Home namma chikmagalur chikamagalur ಪ್ಲಾಂಟೇಷನ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ
chikamagalurHomeLatest Newsnamma chikmagalur

ಪ್ಲಾಂಟೇಷನ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ

Share
oplus_161480704
Share

ಚಿಕ್ಕಮಗಳೂರು: ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಫಿ ಮತ್ತು ಟೀ ಪ್ಲಾಂಟೇಷನ್‌ಗಳಲ್ಲಿ ದುಡಿಯುವ ಕಾರ್ಮಿಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‌ ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದರನ್ವಯ ನಾನ್‌ಸ್ಟಾಫ್ (ಆರ್ಟಿಸನ್ಸ್) ಕಾರ್ಮಿಕರಿಗೆ ಶೇ.17ರಷ್ಟು ಹಾಗೂ ಸೂಪರ್‌ವೈಸರ್‌ಗಳಿಗೆ ಶೇ.16ರಷ್ಟು ವೇತನ ಹೆಚ್ಚಳವಾಗಲಿದೆ. ಈ ಒಪ್ಪಂದವು 2026ರ ಏಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ಪ್ಲಾಂಟೇಷನ್ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

ಇದೇ ವೇಳೆ, ಕೇಂದ್ರ ಸರ್ಕಾರದ ಹೊಸ ಇಪಿಎಫ್ ಯೋಜನೆ–2026ರ ಅಡಿಯಲ್ಲಿ ಜಾರಿಗೊಳಿಸಿರುವ ಕಾರ್ಮಿಕ ವಿರೋಧಿ ಕಠಿಣ ನಿಯಮಗಳನ್ನು ಹಿಂಪಡೆಯಬೇಕು ಹಾಗೂ ತೋಟದ ಕಾರ್ಮಿಕರಿಗೆ ವಿಶೇಷ ವಿನಾಯಿತಿ ನೀಡಬೇಕು ಎಂದು ಜಂಟಿ ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.

### ನಾನ್‌ಸ್ಟಾಫ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ

ವೇತನ ಒಪ್ಪಂದದ ಪ್ರಕಾರ, ಹೊಸದಾಗಿ ನೇಮಕಗೊಳ್ಳುವ ನಾನ್‌ಸ್ಟಾಫ್ ಕಾರ್ಮಿಕರ ವಿವಿಧ ವರ್ಗಗಳಿಗೆ ರೂ.18,800ರಿಂದ ರೂ.19,200ರವರೆಗೆ ಮೂಲವೇತನ ನಿಗದಿಪಡಿಸಲಾಗಿದೆ. ಇದರೊಂದಿಗೆ ರೂ.435.60 ತುಟ್ಟಿಭತ್ಯೆ ದೊರೆಯಲಿದೆ. ಸೂಪರ್‌ವೈಸರ್‌ಗಳ ವೇತನದಲ್ಲಿ ಶೇ.16ರಷ್ಟು ಹೆಚ್ಚಳವಾಗಿದ್ದು, ಹೊಸದಾಗಿ ನೇಮಕಗೊಳ್ಳುವವರಿಗೆ ರೂ.18,400 ಮೂಲವೇತನದ ಜೊತೆಗೆ ರೂ.435.60 ತುಟ್ಟಿಭತ್ಯೆ ನೀಡಲಾಗುತ್ತದೆ.

ವೇತನದ ಜತೆಗೆ ಕಾರ್ಮಿಕರಿಗೆ ವಾಸದ ಮನೆ, ಕುಡಿಯುವ ನೀರು, ಉಚಿತ ಆರೋಗ್ಯ ಸೇವೆ, ಭವಿಷ್ಯ ನಿಧಿ, ಗ್ರಾಚ್ಯುಟಿ ಹಾಗೂ ಬೋನಸ್ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯಲಿವೆ. ಕಳೆದ ನಾಲ್ಕು ದಶಕಗಳಿಂದ ಐಎನ್‌ಟಿಯುಸಿ ಮತ್ತು ಎಐಟಿಯುಸಿಗೆ ಸೇರಿದ ಕಾರ್ಮಿಕ ಸಂಘಟನೆಗಳು ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‌ ಜತೆ ವೇತನ ಒಪ್ಪಂದಗಳನ್ನು ಮಾಡಿಕೊಂಡು ಬರುತ್ತಿವೆ ಎಂದು ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

### ಹೊಸ ಇಪಿಎಫ್ ನಿಯಮಗಳಿಗೆ ವಿರೋಧ

ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್‌ಟಿಯುಸಿ ಪ್ರಧಾನ ಕಾರ್ಯದರ್ಶಿ ವಿ. ಮಾಣಿಕ್ಯ, ತೋಟದ ಕಾರ್ಮಿಕರು ಕಡಿಮೆ ದಿನಗೂಲಿ, ಉದ್ಯೋಗದ ಅನಿಶ್ಚಿತತೆ, ಮಕ್ಕಳ ಶಿಕ್ಷಣ ಹಾಗೂ ವೈದ್ಯಕೀಯ ವೆಚ್ಚ ಸೇರಿದಂತೆ ಹಲವು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭವಿಷ್ಯ ನಿಧಿಯ ಹಣವು ಕಾರ್ಮಿಕರ ಪಾಲಿಗೆ ಪ್ರಮುಖ ಸಾಮಾಜಿಕ ಭದ್ರತೆಯಾಗಿದ್ದು, ತುರ್ತು ಅಗತ್ಯಗಳಿಗೆ ಅದನ್ನು ಬಳಸಿಕೊಳ್ಳಲು ಅನಗತ್ಯ ನಿರ್ಬಂಧ ವಿಧಿಸುವುದು ಸರಿಯಲ್ಲ ಎಂದರು.

ಪಿಎಫ್ ಮುಂಗಡ ಪಡೆಯುವಾಗ ಒಟ್ಟು ಮೊತ್ತದ ಶೇ.25ರಷ್ಟು ಹಣವನ್ನು ಖಾತೆಯಲ್ಲೇ ಉಳಿಸಿಕೊಳ್ಳಬೇಕೆಂಬ ಕಡ್ಡಾಯ ನಿಯಮದಿಂದ ಪ್ಲಾಂಟೇಷನ್ ಕಾರ್ಮಿಕರಿಗೆ ವಿನಾಯಿತಿ ನೀಡಬೇಕು. ವೈದ್ಯಕೀಯ ಚಿಕಿತ್ಸೆ, ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ತುರ್ತು ಅಗತ್ಯಗಳಿಗಾಗಿ ಅರ್ಹ ಮೊತ್ತವನ್ನು ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅದೇ ರೀತಿ, ಉದ್ಯೋಗ ಕಳೆದುಕೊಂಡ ಅಥವಾ ಕೆಲಸ ತೊರೆದ ಕಾರ್ಮಿಕರು ಪೂರ್ಣ ಪಿಎಫ್ ಸೆಟಲ್ಮೆಂಟ್ ಪಡೆಯಲು 12 ತಿಂಗಳವರೆಗೆ ಕಾಯಬೇಕೆಂಬ ನಿಯಮದಿಂದಲೂ ವಿನಾಯಿತಿ ನೀಡಬೇಕು. ಉದ್ಯೋಗವಿಲ್ಲದ ಅವಧಿಯಲ್ಲಿ ಜೀವನ ನಿರ್ವಹಣೆಗೆ ಸಂಕಷ್ಟ ಎದುರಿಸುವ ಕಾರ್ಮಿಕರು ತಮ್ಮದೇ ಹಣಕ್ಕಾಗಿ ದೀರ್ಘಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.

### ಬೇಡಿಕೆ ಈಡೇರದಿದ್ದರೆ ಹೋರಾಟದ ಎಚ್ಚರಿಕೆ

ಕೇಂದ್ರ ಸರ್ಕಾರ ತಕ್ಷಣವೇ ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಪರಿಗಣಿಸಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ಲಾಂಟೇಷನ್ ವಲಯದಾದ್ಯಂತ ಹಂತ ಹಂತವಾಗಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಕಾರ್ಮಿಕರ ನ್ಯಾಯಯುತ ಬೇಡಿಕೆಗಳಿಗೆ ವ್ಯಾಪಕ ಪ್ರಚಾರ ನೀಡಿ, ಸರ್ಕಾರದ ಗಮನ ಸೆಳೆಯಲು ಮಾಧ್ಯಮಗಳ ಸಹಕಾರವನ್ನೂ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರಾದ ರಾಮಚಂದ್ರ ಒಡೆಯರ್, ಎ.ಪಿ. ಸಲ್ವಂ, ಗೋವಿಂದನ್, ಎಂ.ಸಿ. ಶಿವಾನಂದ ಸ್ವಾಮಿ ಹಾಗೂ ಸಿ. ಧರ್ಮರಾಜ್ ಉಪಸ್ಥಿತರಿದ್ದರು.

17% wage hike for plantation workers

Share

Leave a comment

Leave a Reply

Your email address will not be published. Required fields are marked *

Don't Miss

ಆಶಾ ಕಾರ್ಯಕರ್ತೆಯರ ಕನಿಷ್ಠ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಕನಿಷ್ಠ ಗೌರವಧನವನ್ನು ₹10 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಿಸಬೇಕು. ಅವರ ಸೇವೆಗೆ ತಕ್ಕ ಗೌರವ, ಆರ್ಥಿಕ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ವಿಧಾನಮಂಡಲದಲ್ಲಿ...

ಘನತ್ಯಾಜ್ಯ ನಿರ್ವಹಣೆಗೆ ಕಟ್ಟುನಿಟ್ಟಿನ ಉಪನಿಯಮ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ನಗರ ಸ್ಥಳೀಯ ಸಂಸ್ಥೆಗಳಿಗೆ ಘನತ್ಯಾಜ್ಯ ನಿರ್ವಹಣೆ ಎನ್ನುವುದು ಅತ್ಯಂತ ತುರ್ತು ಹಾಗೂ ಪ್ರಮುಖ ಆದ್ಯತೆಯ ವಿಷಯವಾಗಿದ್ದು, ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತಿಯೊಂದು ಸಂಸ್ಥೆಯೂ ಕಟ್ಟುನಿಟ್ಟಿನ ಉಪನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು...

Related Articles

ಸಮಾನ ಆಚರಣಾ ಸಂಹಿತೆ, ಸಂಸ್ಕಾರ ಶಿಕ್ಷಣ ಇಂದಿನ ಅನಿವಾರ್ಯತೆ

*ಶೃಂಗೇರಿ:* ಭಾರತೀಯ ಮೂಲದ ಧಾರ್ಮಿಕ ಪರಂಪರೆಗಳಲ್ಲಿರುವ ಸಾಮಾನ್ಯ ಮೌಲ್ಯಗಳನ್ನು ಆಧರಿಸಿ ಸಮಾನ ಆಚರಣೆ ಸಂಹಿತೆ ಹಾಗೂ...

ಶಿಕ್ಷಣ ವಂಚಿತರು ಮುಂದೆ ಬರಲು ಸಂವಿಧಾನ ಅವಕಾಶ

ತರೀಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂದುಳಿದವರು, ಶಿಕ್ಷಣ ವಂಚಿತರು ಮುಂದೆ ಬರಲು ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿರುವ...

ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

ಚಿಕ್ಕಮಗಳೂರು: ಬಡವರು ತಮ್ಮ ಜೇಬಿನ ಹಣವನ್ನು ಖಾಸಗಿ ಆಸ್ಪತ್ರೆಗಳಿಗೆ ಸುರಿಯಬಾರದು ಎಂಬ ಉನ್ನತ ಉದ್ದೇಶದಿಂದ ಸರ್ಕಾರ...

ಎನ್‌ಸಿಡಿ ತಪಾಸಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ರಾಷ್ಟ್ರಮಟ್ಟದ ಗೌರವ

ಚಿಕ್ಕಮಗಳೂರು: ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡಿರುವ ಎನ್‌ಸಿಡಿ (ಸಾಂಕ್ರಾಮಿಕವಲ್ಲದ ಕಾಯಿಲೆಗಳ) ತಪಾಸಣಾ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ...