Home namma chikmagalur chikamagalur ಗೋಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಬಳಕೆಗೆ ಕ್ರಮ ಕೈಗೊಳ್ಳಿ
chikamagalurHomeLatest Newsnamma chikmagalur

ಗೋಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಬಳಕೆಗೆ ಕ್ರಮ ಕೈಗೊಳ್ಳಿ

Share
oplus_161480704
Share

ಚಿಕ್ಕಮಗಳೂರು: ದೇಶದಾದ್ಯಂತ ಗೋಶಾಲೆಗಳ ಅಭಿವೃದ್ಧಿ ಹಾಗೂ ಜಾನುವಾರುಗಳ ಕಲ್ಯಾಣಕ್ಕಾಗಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯನ್ನು ಬಳಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ಕೆ.ವಿ. ನಾಗೇಶ್ ಅಂಗೀರಸ ಒತ್ತಾಯಿಸಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರು ದೇಶದ ಗೋಶಾಲೆಗಳ ಪರವಾಗಿ ಧ್ವನಿ ಎತ್ತಿರುವುದು ಐತಿಹಾಸಿಕ ಬೆಳವಣಿಗೆಯಾಗಿದೆ. ಗೋಶಾಲೆಗಳ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳು ಮುಂದಾಗಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ದೇಶದ ಎಲ್ಲ ಗೋಶಾಲೆಗಳ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕರ್ನಾಟಕದಲ್ಲಿ 2,000ಕ್ಕೂ ಹೆಚ್ಚು ಗೋಶಾಲೆಗಳಿದ್ದು, ಇವುಗಳಲ್ಲಿ ಅನೇಕ ಗೋಶಾಲೆಗಳು ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಆಶ್ರಯ ಮತ್ತು ಆರೈಕೆ ಒದಗಿಸುತ್ತಿವೆ. ಆದರೆ, ಗೋಶಾಲೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಅಗತ್ಯ ಮೂಲಸೌಕರ್ಯ ಹಾಗೂ ಆರ್ಥಿಕ ನೆರವಿನ ಕೊರತೆ ಎದುರಾಗುತ್ತಿದೆ. ಹೀಗಾಗಿ, ಗೋಶಾಲೆಗಳ ಅಭಿವೃದ್ಧಿಗೆ ಸರ್ಕಾರ ಮತ್ತು ಕಾರ್ಪೊರೇಟ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಂಪನಿಗಳ ಕಾಯ್ದೆ-2013ರ ಅನುಸೂಚಿ VIIರ ಅಡಿಯಲ್ಲಿ ಪರಿಸರ ಸುಸ್ಥಿರತೆ, ಪರಿಸರ ಸಮತೋಲನ, ಸಸ್ಯ ಮತ್ತು ಪ್ರಾಣಿಗಳ ರಕ್ಷಣೆ ಹಾಗೂ ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಸಿಎಸ್‌ಆರ್‌ ವೆಚ್ಚಕ್ಕೆ ಅರ್ಹ ಕ್ಷೇತ್ರಗಳೆಂದು ಗುರುತಿಸಲಾಗಿದೆ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಗೋಶಾಲೆಗಳ ಅಭಿವೃದ್ಧಿಗೆ ನೆರವು ನೀಡಬಹುದು ಎಂದು ಹೇಳಿದರು.

ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳು, ಸರ್ಕಾರಿ ಕಂಪನಿಗಳು ಹಾಗೂ ಸಿಎಸ್‌ಆರ್‌ ನಿಧಿ ಬಳಸಲು ಅರ್ಹವಾಗಿರುವ ಇತರ ಕಾರ್ಪೊರೇಟ್ ಸಂಸ್ಥೆಗಳು ಗೋಶಾಲೆಗಳ ಅಭಿವೃದ್ಧಿ ಮತ್ತು ಜಾನುವಾರುಗಳ ಕಲ್ಯಾಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದರು.

ಗೋಶಾಲೆಗಳಲ್ಲಿ ಜಾನುವಾರುಗಳ ಕೊಟ್ಟಿಗೆಗಳ ನಿರ್ಮಾಣ ಮತ್ತು ನವೀಕರಣ, ಕುಡಿಯುವ ನೀರಿನ ವ್ಯವಸ್ಥೆ, ಮೇವು ಸಂಗ್ರಹಣೆ, ಆಹಾರ ಪೂರೈಕೆ, ಪಶುವೈದ್ಯಕೀಯ ಆರೈಕೆ, ನೈರ್ಮಲ್ಯ, ಒಳಚರಂಡಿ, ತ್ಯಾಜ್ಯ ನಿರ್ವಹಣೆ, ಜೈವಿಕ ಅನಿಲ ಮತ್ತು ಕಾಂಪೋಸ್ಟ್ ಘಟಕಗಳ ಸ್ಥಾಪನೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿಯನ್ನು ಬಳಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಅಲ್ಲದೆ, ಸಿಎಸ್‌ಆರ್‌ ನಿಧಿಗೆ ಅರ್ಹವಾಗಿರುವ ಗೋಶಾಲೆಗಳನ್ನು ಗುರುತಿಸಿ ನೆರವು ನೀಡಲು ಅನುಕೂಲವಾಗುವಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು. ವಿಶೇಷವಾಗಿ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿರುವ ಗೋಶಾಲೆಗಳಿಗೆ ಆದ್ಯತೆ ನೀಡಬೇಕು. ಇದರಿಂದ ಜಾನುವಾರುಗಳ ಕಲ್ಯಾಣದ ಜತೆಗೆ ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರ ಕೃಷಿ ಪದ್ಧತಿಗಳಿಗೂ ಉತ್ತೇಜನ ದೊರೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ, ವಿಕಸಿತ ಭಾರತ–ಜಿ ರಾಮ್ ಜಿ (VB-G RAM G) ಕಾಯ್ದೆಯಡಿ ಲಭ್ಯವಿರುವ ಯೋಜನೆಗಳನ್ನು ಗೋಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳುವ ಕುರಿತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದನ್ನೂ ಅವರು ಸ್ವಾಗತಿಸಿದರು.

ದೇಶದ ಎಲ್ಲ ಗೋಶಾಲೆಗಳ ಅಭಿವೃದ್ಧಿ ಮತ್ತು ಜಾನುವಾರುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕೆ.ವಿ. ನಾಗೇಶ್ ಅಂಗೀರಸ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಗೋಶಾಲೆಗಳ ಅಭಿವೃದ್ಧಿ, ಜಾನುವಾರುಗಳ ರಕ್ಷಣೆ ಮತ್ತು ಗ್ರಾಮೀಣ ಪ್ರದೇಶಗಳ ಸುಸ್ಥಿರತೆಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲಾಯಿತು.

Take steps to utilize CSR funds for the development of Goshalas.

Share

Leave a comment

Leave a Reply

Your email address will not be published. Required fields are marked *

Don't Miss

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಕಳಚಿ ಬಿತ್ತು!

ಕೊಪ್ಪ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಏಕಾಏಕಿ ಕಳಚಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಸಮೀಪ...

ಅ.25ರಂದು ಮ್ಯಾರಥಾನ್ – ಸೈಕ್ಲಿಂಗ್ ಕ್ರೀಡಾಕೂಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಕೃತಿ ಸೌಂದರ್ಯದ ನಡುವೆ ಓಟ ಮತ್ತು ಸೈಕ್ಲಿಂಗ್ ಕ್ರೀಡೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಚಿಕ್ಕಮಗಳೂರು ಸೈಕ್ಲಿಂಗ್ ಕ್ಲಬ್ ವತಿಯಿಂದ ಅ.25ರಂದು ಮೂಡಿಗೆರೆಯ ಕಾಫಿ ಕೋರ್ಟ್‌ನಲ್ಲಿ ‘ಮುದೇಮನೆ ಚಿಕ್ಕಮಗಳೂರು ವೈಲ್ಡರ್‌ನೆಸ್‌–2026’ ಮ್ಯಾರಥಾನ್...

Related Articles

ದಲಿತ ಕುಟುಂಬಕ್ಕೆ ಮಂಜೂರಾಗಿದ್ದ ಐದು ಎಕರೆ ಜಮೀನು ರದ್ದು

ಚಿಕ್ಕಮಗಳೂರು: 45 ವರ್ಷಗಳ ಬಳಿಕ ಜಮೀನು ಮಂಜೂರಾತಿ ರದ್ದುಪಡಿಸಿದ ಕ್ರಮ ಕಾನೂನುಬಾಹಿರವೆಂದು ಹೈಕೋರ್ಟ್‌ ಅಭಿಪ್ರಾಯ; ಅಧಿಕಾರ...

ಬಸ್‌ಗೆ ಬೈಕ್ ಡಿಕ್ಕಿ: ಗಾಯಗೊಂಡಿದ್ದ ಸವಾರ ಸಾವು

ಅಜ್ಜಂಪುರ: ಮುಂದೆ ಸಾಗುತ್ತಿದ್ದ ಬಸ್‌ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ಬಸ್ ನಿಲ್ಲಿಸಿದ ಪರಿಣಾಮ...

ನರ್ಸ್ ಮನೆಯ ಬೀರುವಿನಲ್ಲಿದ್ದ 47 ಗ್ರಾಂ ಚಿನ್ನಾಭರಣ ಕಳವು: ₹4.70 ಲಕ್ಷ ನಷ್ಟ

ನರಸಿಂಹರಾಜಪುರ: ಮನೆಯ ಗಾಡ್ರೇಜ್ ಬೀರುವಿನಲ್ಲಿಟ್ಟಿದ್ದ 47 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದ್ದು, ಸುಮಾರು ₹4.70 ಲಕ್ಷ...

ಕುಸುಮ್-ಬಿ, ಪಿಎಂ ಸೂರ್ಯ ಘರ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸೂಚನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಯೋಜನೆಯಡಿ ಜಿಲ್ಲೆಯಲ್ಲಿ ಅನುಮೋದನೆಗೊಂಡಿರುವ...