Home namma chikmagalur chikamagalur ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
chikamagalurHomeLatest Newsnamma chikmagalur

ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Share
oplus_161480704
Share

ಚಿಕ್ಕಮಗಳೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ತಿಳಿಸಿದರು.

ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ (ರಿ.), ಚಿಕ್ಕಮಗಳೂರು ಜಿಲ್ಲೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಅ.26ರ ಸೋಮವಾರ ಬೆಳಿಗ್ಗೆ 9.30ಕ್ಕೆ ಚಿಕ್ಕಮಗಳೂರು ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ಆರಂಭವಾಗಿ, ಎಂ.ಜಿ. ರಸ್ತೆಯ ಮೂಲಕ ಕುವೆಂಪು ಕಲಾಮಂದಿರ ತಲುಪಲಿದೆ. ಜಯಂತಿ ಅಂಗವಾಗಿ ಕಲಾಮಂದಿರದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು, ಪಿಎಚ್‌ಡಿ ಪದವಿ ಪಡೆದವರು ಹಾಗೂ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳನ್ನು ಜಿಲ್ಲಾಡಳಿತದ ವತಿಯಿಂದ ಗೌರವಿಸಿ ಸನ್ಮಾನಿಸಲಾಗುವುದು ಎಂದರು.

ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ದಲಿತಪರ ಒಕ್ಕೂಟಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕನ್ನಡಪರ ಹಾಗೂ ರೈತಪರ ಸಂಘಟನೆಗಳ ಮುಖಂಡರು, ಸಮಾಜದ ಗಣ್ಯರು, ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡರಾದ ವಿಜಯ್ ಕುಮಾರ್, ಶ್ರೀಧರ್, ಕುಮಾರ್, ಮಧುಕುಮಾರ್ ಹಾಗೂ ಉಮೇಶ್ ಕುನ್ನಾಳು ಉಪಸ್ಥಿತರಿದ್ದರು.‌

Maharshi Valmiki Jayanti to be celebrated in Chikkamagaluru on October 26

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಪಂಚಾಯಿತಿ ಮೀಸಲು ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ಸುದ್ದಿ !

ಚಿಕ್ಕಮಗಳೂರು:, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಗೆ ಮೀಸಲಾತಿ ನಿಗದಿ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಶಾಸಕರುಗಳ ಮೂಗಿನ ನೇರಕ್ಕೆ ಮೀಸಲಾತಿ ಪ್ರಕಟಿಸಿರುವುದು ಹಗಲು ಹೊತ್ತು ಎಲ್ಲರೂ ನೋಡುತ್ತಿರುವಾಗ ಕದ್ದು ಹಾಲು ಕುಡಿದಂತೆ...

ಕಡೂರು ರೈಲ್ವೆ ನಿಲ್ದಾಣದಲ್ಲಿ ಕೈಕೊಟ್ಟ ಡಿಜಿಟಲ್ ಪಾವತಿ ವ್ಯವಸ್ಥೆ

ಚಿಕ್ಕಮಗಳೂರು: ಕಡೂರು ರೈಲ್ವೆ ನಿಲ್ದಾಣದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಶುಕ್ರವಾರ ಪ್ರಯಾಣಿಕರು ತೊಂದರೆ ಅನುಭವಿಸಿದರು. ಸರ್ವರ್ ಸಮಸ್ಯೆಯಿಂದ ಡಿಜಿಟಲ್ ಪಾವತಿ ಸ್ಥಗಿತಗೊಂಡು ಕೈಯಲ್ಲಿ ಹಣವಿಲ್ಲದ ಪ್ರಯಾಣಿಕರು...

Related Articles

ವಡ್ಡರಹಳ್ಳಿ-ಕೆ.ಬಿ. ಹಾಳ್ ಕೆರೆಗಳಿಗೆ ಗಂಗೆ ಪೂಜೆ

ಚಿಕ್ಕಮಗಳೂರು: ಬರಗಾಲದ ನಡುವೆಯೂ ಎತ್ತಿನಹೊಳೆ ಯೋಜನೆಯ ನೀರಿನಿಂದ ಕೆ.ಬಿ. ಹಾಳ್ (ಕುರುಬರ ಬೂದಿಹಾಳ್) ಸೇರಿದಂತೆ ಸುತ್ತಮುತ್ತಲಿನ...

ಅ.27ರಂದು ಅರಣ್ಯ ಭವನ ಸಂಕೀರ್ಣ ಲೋಕಾರ್ಪಣೆ

ಚಿಕ್ಕಮಗಳೂರು: ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅರಣ್ಯ ಭವನ ಸಂಕೀರ್ಣ ಅ.೨೭ರಂದು ಲೋಕಾರ್ಪಣೆಗೊಳ್ಳಲಿದ್ದು, ಅರಣ್ಯ ಸಚಿವ ರಾಮಲಿಂಗಾರೆಡ್ಡಿ...

ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಹಲವರು...

ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಹಲವರಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು, ಅಜ್ಜಂಪುರ, ಬೀರೂರು ಹಾಗೂ ಪಂಚನಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಅಪಘಾತ...