Home namma chikmagalur chikamagalur ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ
chikamagalurHomeLatest Newsnamma chikmagalur

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

Share
Share
ಚಿಕ್ಕಮಗಳೂರು: ಕನ್ನಡ ಸಂಸ್ಕೃತಿ, ಚರಿತ್ರೆ, ಗತ ವೈಭವವನ್ನು ಸಾರುವಂತಹ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೦೧ ರಂದು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನವೆಂಬರ್ ೦೧ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ, ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕದಳ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿದೆಯಲ್ಲದೆ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಅಂದು ಬೆಳಿಗ್ಗೆ ೭.೩೦ ಗಂಟೆಗೆ ನಗರದ ತಹಸೀಲ್ದಾರ್ ಕಚೇರಿ ಆವರಣದಿಂದ ಎಂ.ಜಿ. ರಸ್ತೆ ಮೂಲಕ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದವರೆಗೆ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ನಾಡಿನ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಹಿನ್ನೆಲೆಯುಳ್ಳ ಸ್ತಬ್ಧ ಚಿತ್ರಗಳನ್ನು ತಯಾರಿಸಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಹಾಗೂ ವಿವಿಧ ಇಲಾಖೆಗಳಿಂದ ಆಯಾ ಇಲಾಖೆಗಳ ಯೋಜನೆಗಳನ್ನು ಬಿಂಬಿಸುವ ಸ್ತಬ್ಧ ಚಿತ್ರಗಳನ್ನು ಇಲಾಖಾ ವತಿಯಿಂದ ತಯಾರಿಸಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಅಂದು ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದ ಅವರು, ರಾಜ್ಯೋತ್ಸವ ದಿನದಂದು ನಗರದಾದ್ಯಂತ ಹಬ್ಬದ ವಾತಾವರಣವನ್ನು ಸೃಜಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರವನ್ನು ಆಯಾ ಇಲಾಖಾಧಿಕಾರಿಗಳು ಸ್ವಯಂಪ್ರೇರಿತವಾಗಿ ಕಚೇರಿ ವತಿಯಿಂದ ಮಾಡುವಂತೆ ತಿಳಿಸಿ, ಖಾಸಗಿ ಕಟ್ಟಡಗಳು, ಅಂಗಡಿ ಮುಂಗಟ್ಟುಗಳಲ್ಲಿಯೂ ಸಹ ಅಭಿಮಾನಪೂರ್ವಕವಾಗಿ ಸ್ವಪ್ರೇರಣೆಯಿಂದ ದೀಪಾಲಂಕಾರವನ್ನು ಮಾಡಿ ಹಬ್ಬದ ವಾತಾವರಣ ಮೂಡಿಸುವಂತೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ದೀಪಾಲಂಕಾರ ಮಾಡಬೇಕೆಂದು ತಿಳಿಸಿದರು.
ರಾಜ್ಯೋತ್ಸವ ಆಚರಣೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು,ಉಪಸಮಿತಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ  ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದರ ಜೊತೆಗೆ ಸ್ವಚ್ಛತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ತಿಳಿಸಿದರು.
ಕನ್ನಡ ರಾಜ್ಯೋತ್ಸವದಂದು ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂಧಿಗಳು ಕಡ್ಡಾಯವಾಗಿ ಹಾಜರಾಗಬೇಕು, ಹಾಜರಾಗದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದರ್ ಕುಮಾರ್ ದಯ್ಮಾ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಪುರುರಾಜ್ ಸಿಂಗ್ ಸೋಲಂಕಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಉಪನಿರ್ದೇಶಕ ಮಂಜುನಾಥ್, ಅಕ್ಷರತೋರಣ ದಿನ ಪತ್ರಿಕೆ ಸಂಪಾದಕ ರಾಜೇಶ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು
Decision taken to celebrate Kannada Rajyotsava in a meaningful way
Share

Leave a comment

Leave a Reply

Your email address will not be published. Required fields are marked *

Don't Miss

ವೃದ್ಧೆಯ ಮನೆಗೆ ನುಗ್ಗಿ ಚಾಕು ತೋರಿಸಿ ಚಿನ್ನಾಭರಣ, ಬೆಳ್ಳಿ ವಸ್ತುಗಳ ದರೋಡೆ

ಚಿಕ್ಕಮಗಳೂರು: ಮನೆಯೊಂದರಲ್ಲಿ ಒಬ್ಬರೇ ವಾಸವಿದ್ದ ಮಹಿಳೆಯನ್ನು ಚಾಕು ತೋರಿಸಿ ಬೆದರಿಸಿದ ಇಬ್ಬರು ಅಪರಿಚಿತರು, ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಜೋಡಿ...

ಮೂಡಿಗೆರೆ ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳ ಬಡಿದಾಟ

ಮೂಡಿಗೆರೆ: ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ವಿವಾದವೊಂದು ಭುಗಿಲೆದ್ದಿದ್ದು, ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಪರಿಸ್ಥಿತಿ ವಿಕೋಪಕ್ಕೆ ಹೋದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ತಾಲೂಕಿನ...

Related Articles

ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಬಿಂಡಿಗ ಶ್ರೀ ದೇವಿರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ನವೆಂಬರ್ ೭ರಿಂದ ೧೧ರವರೆಗೆ ನಡೆಯಲಿದ್ದು...

ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ

ಚಿಕ್ಕಮಗಳೂರು : ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ...

ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ

ಚಿಕ್ಕಮಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಮತ್ತು...

ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ಹುಲಿರಾಯನ ದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ದೈತ್ಯ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ...