Home namma chikmagalur chikamagalur ಮೂಡಿಗೆರೆ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ತಿರುವು
chikamagalurCrime NewsHomeLatest Newsnamma chikmagalur

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ತಿರುವು

Share
Share

ಮೂಡಿಗೆರೆ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಕಾರ್ಲಗದ್ದೆ ನಿವಾಸಿ ರವಿ (50) ಮೃತಪಟ್ಟವರು. ಈ ಸಂಬಂಧ ಅವರ ಪತ್ನಿ ನಳಿನಿ (43) ಅವರು ನೀಡಿದ ದೂರಿನ ಮೇರೆಗೆ ಬಿಳಗುಳ ಗ್ರಾಮದ ಪವನ್ ಮತ್ತು ಗೌತಮ್ ಎಂಬುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 103(1) ಅಡಿ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಅ.13ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ರವಿ ಅವರು ತಮ್ಮ ಮನೆಯಿಂದ ಮೂಡಿಗೆರೆಗೆ ಯುಪಿಎಸ್ ತರಲು ಬಂದಿದ್ದರು. ರಾತ್ರಿ ಆದರೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ, ಮದ್ಯಪಾನ ಮಾಡುವ ಅಭ್ಯಾಸವಿದ್ದ ಕಾರಣ ಮನೆಗೆ ತಡವಾಗಿ ಬರಬಹುದು ಎಂದು ಕುಟುಂಬದವರು ಭಾವಿಸಿದ್ದರು.

ಆದರೆ, ಅಂದು ರಾತ್ರಿ ಸುಮಾರು 10.15ರ ವೇಳೆಗೆ ಪೊಲೀಸ್ ಠಾಣೆಯಿಂದ ನಳಿನಿ ಅವರಿಗೆ ದೂರವಾಣಿ ಕರೆ ಬಂದಿದ್ದು, ಅವರ ಪತಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಬಿದ್ದಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಲಾಗಿತ್ತು.

ತಕ್ಷಣ ನಳಿನಿ ಅವರು ತಮ್ಮ ಮಗ ನಿಶಾಂತ್, ಅಕ್ಕನ ಮಗ ಸತೀಶ್ ಹಾಗೂ ಊರಿನವರೊಂದಿಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತೆರಳಿ ವಿಚಾರಿಸಿದಾಗ, ರವಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ಪತಿಯ ಸಾವಿನ ಬಗ್ಗೆ ಅನುಮಾನಗೊಂಡ ನಳಿನಿ ಅವರು ಅ.14ರಂದು ಬೆಳಗ್ಗೆ ಪೊಲೀಸ್ ಸಿಬ್ಬಂದಿ ಸಚಿನ್ ಅವರೊಂದಿಗೆ ಬಸ್ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.

ದೂರಿನಲ್ಲಿ ಉಲ್ಲೇಖಿಸಿರುವಂತೆ, ಅ.13ರ ರಾತ್ರಿ ಸುಮಾರು 8.30ರ ವೇಳೆಗೆ ಇಬ್ಬರು ವ್ಯಕ್ತಿಗಳು ರವಿ ಅವರನ್ನು ತಳ್ಳಿದ ಪರಿಣಾಮ ಅವರು ಕೆಳಗೆ ಬಿದ್ದು ಮೃತಪಟ್ಟಿರುವುದು ದೃಶ್ಯಾವಳಿಯಲ್ಲಿ ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಬಳಿಕ ಆ ಇಬ್ಬರು ಬಿಳಗುಳ ಗ್ರಾಮದ ಪವನ್ ಮತ್ತು ಗೌತಮ್ ಎಂಬುದು ತಿಳಿದುಬಂದಿದೆ ಎಂದು ನಳಿನಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅ.14ರಂದು ತಡವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Twist in the case of a man’s death at the Mudigere bus stand

Share

Leave a comment

Leave a Reply

Your email address will not be published. Required fields are marked *

Don't Miss

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ  ನೇತೃತ್ವದಲ್ಲಿ ಶುಕ್ರವಾರ...

ಜಿಲ್ಲಾಧಿಕಾರಿಯಿಂದ ಮಳಲೂರು ಏತನೀರಾವರಿ ಸ್ಥಳ ಪರಿಶೀಲನೆ

ಚಿಕ್ಕಮಗಳೂರು:  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲೂಕಿನ ಮಳಲೂರು ಏತನೀರಾವರಿ ಯೋಜನೆಯ ಕಾಮಗಾರಿಗಳನ್ನು ಸಮಗ್ರವಾಗಿ ಪೂರ್ಣಗೊಳಿಸಲು ಕಾವೇರಿ ನೀರಾವರಿ ನಿಗಮದಿಂದ (ಸಿಎನ್‌ಎನ್‌ಎಲ್) ರೂ.೨೧.೫ ಕೋಟಿ ವೆಚ್ಚದ ನೂತನ ವಿಸ್ತೃತ ಯೋಜನಾ ವರದಿ...

Related Articles

ಅ.18ರಂದು ಕಬಡ್ಡಿ ಆಟಗಾರರ ಆಯ್ಕೆ ಪ್ರಕ್ರಿಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ 25 ವರ್ಷದೊಳಗಿನ ಪುರುಷರು ಹಾಗೂ...

ಆಸ್ಟ್ರೇಲಿಯಾದಲ್ಲಿ ವರದಕ್ಷಿಣೆ ಕಿರುಕುಳ ಆರೋಪ

ತರೀಕೆರೆ: ಆಸ್ಟ್ರೇಲಿಯಾದಲ್ಲಿ ವಾಸವಿದ್ದಾಗ ಹೆಚ್ಚುವರಿ ವರದಕ್ಷಿಣೆಗಾಗಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ, ತನ್ನ ಸಂಬಳವನ್ನೂ...

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಕಳಚಿ ಬಿತ್ತು!

ಕೊಪ್ಪ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಏಕಾಏಕಿ ಕಳಚಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದ 50ಕ್ಕೂ ಹೆಚ್ಚು...

ಅ.25ರಂದು ಮ್ಯಾರಥಾನ್ – ಸೈಕ್ಲಿಂಗ್ ಕ್ರೀಡಾಕೂಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಕೃತಿ ಸೌಂದರ್ಯದ ನಡುವೆ ಓಟ ಮತ್ತು ಸೈಕ್ಲಿಂಗ್ ಕ್ರೀಡೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಚಿಕ್ಕಮಗಳೂರು...