Home namma chikmagalur chikamagalur ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ
chikamagalurHomeLatest Newsnamma chikmagalur

ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ

Share
Share

ಚಿಕ್ಕಮಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಮತ್ತು ಪ್ರಾತಿನಿಧ್ಯದ ವಾಸ್ತವಾಂಶಗಳನ್ನು ಪರಿಗಣಿಸಿ ಶೇ.6ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ಮಾದರ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ವೈ.ಟಿ. ಗೋವಿಂದಪ್ಪ ಒತ್ತಾಯಿಸಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಿಗ ಸಮುದಾಯಕ್ಕೆ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಮುಂಬರುವ ಚುನಾವಣೆಗಳ ಪ್ರಣಾಳಿಕೆ ಅಥವಾ ಅಧಿಕೃತ ನೀತಿಯಲ್ಲಿ ಸಮುದಾಯದ ಮೀಸಲಾತಿ ಬೇಡಿಕೆಗೆ ಬದ್ಧತೆಯನ್ನು ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು.

ಒಳಮೀಸಲಾತಿ ವಿಚಾರದಲ್ಲಿ ಸರ್ಕಾರಗಳು ಸ್ಪಷ್ಟ ನಿಲುವು ತಳೆಯಲಿ

ಒಳಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಶೇ.56ರ ಮೀಸಲಾತಿ ಆದೇಶವನ್ನು ಹೈಕೋರ್ಟ್‌ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಸಂವಿಧಾನದ ಒಂಬತ್ತನೇ ಅನುಸೂಚಿಗೆ ಮೀಸಲಾತಿ ಹೆಚ್ಚಳದ ವಿಚಾರವನ್ನು ಸೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕಳೆದ 40 ವರ್ಷಗಳಿಂದ ನಡೆಯುತ್ತಿರುವ ಮಾದಿಗ ಸಮುದಾಯದ ಒಳಮೀಸಲಾತಿ ಹೋರಾಟಕ್ಕೆ ನ್ಯಾಯ ಒದಗಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ಅಲ್ಲದೆ, ಮೀಸಲಾತಿ ಹೆಚ್ಚಳದ ವಿಚಾರದಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ಪ್ರಾತಿನಿಧ್ಯದಿಂದ ಸಮುದಾಯದ ಅಭಿವೃದ್ಧಿ ಸಾಧ್ಯ

ಸಂಘದ ಸದಸ್ಯೆ ಕುಸುಮ ಭರತ್ ಮಾತನಾಡಿ, ಮಾದರ ಸಮುದಾಯವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸೌಲಭ್ಯಗಳಿಂದ ವಂಚಿತವಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿದರೆ ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಯು.ಸಿ. ರಮೇಶ್, ಪ್ರಮೋದ್, ಮಹೇಂದ್ರ ಸ್ವಾಮಿ, ನಾಗರಾಜ್, ಜಗದೀಶ್ ಹಾಗೂ ಅಶೋಕ್ ಉಪಸ್ಥಿತರಿದ್ದರು.

Demand for 6% reservation for the Madiga community

Share

Leave a comment

Leave a Reply

Your email address will not be published. Required fields are marked *

Don't Miss

ವೃದ್ಧೆಯ ಮನೆಗೆ ನುಗ್ಗಿ ಚಾಕು ತೋರಿಸಿ ಚಿನ್ನಾಭರಣ, ಬೆಳ್ಳಿ ವಸ್ತುಗಳ ದರೋಡೆ

ಚಿಕ್ಕಮಗಳೂರು: ಮನೆಯೊಂದರಲ್ಲಿ ಒಬ್ಬರೇ ವಾಸವಿದ್ದ ಮಹಿಳೆಯನ್ನು ಚಾಕು ತೋರಿಸಿ ಬೆದರಿಸಿದ ಇಬ್ಬರು ಅಪರಿಚಿತರು, ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಜೋಡಿ...

ಮೂಡಿಗೆರೆ ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳ ಬಡಿದಾಟ

ಮೂಡಿಗೆರೆ: ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ವಿವಾದವೊಂದು ಭುಗಿಲೆದ್ದಿದ್ದು, ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಪರಿಸ್ಥಿತಿ ವಿಕೋಪಕ್ಕೆ ಹೋದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ತಾಲೂಕಿನ...

Related Articles

ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಬಿಂಡಿಗ ಶ್ರೀ ದೇವಿರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ನವೆಂಬರ್ ೭ರಿಂದ ೧೧ರವರೆಗೆ ನಡೆಯಲಿದ್ದು...

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಚಿಕ್ಕಮಗಳೂರು: ಕನ್ನಡ ಸಂಸ್ಕೃತಿ, ಚರಿತ್ರೆ, ಗತ ವೈಭವವನ್ನು ಸಾರುವಂತಹ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೦೧ ರಂದು...

ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ

ಚಿಕ್ಕಮಗಳೂರು : ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ...

ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ಹುಲಿರಾಯನ ದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ದೈತ್ಯ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ...