Home namma chikmagalur chikamagalur ಜಿಲ್ಲೆಯಲ್ಲಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಐವರಿಗೆ ಗಾಯ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಐವರಿಗೆ ಗಾಯ

Share
Share

ಕಡೂರು/ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 16 ವರ್ಷದ ಬಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಕಡೂರು ತಾಲ್ಲೂಕಿನ ನಾಗರಾಳು ಗೇಟ್ ಬಳಿ ಅ.15ರಂದು ಸಂಜೆ ಬೈಕ್‌ಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಕಪಿಲ್ ಬಿಷ್ಣೋಯಿ (16) ಮತ್ತು ರಾಮ್ ನಿವಾಸ್ ಗಾಯಗೊಂಡಿದ್ದಾರೆ. ಜಾವಗಲ್‌ನಿಂದ ದೇವನೂರಿಗೆ ತೆರಳುತ್ತಿದ್ದ ವೇಳೆ ಜೆಸಿಬಿ ತಿರುಗಿಸಿದಾಗ ಬೈಕ್ ಡಿಕ್ಕಿಯಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ಚಿಕ್ಕಮಗಳೂರು ನಗರದ ಶ್ರೀ ಸಾಯೀಶ್ವರಂ ಹೋಟೆಲ್ ಮುಂಭಾಗ ಅ.16ರಂದು ಬೆಳಿಗ್ಗೆ ಬೊಲೆರೋ ಪಿಕಪ್ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸಂತೋಷ್ ಗಂಗು ಶಳಕೆ ಮತ್ತು ಮಂಜುನಾಥ ಗಾಯಗೊಂಡಿದ್ದಾರೆ. ಅಲ್ಲಂಪುರದಿಂದ ನಗರಕ್ಕೆ ಬರುತ್ತಿದ್ದ ಸ್ಕೂಟಿಗೆ ಕಿರಣ್ ಬೇಕರಿ ಪಕ್ಕದ ರಸ್ತೆಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮಂಜುನಾಥ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ದಿನ ನಗರದ ಕಣಿವೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಮಧ್ಯಾಹ್ನ 1.40ರ ಸುಮಾರಿಗೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಲ್ಲೇಶಪ್ಪ ಗಾಯಗೊಂಡಿದ್ದಾರೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು (ಕೆಎ-14 ಎಂಸಿ-2489) ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಮಲ್ಲೇಶಪ್ಪ ಅವರ ಕೈ, ಕಾಲು, ಎಡಭುಜ ಹಾಗೂ ತಲೆಗೆ ಗಾಯಗಳಾಗಿವೆ. ಅವರನ್ನು ನಗರದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಹುಲಿಗೌಡ ವಿರುದ್ಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Five injured in a series of road accidents in the district

Share

Leave a comment

Leave a Reply

Your email address will not be published. Required fields are marked *

Don't Miss

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ ಕುರಿತು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ‘ಬಿ’ ಫೈನಲ್ ವರದಿಯನ್ನು ವಿರೋಧಿಸಿ, ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಪೆಟಿಷನ್...

ಅ. 15ರಂದು ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಜಿಲ್ಲಾ ತಂಡದ ಆಯ್ಕೆ

ಚಿಕ್ಕಮಗಳೂರು: 5ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ–2026 ಹಾಗೂ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ 2026–27ರಲ್ಲಿ ಭಾಗವಹಿಸುವ ಚಿಕ್ಕಮಗಳೂರು ಜಿಲ್ಲಾ ತಂಡವನ್ನು ಆಯ್ಕೆ ಮಾಡಲು ಅಕ್ಟೋಬರ್‌ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ...

Related Articles

ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು

ಕೊಪ್ಪ: ತೀರ್ಥಹಳ್ಳಿ–ಕೊಪ್ಪ ಮುಖ್ಯ ರಸ್ತೆಯ ಚಿಕ್ಕನಕೊಡಿಗೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 80...

₹1.49 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಅಜ್ಜಂಪುರ: ಮನೆಯ ಬೀರುವಿನ ಬೀಗ ಮುರಿದು ₹1.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು...

₹4.94 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳ ಕಳವು

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್‌ ಸಮೀಪದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಹಳೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ₹4.94...

ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಿ

ಚಿಕ್ಕಮಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು, ಆದರ್ಶಗಳು ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅರಿತುಕೊಂಡು,...