Home namma chikmagalur chikamagalur ಅ.27ರಂದು ಅರಣ್ಯ ಭವನ ಸಂಕೀರ್ಣ ಲೋಕಾರ್ಪಣೆ
chikamagalurHomeLatest Newsnamma chikmagalur

ಅ.27ರಂದು ಅರಣ್ಯ ಭವನ ಸಂಕೀರ್ಣ ಲೋಕಾರ್ಪಣೆ

Share
Share

ಚಿಕ್ಕಮಗಳೂರು: ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅರಣ್ಯ ಭವನ ಸಂಕೀರ್ಣ ಅ.೨೭ರಂದು ಲೋಕಾರ್ಪಣೆಗೊಳ್ಳಲಿದ್ದು, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಉದ್ಘಾಟಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾನುವಾರ ಸಂಕೀರ್ಣಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರು, ಅರಣ್ಯ ಭವನ ಸಂಕೀರ್ಣ ನಿರ್ಮಾಣಕ್ಕೆ ೨೦೨೨ರಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಅಕ್ಟೋಬರ್ ೨೯, ೨೦೨೨ರಂದು ಟೆಂಡರ್ ಪ್ರಕ್ರಿಯೆ ಮತ್ತು ತಾಂತ್ರಿಕ ಅನುಮೋದನೆ ಪೂರ್ಣಗೊಂಡಿತ್ತು. ೨೦೨೩ರ ಅಕ್ಟೋಬರ್ ೨೦ರಂದು ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಎರಡು ವರ್ಷಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿತ್ತು ಎಂದರು.

ಆರಂಭದಲ್ಲಿ ಅನುದಾನದ ಕೊರತೆಯಿಂದ ಕಾಮಗಾರಿ ಪ್ರಗತಿಗೆ ಅಡ್ಡಿಯಾಗಿತ್ತು. ಬಳಿಕ ಅರಣ್ಯ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಹಕಾರದಿಂದ ಹಂತ ಹಂತವಾಗಿ ಅನುದಾನ ಬಿಡುಗಡೆಯಾಗಿ ಕಟ್ಟಡ ನಿರ್ಮಾಣ ಪೂರ್ಣಗೊಂಡಿದೆ ಎಂದು ಹೇಳಿದರು.

೨೦೨೩-೨೪ನೇ ಸಾಲಿನಲ್ಲಿ ೯೩.೧೯ ಲಕ್ಷ ಹಾಗೂ ೨೦೨೪-೨೫ನೇ ಸಾಲಿನಲ್ಲಿ ೫೩ ಲಕ್ಷ ಬಿಡುಗಡೆ ಮಾಡಲಾಗಿತ್ತು. ನಂತರ ೨೦೨೫-೨೬ನೇ ಸಾಲಿನಲ್ಲಿ ೪೫೩ ಲಕ್ಷ ಮತ್ತು ೨೦೨೬-೨೭ನೇ ಸಾಲಿನಲ್ಲಿ ೩೦೮ ಲಕ್ಷ ಬಿಡುಗಡೆ ಮಾಡಲಾಗಿದೆ ಎಂದ ಶಾಸಕರು, ಒಟ್ಟಾರೆ ೯೦೮ ಲಕ್ಷ ಜಿಎಸ್‌ಟಿ ಸೇರಿದಂತೆ ಅನುದಾನ ಬಿಡುಗಡೆಯಾಗಿದ್ದು, ಜಿಎಸ್‌ಟಿ ಹೊರತುಪಡಿಸಿ ಕಾಮಗಾರಿಯ ಅಂದಾಜು ವೆಚ್ಚ ೭೪೯.೪೯ ಲಕ್ಷವಾಗಿದೆ ಎಂದು ತಿಳಿಸಿದರು.

ಒಂದೇ ಸೂರಿನಡಿ ಅರಣ್ಯ ಇಲಾಖೆಯ ಕಚೇರಿಗಳು ನಗರದಲ್ಲಿ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದ ಅರಣ್ಯ ಇಲಾಖೆಯ ಕಚೇರಿಗಳನ್ನು ಒಂದೇ ಸಂಕೀರ್ಣದಡಿ ತರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ವಿವಿಧ ಅಧಿಕಾರಿಗಳನ್ನು ಭೇಟಿಯಾಗಲು ಬೇರೆ ಬೇರೆ ಸ್ಥಳಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಲಿದ್ದು, ಅರಣ್ಯ ಇಲಾಖೆಗೆ ಸಂಬಂಧಿಸಿದ ಸೇವೆಗಳನ್ನು ಒಂದೇ ಸ್ಥಳದಲ್ಲಿ ಪಡೆಯಲು ಸಾಧ್ಯವಾಗಲಿದೆ ಎಂದರು.

ಕಟ್ಟಡದ ನಿರ್ಮಾಣ ಕಾರ್ಯ ಉತ್ತಮ ಗುಣಮಟ್ಟದಲ್ಲಿ ಮೂಡಿಬಂದಿದ್ದು, ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಮತ್ತೊಂದು ಉತ್ತಮ ಕಟ್ಟಡ ಸೇರ್ಪಡೆಯಾಗಿದೆ ಎಂದು ಶಾಸಕ ತಮ್ಮಯ್ಯ ಸಂತಸ ವ್ಯಕ್ತಪಡಿಸಿದರು.

ಅ.೨೭ರಂದು ಉದ್ಘಾಟನಾ ಕಾರ್ಯಕ್ರಮದ ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಅ.೨೮ರಿಂದ ನೂತನ ಸಂಕೀರ್ಣದ ಕಚೇರಿಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ತಿಳಿಸಿದರು.

ಕಟ್ಟಡ ಪರಿಶೀಲನೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ, ಸಿಡಿಎ ಅಧ್ಯಕ್ಷ ಮಂಜೇಗೌಡ, ಸಿಸಿಎಫ್ ಯಶ್ ಪಾಲ್ ಕ್ಷೀರಸಾಗರ್, ಭದ್ರಾ ಹುಲಿ ಸಂರಕ್ಷಿತಾ ಪ್ರದೇಶದ ನಿರ್ದೇಶಕ ಪುಲಕಿತ್ ಮೀನಾ, ಡಿಸಿಎಫ್ ಕೆ.ಟಿ. ಬೋರಯ್ಯ, ಸಾಮಾಜಿಕ ಅರಣ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸಿ. ಆನಂದ್, ಎಸಿಎಫ್ ಚರಣ್ ಚಂಗಪ್ಪ, ಆರ್‌ಎಫ್‌ಓ ಹರೀಶ್, ರಜಾಕ್ ನಡಪ್, ದೀಪಕ್, ಕಾಂಗ್ರೇಸ್ ಪಕ್ಷದ ಮುಖಂಡರಾದ ಪ್ರವೀಣ್ ಬೆಟಗೆರೆ, ಮಲ್ಲೇಶ್ ಸ್ವಾಮಿ, ಶಿವಕುಮಾರ್ ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಪಂಚಾಯಿತಿ ಮೀಸಲು ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ಸುದ್ದಿ !

ಚಿಕ್ಕಮಗಳೂರು:, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಗೆ ಮೀಸಲಾತಿ ನಿಗದಿ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಶಾಸಕರುಗಳ ಮೂಗಿನ ನೇರಕ್ಕೆ ಮೀಸಲಾತಿ ಪ್ರಕಟಿಸಿರುವುದು ಹಗಲು ಹೊತ್ತು ಎಲ್ಲರೂ ನೋಡುತ್ತಿರುವಾಗ ಕದ್ದು ಹಾಲು ಕುಡಿದಂತೆ...

ಕಡೂರು ರೈಲ್ವೆ ನಿಲ್ದಾಣದಲ್ಲಿ ಕೈಕೊಟ್ಟ ಡಿಜಿಟಲ್ ಪಾವತಿ ವ್ಯವಸ್ಥೆ

ಚಿಕ್ಕಮಗಳೂರು: ಕಡೂರು ರೈಲ್ವೆ ನಿಲ್ದಾಣದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಶುಕ್ರವಾರ ಪ್ರಯಾಣಿಕರು ತೊಂದರೆ ಅನುಭವಿಸಿದರು. ಸರ್ವರ್ ಸಮಸ್ಯೆಯಿಂದ ಡಿಜಿಟಲ್ ಪಾವತಿ ಸ್ಥಗಿತಗೊಂಡು ಕೈಯಲ್ಲಿ ಹಣವಿಲ್ಲದ ಪ್ರಯಾಣಿಕರು...

Related Articles

ವಡ್ಡರಹಳ್ಳಿ-ಕೆ.ಬಿ. ಹಾಳ್ ಕೆರೆಗಳಿಗೆ ಗಂಗೆ ಪೂಜೆ

ಚಿಕ್ಕಮಗಳೂರು: ಬರಗಾಲದ ನಡುವೆಯೂ ಎತ್ತಿನಹೊಳೆ ಯೋಜನೆಯ ನೀರಿನಿಂದ ಕೆ.ಬಿ. ಹಾಳ್ (ಕುರುಬರ ಬೂದಿಹಾಳ್) ಸೇರಿದಂತೆ ಸುತ್ತಮುತ್ತಲಿನ...

ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಹಲವರು...

ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಹಲವರಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು, ಅಜ್ಜಂಪುರ, ಬೀರೂರು ಹಾಗೂ ಪಂಚನಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಅಪಘಾತ...

ಸಮಾನ ಆಚರಣಾ ಸಂಹಿತೆ, ಸಂಸ್ಕಾರ ಶಿಕ್ಷಣ ಇಂದಿನ ಅನಿವಾರ್ಯತೆ

*ಶೃಂಗೇರಿ:* ಭಾರತೀಯ ಮೂಲದ ಧಾರ್ಮಿಕ ಪರಂಪರೆಗಳಲ್ಲಿರುವ ಸಾಮಾನ್ಯ ಮೌಲ್ಯಗಳನ್ನು ಆಧರಿಸಿ ಸಮಾನ ಆಚರಣೆ ಸಂಹಿತೆ ಹಾಗೂ...