Home namma chikmagalur chikamagalur ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಿ
chikamagalurHomeLatest Newsnamma chikmagalur

ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಿ

Share
Share

ಚಿಕ್ಕಮಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು, ಆದರ್ಶಗಳು ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅರಿತುಕೊಂಡು, ಅವುಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯವಾಗಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ನಗರದಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆ ಸ್ವೀಕರಿಸಿದ ಐತಿಹಾಸಿಕ ಘಟನೆಯನ್ನು ಸ್ಮರಿಸಿದ ಅವರು, ಲಕ್ಷಾಂತರ ಅನುಯಾಯಿಗಳು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಈ ಐತಿಹಾಸಿಕ ಸ್ಥಳವು ಸಾಮಾಜಿಕ ಪರಿವರ್ತನೆಯ ಮಹತ್ವದ ಸಂಕೇತವಾಗಿದೆ ಎಂದರು.

ರಾಜ್ಯ ಸರ್ಕಾರವು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ದೀಕ್ಷಾಭೂಮಿ ಯಾತ್ರೆಯನ್ನು ಆಯೋಜಿಸಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಈ ಬಾರಿ 150 ಮಂದಿ ನಾಲ್ಕು ಬಸ್‌ಗಳಲ್ಲಿ ನಾಗಪುರಕ್ಕೆ ತೆರಳುತ್ತಿದ್ದಾರೆ. ಕಡೂರಿನಿಂದ ಒಂದು, ಮೂಡಿಗೆರೆಯಿಂದ ಒಂದು ಹಾಗೂ ಚಿಕ್ಕಮಗಳೂರಿನಿಂದ ಎರಡು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಯಾತ್ರಾರ್ಥಿಗಳು ದೀಕ್ಷಾಭೂಮಿಗೆ ಭೇಟಿ ನೀಡಿ ಅಂಬೇಡ್ಕರ್ ಅವರ ಚಿಂತನೆಗಳು, ಹೋರಾಟ ಹಾಗೂ ಸಾಮಾಜಿಕ ಪರಿವರ್ತನೆಯ ಆಶಯಗಳನ್ನು ಅರಿತುಕೊಳ್ಳಬೇಕು. ಜಿಲ್ಲೆಗೆ ಮರಳಿದ ಬಳಿಕ ಪ್ರತಿಯೊಬ್ಬರೂ ಕನಿಷ್ಠ ಹತ್ತು ಮಂದಿಗೆ ಈ ವಿಚಾರಗಳನ್ನು ತಿಳಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವುದರ ಜತೆಗೆ, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಬುದ್ಧ, ಬಸವಣ್ಣ, ಅಂಬೇಡ್ಕರ್, ಕನಕದಾಸ ಮತ್ತು ವಾಲ್ಮೀಕಿ ಅವರಂತಹ ಮಹನೀಯರ ಚಿಂತನೆಗಳು ಸಮ ಸಮಾಜದ ನಿರ್ಮಾಣಕ್ಕೆ ಪ್ರೇರಣೆಯಾಗಿವೆ. ಶೋಷಿತ ವರ್ಗಗಳು ಸಮಾಜದ ಮುಖ್ಯವಾಹಿನಿಗೆ ಬರಲು ಇಂತಹ ಮಹನೀಯರ ವಿಚಾರಧಾರೆಗಳು ಮಹತ್ವದ ಕೊಡುಗೆ ನೀಡಿವೆ ಎಂದರು.

ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂಬುದು ಅಂಬೇಡ್ಕರ್ ಅವರ ಪ್ರಮುಖ ಸಂದೇಶವಾಗಿತ್ತು. ಶಿಕ್ಷಣದ ಮೂಲಕವೇ ಶೋಷಿತ ವರ್ಗಗಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಲು ಸಾಧ್ಯ. ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳು ಹಾಗೂ ಅವಕಾಶಗಳನ್ನು ಕಲ್ಪಿಸಿದ್ದು, ಅದರ ಆಶಯಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಭವರ್ ಸಿಂಗ್ ಮೀನಾ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿವರ್ಷ ಆಯೋಜಿಸಲಾಗುವ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ 150 ಮಂದಿ ತೆರಳುತ್ತಿರುವುದು ಸಂತಸದ ಸಂಗತಿ ಎಂದರು.

ಕಡೂರು, ಮೂಡಿಗೆರೆ ಹಾಗೂ ಚಿಕ್ಕಮಗಳೂರಿನಿಂದ ನಾಲ್ಕು ಬಸ್‌ಗಳ ಮೂಲಕ ಯಾತ್ರಾರ್ಥಿಗಳು ನಾಗಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಯಾತ್ರಾರ್ಥಿಗಳು ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ತಿಳಿದುಕೊಂಡು, ಸಮಾಜದಲ್ಲಿ ಅವುಗಳನ್ನು ಪಸರಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಯಾತ್ರಾರ್ಥಿಗಳ ಪ್ರಯಾಣ ಸುಖಕರವಾಗಿರಲಿ. ಎಲ್ಲರೂ ಆರೋಗ್ಯದಿಂದ ಯಾತ್ರೆ ಪೂರ್ಣಗೊಳಿಸಿ ಸುರಕ್ಷಿತವಾಗಿ ಜಿಲ್ಲೆಗೆ ಮರಳಲಿ ಎಂದು ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಶುಭ ಹಾರೈಸಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮತ್ತು ಸಂಘಟನೆಯ ಮೂಲಕ ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ದೊರಕಿಸಿಕೊಡಲು ಶ್ರಮಿಸಿದ ಮಹಾನ್ ನಾಯಕರು ಎಂದರು.

ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳು ದೊರೆಯುವಂತೆ ಅಂಬೇಡ್ಕರ್ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಹೋರಾಟದ ಉದ್ದೇಶ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಇಂದಿನ ಪೀಳಿಗೆ ಅರಿತುಕೊಳ್ಳಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಪಾಲಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಹಿಂದೆ ಸರ್ಕಾರಿ ಬಸ್‌ಗಳಲ್ಲಿ ಯಾತ್ರೆ ಕೈಗೊಳ್ಳಲಾಗುತ್ತಿತ್ತು. ಈ ಬಾರಿ ಯಾತ್ರಾರ್ಥಿಗಳ ಪ್ರಯಾಣ ಸುಖಕರವಾಗಿರಲಿ ಎಂಬ ಉದ್ದೇಶದಿಂದ ಖಾಸಗಿ ಬಸ್‌ಗಳ ಮೂಲಕ ಐರಾವತ ಮಾದರಿಯ ಸೌಲಭ್ಯಗಳೊಂದಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಇದಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

ಯಾತ್ರೆಯನ್ನು ಆಯೋಜಿಸಿದ ಸರ್ಕಾರ, ಜಿಲ್ಲಾಡಳಿತ ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ, ಜಿಲ್ಲಾಧಿಕಾರಿ ಭವರ್ ಸಿಂಗ್ ಮೀನಾ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ತಾಲೂಕು ಮಟ್ಟದ ಅಧಿಕಾರಿ ರೇವಣ್ಣ, ದಲಿತಪರ ಸಂಘಟನೆಗಳ ಮುಖಂಡರಾದ ಅಣ್ಣಯ್ಯ, ರಾಮಚಂದ್ರ, ಪರಮೇಶ್ವರ, ನಗರಸಭಾ ಸದಸ್ಯ ಅರುಣ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಹಾಗೂ ಯಾತ್ರಾರ್ಥಿಗಳು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಾಲತಿ ಸ್ವಾಗತಿಸಿದರು. ನಾಲ್ಕು ಬಸ್‌ಗಳಲ್ಲಿ ನಾಗಪುರದ ದೀಕ್ಷಾಭೂಮಿಗೆ ತೆರಳುತ್ತಿರುವ 150 ಯಾತ್ರಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು.

Take Ambedkar’s ideas to every household.

Share

Leave a comment

Leave a Reply

Your email address will not be published. Required fields are marked *

Don't Miss

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ ಕುರಿತು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ‘ಬಿ’ ಫೈನಲ್ ವರದಿಯನ್ನು ವಿರೋಧಿಸಿ, ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಪೆಟಿಷನ್...

ಅ. 15ರಂದು ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಜಿಲ್ಲಾ ತಂಡದ ಆಯ್ಕೆ

ಚಿಕ್ಕಮಗಳೂರು: 5ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ–2026 ಹಾಗೂ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ 2026–27ರಲ್ಲಿ ಭಾಗವಹಿಸುವ ಚಿಕ್ಕಮಗಳೂರು ಜಿಲ್ಲಾ ತಂಡವನ್ನು ಆಯ್ಕೆ ಮಾಡಲು ಅಕ್ಟೋಬರ್‌ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ...

Related Articles

ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು

ಕೊಪ್ಪ: ತೀರ್ಥಹಳ್ಳಿ–ಕೊಪ್ಪ ಮುಖ್ಯ ರಸ್ತೆಯ ಚಿಕ್ಕನಕೊಡಿಗೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 80...

₹1.49 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಅಜ್ಜಂಪುರ: ಮನೆಯ ಬೀರುವಿನ ಬೀಗ ಮುರಿದು ₹1.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು...

₹4.94 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳ ಕಳವು

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್‌ ಸಮೀಪದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಹಳೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ₹4.94...

ಜಿಲ್ಲೆಯಲ್ಲಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಐವರಿಗೆ ಗಾಯ

ಕಡೂರು/ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 16 ವರ್ಷದ ಬಾಲಕ ಸೇರಿದಂತೆ...