಡಿದೆ. ₹21.5 ಕೋಟಿ ವೆಚ್ಚದ ಯೋಜನಾ ವರದಿಯನ್ನು ಸಿದ್ಧಪಡಿಸಲು ಶಾಸಕಿ ನಯನಾ ಮೋಟಮ್ಮ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಮುಂದಿನ ಹಂತದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪರಿಹಾರಕ್ಕಾಗಿ ₹11 ಕೋಟಿ ಬಿಡುಗಡೆ

ಏತ ನೀರಾವರಿ ಕಾಮಗಾರಿಗಾಗಿ ಭೂಮಿ ಕಳೆದುಕೊಂಡಿದ್ದ ಕೆಲವು ರೈತರು ಹೆಚ್ಚಿನ ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಯೋಜನೆಯ ಪ್ರಗತಿಗೆ ಹಿನ್ನಡೆಯಾಗಿತ್ತು. ಈಗಾಗಲೇ ಭೂಸ್ವಾಧೀನ ಪರಿಹಾರಕ್ಕಾಗಿ ಸುಮಾರು ₹11 ಕೋಟಿ ಬಿಡುಗಡೆ ಮಾಡಲಾಗಿದ್ದು, ಬಹುತೇಕ ರೈತರು ಪರಿಹಾರ ಪಡೆದುಕೊಂಡಿದ್ದಾರೆ ಎಂದು ಸೋಮೇಗೌಡ ಮಾಹಿತಿ ನೀಡಿದರು.

ಪ್ರಸ್ತುತ ಕಾಮಗಾರಿ ಪೂರ್ಣಗೊಳಿಸಲು ಯಾವುದೇ ಕಾನೂನಾತ್ಮಕ ತೊಡಕುಗಳಿಲ್ಲ ಎಂಬ ಹಿನ್ನೆಲೆಯಲ್ಲಿ ಯೋಜನೆಯನ್ನು ಮುಂದುವರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಸಕಿ ನಯನಾ ಮೋಟಮ್ಮ ಅವರು ರೈತರ ಹಿತದೃಷ್ಟಿಯಿಂದ ಹೆಚ್ಚಿನ ಕಾಳಜಿ ವಹಿಸಿದ್ದು, ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಕಾಮಗಾರಿ ಶೀಘ್ರ ಆರಂಭವಾಗುವಂತೆ ಪ್ರಯತ್ನಿಸುತ್ತಿದ್ದಾರೆ ಎಂದರು.

ಹತ್ತಾರು ಗ್ರಾಮಗಳ ರೈತರಿಗೆ ಅನುಕೂಲ

ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಂಡರೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ನೀರಾವರಿ ಸೌಲಭ್ಯ ದೊರೆಯುವ ನಿರೀಕ್ಷೆಯಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಸಿಗುವುದರ ಜತೆಗೆ ರೈತರ ಬದುಕಿಗೂ ನೆರವಾಗಲಿದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸುವುದು ಶಾಸಕರ ಆಶಯವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೊಹಮ್ಮದ್ ಮುದಾ ಬೀರ್ ರಾಮಯ್ಯ, ಪ್ರಕಾಶ್, ಗಣೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

DPR prepared for Malaluru lift irrigation project at a cost of ₹21.5 crore.

Share

Leave a comment

Leave a Reply

Your email address will not be published. Required fields are marked *

Don't Miss

ಚುನಾವಣಾ ಆಯೋಗದ ಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಹನುಮಂತಪ್ಪ...

ಸಿ.ಟಿ.ರವಿಯಿಂದ ನೂತನ ಅರಣ್ಯ ಭವನದ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರದಲ್ಲಿ ೯.೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕಟ್ಟಡದ ಅಂತಿಮ ಹಂತದ ಸಣ್ಣಪುಟ್ಟ ತಿದ್ದುಪಡಿಗಳನ್ನು ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ...

Related Articles

ತರೀಕೆರೆ ಶಾಸಕ-ಕಡೂರು ಶಾಸಕ, ಬೀದಿಗೆ ಬಿದ್ದ ವಸೂಲಿ : ಆನಂದ್ ಆಕ್ರೋಶ.

ಕಡೂರು ಶಾಸಕ ಆನಂದ್ ತರೀಕೆರೆ ಶಾಸಕ ಶ್ರೀನಿವಾಸ್ ಕುಟುಂಬದ ಮೇಲೆ ತೀವ್ರ ಆಕ್ರೋಶಗೊಂಡು ವಸೂಲಿ ಬಗ್ಗೆ...

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆಯ ಬಹುತೇಕ ಪ್ರದೇಶಗಳು ಬರ ಪರಿಸ್ಥಿತಿ...

ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಸಿಪಿಐ (ಎಂಎಲ್) ಪ್ರತಿಭಟನೆ

ಚಿಕ್ಕಮಗಳೂರು: ನಗರದ ಅಜಾದ್ ಪಾರ್ಕಿನಲ್ಲಿ ಬುಧವಾರ ಸಿಪಿಐ (ಎಂಎಲ್) ರೆಡ್ ಸ್ಟಾರ್ ಜಿಲ್ಲಾ ಸಂಘಟನೆಯು, ಮುಖ್ಯ...

ಮತದಾರರ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಪಾದಯಾತ್ರೆ

ಚಿಕ್ಕಮಗಳೂರು: ಮತದಾರರ ಹಕ್ಕುಗಳ ರಕ್ಷಣೆ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್...