Home namma chikmagalur chikamagalur ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ
chikamagalurCrime NewsHomeLatest Newsnamma chikmagalur

ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ

Share
Share

ಚಿಕ್ಕಮಗಳೂರು : ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಕಾ ಗ್ರಾಮದಲ್ಲಿ ನಡೆದಿದೆ.

ಪ್ರತಿ ವರ್ಷದ ಸಂಪ್ರದಾಯದಂತೆ ಗಣಪತಿ ವಿಸರ್ಜನೆ ಮುಗಿದ ಬಳಿಕ ಲಕ್ಕಾ ಗ್ರಾಮದಲ್ಲಿ ಗೌರಮ್ಮನ ಮೆರವಣಿಗೆಯನ್ನು ಮುಂಜಾನೆಯವರೆಗೂ ಸಡಗರದಿಂದ ನಡೆಸಿ ವಿಸರ್ಜನೆ ಮಾಡುವುದು ವಾಡಿಕೆ. ಈ ಅಪರೂಪದ ವೈಭವವನ್ನು ಕಣ್ಮುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮತ್ತು ಸಾರ್ವಜನಿಕರು ನೆರೆದಿದ್ದರು.

ಆದರೆ ಸಂಭ್ರಮದ ಕ್ಷಣದಲ್ಲೇ ಯುವಕನೊಬ್ಬ ರಾಟೆಗೆ ಪಟಾಕಿ ಕಟ್ಟಿ ಬೆಂಕಿ ಹಚ್ಚಿದ ಪರಿಣಾಮ, ಅದು ನಿಯಂತ್ರಣ ತಪ್ಪಿ ಏಕಾಏಕಿ ಉತ್ಸವ ನೋಡಲು ಬಂದಿದ್ದ ಜನರ ಮೇಲೆ ಸಿಡಿದಿದೆ.

ಈ ದುರ್ಘಟನೆಯಲ್ಲಿ ಮಂಜುನಾಥ್, ರತ್ನ ಹಾಗೂ ಭಾಗ್ಯ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಮಂಜುನಾಥ್ ಅವರ ತಲೆ ಮತ್ತು ಮುಖದ ಭಾಗಕ್ಕೆ ಪಟಾಕಿ ಬಡಿದ ಪರಿಣಾಮ ಕಣ್ಣಿನ ಭಾಗ ಛಿದ್ರಗೊಂಡು ಸಂಪೂರ್ಣ ಹಾನಿಯಾಗಿದೆ.

ಅವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದರಿಂದ ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತುರ್ತಾಗಿ ದಾಖಲಿಸಲಾಗಿದೆ. ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿರುವ ರತ್ನ ಹಾಗೂ ಭಾಗ್ಯ ಅವರನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Firecracker mishap during Gauramma procession – three critically injured

Share

Leave a comment

Leave a Reply

Your email address will not be published. Required fields are marked *

Don't Miss

ವೃದ್ಧೆಯ ಮನೆಗೆ ನುಗ್ಗಿ ಚಾಕು ತೋರಿಸಿ ಚಿನ್ನಾಭರಣ, ಬೆಳ್ಳಿ ವಸ್ತುಗಳ ದರೋಡೆ

ಚಿಕ್ಕಮಗಳೂರು: ಮನೆಯೊಂದರಲ್ಲಿ ಒಬ್ಬರೇ ವಾಸವಿದ್ದ ಮಹಿಳೆಯನ್ನು ಚಾಕು ತೋರಿಸಿ ಬೆದರಿಸಿದ ಇಬ್ಬರು ಅಪರಿಚಿತರು, ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಜೋಡಿ...

ಮೂಡಿಗೆರೆ ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳ ಬಡಿದಾಟ

ಮೂಡಿಗೆರೆ: ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ವಿವಾದವೊಂದು ಭುಗಿಲೆದ್ದಿದ್ದು, ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಪರಿಸ್ಥಿತಿ ವಿಕೋಪಕ್ಕೆ ಹೋದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ತಾಲೂಕಿನ...

Related Articles

ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಬಿಂಡಿಗ ಶ್ರೀ ದೇವಿರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ನವೆಂಬರ್ ೭ರಿಂದ ೧೧ರವರೆಗೆ ನಡೆಯಲಿದ್ದು...

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಚಿಕ್ಕಮಗಳೂರು: ಕನ್ನಡ ಸಂಸ್ಕೃತಿ, ಚರಿತ್ರೆ, ಗತ ವೈಭವವನ್ನು ಸಾರುವಂತಹ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೦೧ ರಂದು...

ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ

ಚಿಕ್ಕಮಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಮತ್ತು...

ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ಹುಲಿರಾಯನ ದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ದೈತ್ಯ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ...