Home namma chikmagalur chikamagalur ಆರದವಳ್ಳಿ ಗ್ರಾಮದಲ್ಲಿ ವಿಜಯದಶಮಿ ಸಂಪ್ರದಾಯಿಕ ಆಚರಣೆ
chikamagalurHomeLatest Newsnamma chikmagalur

ಆರದವಳ್ಳಿ ಗ್ರಾಮದಲ್ಲಿ ವಿಜಯದಶಮಿ ಸಂಪ್ರದಾಯಿಕ ಆಚರಣೆ

Share
Share

ಚಿಕ್ಕಮಗಳೂರು: ದಸರಾ ನವರಾತ್ರಿ ನಾಡಹಬ್ಬದ ಅಂಗವಾಗಿ ತಾಲ್ಲೂಕಿನ ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿ ನೂ ರಾರು ಗ್ರಾಮಸ್ಥರು ಹಾಗೂ ಗ್ರಾಮದ ಪಟೇಲ ವಂಶಸ್ಥ ಎ.ಎನ್.ಮಹೇಶ್ ಸಾರಥ್ಯದಲ್ಲಿ ವಿಜಯದಶಮಿಯಂದು ಸಂಪ್ರದಾಯಿಕ ಪೂಜಾ ವಿಧಿ ವಿಧಾನಗಳ ಮೂ ಲಕ 29ನೇ ವರ್ಷದ ಅಂಬು ಒಡೆದು ಸಂಭ್ರಮದಿAದ ಆಚರಿಸಿದರು.

ಗ್ರಾಮಸ್ಥರು ಗ್ರಾಮದೇವರನ್ನು ಹೊತ್ತು ಊರಿನ ಸುತ್ತ ಮೆರವಣಿಗೆ ನಡೆಸಿ ಅಂಬು ಒಡೆಯುವ ಸ್ಥಳಕ್ಕೆ ಸಾಗಿದರು. ಸಾಂಪ್ರದಾಯಿಕ ಅಲಂಕೃತ ಉಡುಗೆಯೊಂದಿಗೆ ಸಿಂಗಾರಗೊAಡಿದ್ದ ಪಟೇಲ ವಂಶಸ್ಥ ಎ.ಎನ್. ಮಹೇಶ್ ಹಾಗೂ ಕುಟುಂಬಸ್ಥರನ ಊರಿನ ಮುಖಂಡರು, ಗ್ರಾಮಸ್ಥರುಗಳು ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಗ್ರಾಮದ ಅಂಬು ಒಡೆಯುವ ದೊಡ್ಡಕೆರೆ ಬಳಿಗೆ ಕರೆ ತರಲಾಯಿತು.

ಗ್ರಾಮದೇವತೆಗಳಿಗೆ ಪೂಜೆ ಸಲ್ಲಿಸಿ ಬನ್ನಿ ಮರದ ಬಳಿ ಶಮಿಪೂಜೆ ನೆರವರಿಸಿದ ನಂತರ ಊರಿನ ದೊಡ್ಡ ಕೆರೆ ಬಳಿಕ ಏರ್ಪಡಿಸಿದ ಅಂಬು ಹೊಡೆಯುವ ಸಾಂಪ್ರದಾಯಿಕ ಕಾರ್ಯಕ್ರಮದಲ್ಲಿ ಬಾಳೆಗೊನೆಗೆ ಬಿಲ್ಲು ಹೊಡೆ ದು, ಬಂದೂಕಿನಿAದ ಬಾಳೆ ದಿಂಡನ್ನು ತುಂಡರಿಸಿದರು. ಮಹಿಳೆಯರು, ಮಕ್ಕಳು ಕುಪ್ಪಳಿಸಿ ಸಂಭ್ರಮಾಚರಿಸಿದರು.

ಶ್ರೀ ಆಂಜನೇಯ ಸ್ವಾಮಿ, ಮಲ್ಲೇಶ್ವರಸ್ವಾಮಿ, ಗ್ರಾಮದೇವತೆಗಳಾದ ಮಾರಮ್ಮದೇವಿ ಹಾಗೂ ಭೂತಪ್ಪದೇವರ ಉತ್ಸವದೊಂದಿಗೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯಿಕವಾಗಿ ಬಾಳೆ ಗೊನೆಗೆ ಬಿಲ್ಲು ಹೊಡೆಯುವ ಮೂಲಕ ಅಂಬಿನ ಉತ್ಸವವನ್ನು ಯಶಸ್ವಿಗೊಳಿಸಿದರು.

ವಿಜಯದಶಮಿ ಅಂಬುಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎ.ಎನ್.ಮಹೇ ಶ್ ವಿಜಯದಶಮಿ ಒಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ವಿಜಯ ನಗರ ಅರಸರ ಕಾಲದಿಂದಲೂ ದಸರಾ ಉತ್ಸವ ಅತ್ಯಂತ ವಿಜೃಂಭಣೆಯಿAದ ನಡೆದುಕೊಂಡು ಬರುತ್ತಿದೆ. ಮೈಸೂರು ಅರಸರ ಕಾಲದಲ್ಲಿ ನವರಾತ್ರಿ ದಸರಾಗೆ ಮತ್ತಷ್ಟು ಮಹತ್ವ ಬಂದಿದೆ ಎಂದರು.

ರಾಜ ಪ್ರಜಾಪ್ರಭುತ್ವದ ಕಾಲದಲ್ಲಿ ಸ್ಥಳೀಯ ಆಡಳಿತ ನಡೆಸುವ ಪಟೇಲರನ್ನು ನೇಮಿಸಿ ಅವರಿಂದ ದಸರಾ ಆಚರಣೆಗೆ ಚಾಲನೆ ನೀಡಲಾಗುತ್ತಿತ್ತು. ಅಂದಿನಿAದ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ತಮ್ಮ ಕುಟುಂಬದ ಪೂರ್ವಜರು ಪಟೇಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅದನ್ನು ಮುಂದುವರಿ ಸಿಕೊಂಡು ಬರಲಾಗುತ್ತಿದೆ ಎಂದರು.

ಅAಬು ಉತ್ಸವವು ಅನೇಕ ವರ್ಷಗಳಿಂದ ಆರದವಳ್ಳಿಯ ಗ್ರಾಮದಲ್ಲಿ ಪಟೇಲ ವಂಶಸ್ಥರಿAದ ಚಾಲನೆ ದೊರೆಯುತ್ತಿದೆ. ವಿಜಯದಶಮಿಯಂದು ಅಂಬುಹೊಡೆಯುವ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಆಹ್ವಾನ ನೀಡುವ ಮೂಲಕ, ಸಂಪ್ರದಾಯಿಕ ಉಡುಗೆ, ವಾದ್ಯಗೋಷ್ಠಿಯೊಂದಿಗೆ ಕರೆತಂದು ವಿಶೇಷ ಗೌರವದಿಂದ ಕಾಣುತ್ತಾರೆ. ಇದಕ್ಕೆ ನಮ್ಮ ಪೂರ್ವಜರು, ಗಾಮಸ್ಥರು, ಹಾಗೂ ಮುಖಂಡರ ಸಹಕಾರವೇ ಕಾರಣ ಎಂದರು.

ಮೈಸೂರು ಅರಸ್ ಆಳ್ವಿಕೆಯ ಸಂದರ್ಭದಲಿ ಸಂಸ್ಥಾನದ ಆಡಳಿತವು ಅಲ್ಲಲ್ಲಿ ಪಟೇಲರ ನೇತೃತ್ವದಲಿ ನಡೆಯುತ್ತಿತು. ಪಟೇಲರ ವ್ಯಾಪ್ತಿ ೨೦ ರಿಂದ ೩೦ ಹಳ್ಳಿ ಗಳಿದ್ದವು. ಮೈಸೂರಿನಲ್ಲಿ ಆರಂಭವಾದ ಸಾಂಪ್ರದಾಯಿಕ ದಸರಾ ಕಾರ್ಯಕ್ರಮ ನಾಡಿನಾದ್ಯಂತ ನಡೆಯಬೇಕೆಂಬುದು ಅರಸರ ಅಭಿಲಾಷೆಯಾಗಿತ್ತು. ಅಂತೆಯೇ ನಾಡಿನ ಎಲ್ಲಾ ಭಾಗದಲ್ಲಿಯೂ ಅಲ್ಲಿಯ ಸಂಸ್ಥಾನದ ಪಟೇಲರ ನೇತೃತ್ವದಲ್ಲಿ ನಡೆಯಬೇಕೆಂದು ತೀರ್ಮಾನಿಸಲಾಯಿತು. ಅದರಂತೆ ಆರದವಳ್ಳಿ ಸೇರಿದಂತೆ ಎಲ್ಲಾ ಸಂಸ್ಥಾನದಲ್ಲಿಯೂ ಆರಂಭಿಸಲಾಯಿತು.

ಸುಮಾರು ೧೦೦ ವರ್ಷಗಳ ಹಿಂದೆ ಆರದವಳ್ಳಿಯಲ್ಲಿ ಅಲ್ಲಿಯ ಪಟೇಲರಾದ ದೊಡ್ಡಪುಟ್ಟೇಗೌಡರು ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರ ನೇತೃತ್ವದಲ್ಲಿ ನಿರಂತರವಾಗಿ ನಡೆಯುತ್ತಿದ್ದು ಅವರ ಕಾಲಾನಂತರದಲ್ಲಿ ಕಾರ್ಯಕ್ರಮ ಸ್ಥಗಿತಗೊಂಡಿತು. ಬಳಿಕ ಚಾಲನೆಗೆ ಬಂದಿದ್ದು ಕಳೆದ ಅನೇಕ ವರ್ಷಗಳ ಹಿಂದೆ ಗಾಮಸ್ಥರು, ಹಿರಿಯರು ಸೇರಿದಂತೆ ಪಟೇಟರ ವಂಶಸ್ಥರಾದ ತಮ್ಮನ್ನು ಕೋರಿಕೊಂಡ ಹಿನ್ನೆಲೆಯಲ್ಲಿ ನಿರಂತ ರವಾಗಿ ವಿಜ್ರಂಭಣೆಯಿAದ ಗ್ರಾಮದಲ್ಲಿ ದಸರಾ ಕಾರ್ಯಕ್ರಮ ನಡೆಯುತ್ತಿದೆ.

ಈ ಸಂದರ್ಬದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಎಂಸಿ ಶಿವಾನಂದಸ್ವಾಮಿ, ಕಾಂಗ್ರೆಸ್ ಮುಖಂಡ ತನೋಜ್ ನಾಯ್ಡು, ಗ್ರಾಮಸ್ಥರಾದ ಪಾಪಣ್ಣ, ಜಯಣ್ಣ, ಕುಮಾರ್, ದಾಕ್ಷಯಣಿ, ಬಸವೇಗೌಡ, ಚಂದ್ರೇಗೌಡ, ಅಣ್ಣೇಗೌಡ, ದೇವರಾಜ್, ಹಾಲಪ್ಪ, ಹಾಲೇಶ್, ತೀರ್ಥೇಶ್, ಪುಟ್ಟೇಗೌಡ, ಸಣ್ಣೇಗೌಡ, ವೀರಭದ್ರಚಾರ್, ಶಿವಣ್ಣ ಮುಂತಾದವರಿದ್ದರು.

Traditional celebration of Vijayadashami in Aradavalli village

Share

Leave a comment

Leave a Reply

Your email address will not be published. Required fields are marked *

Don't Miss

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆಯ ಬಹುತೇಕ ಪ್ರದೇಶಗಳು ಬರ ಪರಿಸ್ಥಿತಿ ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ...

ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಸಿಪಿಐ (ಎಂಎಲ್) ಪ್ರತಿಭಟನೆ

ಚಿಕ್ಕಮಗಳೂರು: ನಗರದ ಅಜಾದ್ ಪಾರ್ಕಿನಲ್ಲಿ ಬುಧವಾರ ಸಿಪಿಐ (ಎಂಎಲ್) ರೆಡ್ ಸ್ಟಾರ್ ಜಿಲ್ಲಾ ಸಂಘಟನೆಯು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ...

Related Articles

ಬೀಕನಹಳ್ಳಿ ಗ್ರಾಮಕ್ಕೆ ನಗರ ವಿದ್ಯುತ್ ಸಂಪರ್ಕ

ಚಿಕ್ಕಮಗಳೂರು: ನಗರದ ಸಮೀಪದ ದೊಡ್ಡ ಗ್ರಾಮಗಳಲ್ಲಿ ಒಂದಾದ ಬೀಕನಹಳ್ಳಿಯಲ್ಲಿ ಗ್ರಾಮಾಂತರ ವಿದ್ಯುತ್ ವ್ಯವಸ್ಥೆಯನ್ನು ನಗರ ವಿದ್ಯುತ್...

ದೇವಿರಮ್ಮನವರ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಿಳ್ಳಿಗಾರ್ ದೇವಿರಮ್ಮನವರ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು...

ದೇಶದ ಶಾಂತಿ, ಭದ್ರತೆಗಾಗಿ ಪೊಲೀಸರ ತ್ಯಾಗ ಸ್ಮರಣೀಯ

ಚಿಕ್ಕಮಗಳೂರು: ಖಾಕಿ ಸಮವಸ್ತ್ರವು ಜನರ ವಿಶ್ವಾಸದ ಸಂಕೇತವಾಗಿದ್ದು, ದೇಶದ ಗಡಿ ರಕ್ಷಣೆ, ಆಂತರಿಕ ಭದ್ರತೆ ಹಾಗೂ...

ಅಜ್ಜಂಪುರದಲ್ಲಿ ಬೈಕ್‌ನಿಂದ ಬಿದ್ದು ಮಹಿಳೆ ಸಾವು 

ಅಜ್ಜಂಪುರ: ಪತಿಯ ಬೈಕ್‌ನಲ್ಲಿ ಹಿಂಬದಿ ಕುಳಿತು ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟಿರುವ ಘಟನೆ...